7:16 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ನೆರೆಪೀಡಿತ ಕಂದಾವರ ಗ್ರಾಮಕ್ಕೆ ಎನ್ ಡಿಆರ್ ಎಫ್ ತಂಡ: ಶಾಸಕ ಡಾ. ಭರತ್ ಶೆಟ್ಟಿ ಸಾಥ್; ಸಂತ್ರಸ್ತರ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

01/08/2024, 21:25

ಸುರತ್ಕಲ್(reporterkarnataka.com): ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ನೆರೆಪೀಡಿತ ಕಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆದ್ಯಪಾಡಿಯ ಕುದ್ರು ಮತ್ತು ದೇವಂಗಲ ಗುಡ್ಡೆ ಭಾಗದಲ್ಲಿ ತೊಂದರೆಗೆ ಸಿಲುಕಿದ್ದ ಸುಮಾರು 25 ಕುಟುಂಬ ಹಾಗೂ 15 ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
ಶಾಸಕ ಡಾ.ಭರತ್ ಶೆಟ್ಟಿ ವೈ. ನೇತೃತ್ವದಲ್ಲಿ ಎನ್ ಡಿ ಆರ್ ಎಫ್ ತಂಡವು ಸ್ಥಳಕ್ಕೆ ಧಾವಿಸಿ ಸುರಕ್ಷತೆಯ ಕ್ರಮ ಕೈಗೊಂಡಿದೆ.
ಪಂಚಾಯತ್ ವತಿಯಿಂದ ಎಲ್ಲಾ ತಕ್ಷಣದ ವ್ಯವಸ್ಥೆ ಮಾಡಲಾಗುತ್ತಿದೆ.
ಡಾ.ಭರತ್ ಶೆಟ್ಟಿ ವೈ ಅವರು ದೋಣಿ ಮೂಲಕವೇ ಸಂಚರಿಸಿ ನದಿ ಒಳಹರಿವಿನ ಪ್ರಮಾಣ ಹೆಚ್ಚುತ್ತಿದ್ದು, ಸ್ಥಳಾಂತರ ಮಾಡುವಂತೆ ಮನೆಯವರಲ್ಲಿ ಮನವಿ ಮಾಡಿದರು.


ಮನೆಯಲ್ಲಿನ ಹಸು, ಪ್ರಾಣಿಗಳನ್ನು ತೊರೆದು ಹೋಗಲು ಹಲವು ಮಂದಿ ನಿರಾಕರಿಸಿದರಾದರೂ‌, ನದಿ ನೀರಿನ ಪ್ರಮಾಣ ಹೆಚ್ಚುತ್ತಿರುವ ಬಗ್ಗೆ ಎಚ್ಚರಿಕೆ ನೀಡಿ ಮನವೊಲಿಸಲಾಯಿತು.
ಜಿಲ್ಲಾ ಪಂಚಾಯತ್ ವತಿಯಿಂದ ದನಕರುಗಳ ಸುರಕ್ಷತೆಗೂ ಕ್ರಮ ಕೈಗೊಳ್ಳಲಾಯಿತು.
ಸಹಾಯಕ ಆಯುಕ್ತ ಹರ್ಷವರ್ಧನ, ತಹಶೀಲ್ದಾರ್, ಕಂದಾಯ, ಗ್ರಾಮ ಪಂಚಾಯತ್ ಅಧಿಕಾರಿಗಳು ಶಾಸಕರ ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು