6:41 AM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ನೆರೆ ಸಂತ್ರಸ್ತರಿಗೆ ಸರಕಾರ ಪರಿಹಾರದ ನೀಡದಿದ್ದರೆ, ನನ್ನ ಜೇಬಿನಿಂದ ಹಣ ನೀಡುತ್ತೇನೆ: ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ 

01/09/2021, 11:16

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಳೆದ ತಿಂಗಳು ಚಿಕ್ಕೋಡಿ ಉಪವಿಭಾಗದ ಕ್ಷೇತ್ರವಾದ ಕಾಗವಾಡ ತಾಲೂಕಿನಲ್ಲಿ ಕೃಷ್ಣಾ ನದಿ ಪ್ರವಾಹದಿಂದ ನದಿ ಪಾತ್ರದ ಜನರಿಗೆ ಬಾರಿ ಪ್ರಮಾಣ ಹಾನಿ ಸಂಭವಿಸಿದ್ದು, ಸರ್ಕಾರ ಪರಿಹಾರ ವಿತರಣೆ ಮಾಡದೆ ಹೋದರೆ ನನ್ನ ವೈಯಕ್ತಿಕ ಹಣವನ್ನು ನೆರೆ ಸಂತ್ರಸ್ತರಿಗೆ ವಿತರಣೆ ಮಾಡುತ್ತೇನೆ ಎಂದು ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಹೇಳಿದರು.

ಅವರು ಕಾಗವಾಡ ಕಚೇರಿಯಲ್ಲಿ ಮಾದ್ಯಮ ಜತೆ ಮಾತನಾಡಿ, ಈಗಾಗಲೇ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗಾವಿಗೆ ಬೇಟಿ ನೀಡಿದ ಸಂದರ್ಭದಲ್ಲಿ ಅಧಿಕಾರಿಗಳಿಗೆ ಆದೇಶ ಮಾಡಿದ್ದಾರೆ. ಆದರೆ ಕೆಲವು ಕಾನೂನಾತ್ಮಕ ತೊಂದರೆಯಿಂದಾಗಿ ಕೆಲವು ನೆರೆ ಸಂತ್ರಸ್ತರಿಗೆ ತುರ್ತಾಗಿ ಹತ್ತು ಸಾವಿರ ರೂಪಾಯಿ ಧನಸಹಾಯ ಸಿಕ್ಕಿಲ್ಲ, ಇದರಿಂದ ಕೆಲವು ಗ್ರಾಮದಲ್ಲಿ ಪ್ರತಿಭಟನೆ ಮುಂದಾಗಿದ್ದು ಅವರಿಗೆ ಸರ್ಕಾರದಿಂದ ಪರಿಹಾರ ಧನ ಸಹಾಯ ಮಾಡಲಾಗುತ್ತದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು