7:22 AM Wednesday27 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ನೆರೆ ಪರಿಹಾರ ನಿರಾಕರಿಸಿದ ಅದ್ಯಪಾಡಿ ರೈತರ ಮನವೊಲಿಸಿದ ಜಿಲ್ಲಾ ಸಚಿವ ದಿನೇಶ್ ಗುಂಡೂರಾವ್

02/08/2024, 21:24

ಮಂಗಳೂರು(reporterkarnataka.com): ನೆರೆ ಪರಿಹಾರ ತೆಗೆದುಕೊಳ್ಳುವಂತೆ ಆದ್ಯಪಾಡಿ ನಿವಾಸಿಗರಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.
ನೆರೆ ಪರಿಹಾರಕ್ಕೂ ಶಾಶ್ವತ ಪರಿಹಾರಕ್ಕೂ ಸಂಬಂಧವಿಲ್ಲ.
ನೆರೆ ಪರಿಹಾರ ಪಡೆದರೆ ಶಾಶ್ವತ ಪರಿಹಾರ ಆಗಲ್ಲ ಎಂಬ ಭಾವನೆ ಬೇಡ.‌ ಒಂದಕ್ಕೂಂದು ಲಿಂಕ್ ಮಾಡುವ ಅಗತ್ಯವಿಲ್ಲ ಎಂದು ಸಚಿವರು ನುಡಿದರು.
ಭತ್ತದ ಗದ್ದೆ, ತೋಟ ಮುಳುಗಡೆಯಿಂದ ನಷ್ಟ ಅನುಭವಿಸಿದ್ದೀರಾ. ಅದಕ್ಕೆ ಸರ್ಕಾರದಿಂದ ಸಿಗುವ ನೆರೆ ಪರಿಹರವನ್ನ ಪಡೆಯಿರಿ. ಪಲ್ಗಣಿ ನದಿಯಿಂದಾಗುವ ನೆರೆ ಹಾವಳಿ ತಡೆಯುವ ಶಾಶ್ವತ ಪರಿಹಾರ ಒದಸುವ ಜವಾಬ್ದಾರಿ ನಮಗೆ ಬಿಡಿ ಎಂದು ರೈತರಲ್ಲಿ
ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.
ಸಚಿವರ ಮನವಿಗೆ ಒಪ್ಪಿಗೆ ಸೂಚಿಸಿ ಪರಿಹಾರ ಪಡೆಯುವುದಾಗಿ ಸ್ಥಳೀಯ ನಿವಾಸಿಗಳು ತಿಳಿಸಿದರು.
ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಕಳೆದ 11 ವರ್ಷದಿಂದ ನೆರೆ ಪರಿಹಾರವನ್ನ ಅದ್ಯಪಾಡಿ ನಿವಾಸಿಗರು ತಿರಸ್ಕರಿಸುತ್ತಾ ಬಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು