5:48 PM Monday16 - February 2026
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ

ಇತ್ತೀಚಿನ ಸುದ್ದಿ

ನೆರೆ ಸಂತ್ರಸ್ತರೊಂದಿಗೆ ಸುವರ್ಣ ಸೌಧಕ್ಕೆ ಮುತ್ತಿಗೆ: ಸರಕಾರಕ್ಕೆ ಕಾಂಗ್ರೆಸ್ ಎಚ್ಚರಿಕೆ

02/12/2022, 10:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕಿನ ಕೃಷ್ಣಾ ನದಿ ನೆರೆ ಸಂತ್ರಸ್ತರಿಗೆ ಡಿ.19ರ ಒಳಗಾಗಿ ಹಕ್ಕುಪತ್ರ ನೀಡದಿದ್ದರೆ ನೆರೆ ಸಂತ್ರಸ್ತರೊಂದಿಗೆ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವದು ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ವಾಸವಿರುವ ನಾಗನೂರ ಪಿ.ಕೆ. ಗ್ರಾಮದ 53 ಕುಟುಂಬಗಳಿಗೆ ಇಂದು ಸಂಜೆ ಆಹಾರ ಕಿಟ್ ವಿತರಿಸಿ ಮಾತನಾಡಿದ ಅವರು, ಕಳೆದ 18 ವರ್ಷಗಳಿಂದ ಮನೆ ಕಳೆದುಕೊಂಡು ನಿರ್ಗತಿಕರಾಗಿ ರಡ್ಡೇರಹಟ್ಟಿ ಗ್ರಾಮದಲ್ಲಿ ತಾತ್ಕಾಲಿಕ ಶೆಡ್ ಹೊಡೆದು ವಾಸವಿರುವ ಸಂತ್ರಸ್ತರಿಗೆ ಹಕ್ಕು ಪತ್ರ ವಿತರಣೆ ಮಾಡಿಲ್ಲ, ಮಳೆ ಬಂತೆಂದರೆ ಮಡ್ಡಿ ಬಸವಣ್ಣ ದೇವರ ಸಮುದಾಯ ಭವನದಲ್ಲಿ ಇವರ ವಾಸ ಅನಿವಾರ್ಯವಾಗಿದೆ. ಪಡಿತರ ಆಹಾರ ತರಲು ರಡ್ಡೇರಹಟ್ಟಿಯಿಂದ ನಾಗನೂರ ಪಿ.ಕೆ ಗ್ರಾಮಕ್ಕೆ ಸುಮಾರು 5 ಕಿಮೀ ದೂರ ಪ್ರಯಾಣಿಸಬೇಕು. 15 ವರ್ಷಗಳ ಕಾಲ ಶಾಸಕರಾಗಿ ಮಂತ್ರಿಗಳಾಗಿ ಉಪಮುಖ್ಯಮಂತ್ರಿ ಹುದ್ಧೆ ಅಲಂಕರಿಸಿದ ಲಕ್ಷ್ಮಣ ಸವದಿಯವರ ಸ್ವಗ್ರಾಮದ ಸಂತ್ರಸ್ತರ ಗತಿ ಈ ರೀತಿಯಾದರೆ ಉಳಿದವರ ಪಾಡೇನು? ಶಾಸಕ ಮಹೇಶ ಕುಮಠಳ್ಳಿ ಸಾವಿರಾರು ಕೋಟಿ ಅನುದಾನ ತಂದಿರುವದಾಗಿ ಹೇಳುತ್ತಿದ್ದು, ಅದು ಎಲ್ಲಿ ಹೋಯಿತು ಎಂದು ಪ್ರಶ್ನಿಸಿದರು.


ಇದೇ 19 ರೊಳಗೆ ನೆರೆ ಸಂತ್ರಸ್ತರಿಗೆ ಹಕ್ಕುಪತ್ರ ನೀಡಿ ಮನೆ ನಿರ್ಮಿಸಿಕೊಡಬೇಕು ಇಲ್ಲದಿದ್ದರೆ, ನಾಗನೂರ.ಪಿ.ಕೆ ಗ್ರಾಮದಿಂದ ಬೆಳಗಾವಿ ಸುವರ್ಣಸೌದವರೆಗೆ ಸಂತ್ರರೊಂದಿಗೆ ಪಾದಯಾತ್ರೆ ಕೈಗೊಳ್ಳಲಾಗುವದು ಎಂದರು.

ಜಿಲ್ಲಾ ಕಾಂಗ್ರೆಸ್ ಕಿಸಾನ್ ಫಟಕದ ಅಧ್ಯಕ್ಷ ಶಿವು ಗುಡ್ಡಾಪುರ ಮಾತನಾಡಿ, ಮನೆಗೆದ್ದು ಮಾರುಗೆದ್ದ ಎಂಬ ನಾಣ್ಣುಡಿ ಇದೆ ಸ್ವಂತ ಊರಿನ ಜನರಿಗೆ ನ್ಯಾಯ ಒದಗಿಸುವಲ್ಲಿ ಲಕ್ಷ್ಮಣ ಸವದಿ ವಿಫಲರಾಗಿದ್ದು ಅವರಲ್ಲಿ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತಿದೆ ಎಂದರು.

ಈ ವೇಳೆ ಮುಖಂಡರಾದ ಸುನೀಲ ಸಂಕ, ಸಿದ್ಧಾರ್ಥ ಶಿಂಗೆ, ರಾವಸಾಬ ಐಹೊಳೆ, ಶ್ರೀಕಾಂತ ಪೂಜಾರಿ, ಭೀಮಪ್ಪ ಯಕ್ಕುಂಡಿ, ರಮೇಶ ಪವಾರ, ಬಸವರಾಜ ಬುಟಾಳಿ, ಶಂಕರ ಮಗದುಮ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು