1:44 AM Monday22 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ನೆರೆ ಹಾವಳಿಗೆ ಕೇಂದ್ರದ ಅನುದಾನ ಕೇಳಲು ರಾಜ್ಯ ಬಿಜೆಪಿಗೆ ದಮ್ಮು ಇಲ್ಲ; ಪ್ರತಿಪಕ್ಷದ ಉಪ ನಾಯಕ ಖಾದರ್ ಕಿಡಿ

06/08/2022, 20:40

ಮಂಗಳೂರು(reporterkarnataka.com): ರಾಜ್ಯದಲ್ಲಿ ಜನರು ಅತಿವೃಷ್ಠಿ ಹಾಗೂ ನೆರೆ ಹಾವಳಿಯಿಂದ ತತ್ತರಿಸಿ ಹೋಗಿದ್ದಾರೆ. ಆದರೆ ರಾಜ್ಯ ಸರಕಾರದ ಬಳಿ ಈಗ ಅತಿವೃಷ್ಟಿಗೆ ಯಾವುದೇ ಯೋಜನೆಗಳಿಲ್ಲ. ಹಾಗೇ ಕೇಂದ್ರದಿಂದ ಅನುದಾನ ಕೇಳುವ ಧೈರ್ಯವೂ ಇವರಿಗಿಲ್ಲ.

ಇದರಿಂದ ಸಂತ್ರಸ್ತರು ಅನಾಥರಾಗಿದ್ದಾರೆ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಹೇಳಿದರು.

ನಗರದಲ್ಲಿ ಶನಿವಾರ ಮಾಧ್ಯಮ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಅತಿವೃಷ್ಠಿ ಹಾಗೂ ನೆರೆ ಹಾವಳಿಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಆದರೆ 25 ಮಂದಿ ಸಂಸದರು ಮತ್ತು ರಾಜ್ಯ ಸರ್ಕಾರ ಗೃಹ ಸಚಿವರ ಬಳಿ ಎನ್‌ಡಿಆರ್‌ಫ್ ಅನುದಾನ ಯಾಕೆ ಕೇಳುತ್ತಿಲ್ಲ ಎಂದು ಪ್ರಶ್ನಿಸಿದರು.

ಕೇಂದ್ರ ಗೃಹ ಸಚಿವರು ಮೊನ್ನೆ ಬೆಂಗಳೂರಿಗೆ ಬಂದಾಗ ಅವರ ಬಳಿ ಪಕ್ಷದ ಬಗ್ಗೆ ಮಾತನಾಡುತ್ತಾರೆ ಹೊರತು ಎನ್‌ಡಿಆರ್‌ಎಫ್ ಅನುದಾನ ಕೇಳಲು ಇವರಿಗೆ ಬಾಯಿ ಬರುವುದಿಲ್ಲ. ಇವರು ಜನರನ್ನು ಉಳಿಸುವ ಬದಲು ಪಕ್ಷ ಉಳಿಸುವ ಬಗ್ಗೆ ಗೃಹ ಸಚಿವರಲ್ಲಿ ಮಾತನಾಡುತ್ತಾರೆ ಎಂದು ಖಾದರ್ ಕಿಡಿ ಕಾರಿದರು.

ಬಿಜೆಪಿಯವರಿಗೆ ಕೇಂದ್ರದ ಬಳಿ ಅನುದಾನ ಕೇಳಲು ಮುಜುಗರ ಮತ್ತು ಭಯ ಆಗೋದಾದರೆ ಸರ್ವಪಕ್ಷದ ನಿಯೋಗ ಕರೆದುಕೊಂಡು ಹೋಗಲಿ. ರಾಜ್ಯದ ಪರವಾಗಿ ನಾವು ಮಾತನಾಡುತ್ತೇವೆ. ಸುಳ್ಯ ಸಂಪಾಜೆಗೆ ವಿಶೇಷ ತಂಡ ಕಳುಹಿಸಿ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಶಾಂತಿ- ಸಾಮರಸ್ಯಕ್ಕೆ ಜಿಲ್ಲಾಡಳಿತದ ಯಾವುದೇ ತೀರ್ಮಾನಕ್ಕೆ ನಾವು ಬದ್ಧ. ಆದರೆ ಈಗ 3 ಪರ್ಸೆಂಟ್ ಸಮಾಜಘಾತುಕರಿಗೆ ಹೆದರಿ 97 ಶೇಕಡಾ ಜನರಿಗೆ ಕಷ್ಟ ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು