1:15 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ನಿರ್ಲಕ್ಷ್ಯ ಚಾಲನೆ, ಕರ್ಕಶ ಹಾರ್ನ್: ಖಾಸಗಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಣಖಲು

21/06/2023, 21:55

ಮಂಗಳೂರು(reporterkarnataka.com): ಮುಡಿಪುನಿಂದ ತೌಡಗೋಳಿ ಮಾರ್ಗವಾಗಿ ಮಂಗಳೂರು ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ಸಿನ ಚಾಲಕನ ನಿರ್ಲಕ್ಷ್ಯ ಚಾಲನೆ ಮತ್ತು ಕರ್ಕಶ ಹಾರ್ನ್ ಹಾಕಿದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ.

KA51AC7835 ನಂಬರಿನ ಗೋಪಾಲಕೃಷ್ಣ ಬಸ್ಸಿನ ಚಾಲಕ ತ್ಯಾಗರಾಜ ಎಂಬಾತ ಜೂನ್ 20ರಂದು ಮಧ್ಯಾಹ್ನ 12 ಗಂಟೆಗೆ ಮುಡಿಪು ಕಡೆಯಿಂದ ತೌಡಗೋಳಿ ಮಾರ್ಗವಾಗಿ ಮಂಗಳೂರು ಕಡೆಗೆ ದುಡುಕುತನ ಹಾಗೂ ನಿರ್ಲಕ್ಷ ತನದಿಂದ ಸಾರ್ವಜನಿಕ ರಸ್ತೆಯಲ್ಲಿ ಮಾನವ ಜೀವಕ್ಕೆ ಹಾನಿಯಾಗುವ ರೀತಿಯಲ್ಲಿ ಕರ್ಕಶ ಹಾರ್ನ್ ಹಾಕುತ್ತಾ ಬಸ್ಸನ್ನು ಚಲಾಯಿಸಿದ್ದರಿಂದ ಆತನ ಮೇಲೆ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಮಂಗಳೂರು ನಗರದೊಳಗೆ ಕೂಡ ಕರ್ಕಶ ಹಾರ್ನ್ ಮತ್ತು ನಿರ್ಲಕ್ಷ್ಯ ಚಾಲನೆಯ ಸಮಸ್ಯೆ ಕಾಡುತ್ತಿದೆ. ನಗರದೊಳಗೆ ಪ್ರವೇಶಿಸುತ್ತಿದ್ದಂತೆ ಖಾಸಗಿ ಸರ್ವಿಸ್ ಮತ್ತು ಸಿಟಿ ಬಸ್ ಗಳ ವೇಗ ತಗ್ಗಬೇಕಾಗಿದ್ದರೂ ಹೆಚ್ಚಿನ ಬಸ್ ಚಾಲಕರು ವೇಗವನ್ನು ಹೆಚ್ಚಿಸುತ್ತಾರೆ. ಅದಲ್ಲದೆ ಕರ್ಕಶ ಹಾರ್ನ್ ಗಳ ಹಾವಳಿ ವಿಪರೀತವಾಗಿದೆ. ದ್ವಿಚಕ್ರ ವಾಹನಗಳನ್ನು ಓವರ್ ಟೇಕ್ ಮಾಡುತ್ತಿದ್ದಂತೆ ಕರ್ಕಶ ಹಾರ್ನ್ ಒತ್ತುವ ಚಾಲಕರು ನಮ್ಮಲ್ಲಿ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಇದಕ್ಕೆ ಟ್ರಾಫಿಕ್ ಪೊಲೀಸರು ಕಡಿವಾಣ ಹಾಕುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು