11:03 AM Saturday3 - January 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್… ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ… ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಇತ್ತೀಚಿನ ಸುದ್ದಿ

ನೆರೆ, ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ: ಸಂತ್ರಸ್ತರ ಜತೆ ಮಾತುಕತೆ

31/07/2024, 22:19

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಅಧಿಕಾರಿಗಳೊಂದಿಗೆ ಜಿಲ್ಲೆಯ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.


ಜಿಲ್ಲಾಧಿಕಾರಿಗಳು ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಿದರು.
ಸ್ಥಳೀಯ ಸಾರ್ವಜನಿಕರೊಂದಿಗೆ ಅಹವಾಲು ಆಲಿಸಿದ ಅವರು, ನೆರೆ ಪೀಡಿತ ಪ್ರದೇಶಗಳಲ್ಲಿ ಹಾಗೂ ಸಂಭಾವ್ಯ ನೆರೆ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನೆರೆ ಪ್ರದೇಶಗಳ ನಿವಾಸಿಗಳ ಸ್ಥಳಾಂತರ ಮತ್ತು ಕಾಳಜಿ ಕೇಂದ್ರಗಳ ಸ್ಥಾಪನೆಯ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಕಾಳಜಿ ಕೇಂದ್ರಗಳಲ್ಲಿ ತಂಗಿರುವ ನಾಗರಿಕರೊಂದಿಗೆ ಸಮಾಲೋಚಿಸಿ, ಧೈಯ೯ ತುಂಬಿದ ಜಿಲ್ಲಾಧಿಕಾರಿಗಳು, ಸಹಜ ಪರಿಸ್ಥಿತಿ ಬರುವವರೆಗೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ತಿಳಿಸಿದರು.
ಹರೇಕಳ, ಬಂಟ್ವಾಳ, ಆಲಡ್ಕ, ಉಪ್ಪಿನಂಗಡಿ ಮತ್ತಿತರ ಕಡೆಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ, ನೆರೆ ಪರಿಸ್ಥಿತಿ ವೀಕ್ಷಿಸಿದರು.
ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ್, ಬಂಟ್ವಾಳ ತಹಶೀಲ್ದಾರ್ ಅಚ೯ನಾ ಭಟ್, ಪುತ್ತೂರು ತಹಶೀಲ್ದಾರ್ ಪುರಂದರ ಹೆಗ್ಢೆ, ಮತ್ತಿತರರು ಈ ಸಂದಭ೯ದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು