10:22 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನೇತಾಜಿ ಜನ್ಮದಿನ: ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲದಿಂದ ರಕ್ತದಾನ ಶಿಬಿರ

23/01/2022, 15:03

ಮಂಗಳೂರು(reporterkarnataka.com): ಸಮಾಜ ಸೇವಾ ಸಂಘಟನೆಗಳಾಗಿರುವ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಹಾಗೂ ಬಿರುವೆರ್ ಕುಡ್ಲ ಆಶ್ರಯದಲ್ಲಿ

ಸ್ವಾತಂತ್ರ ಸೇನಾನಿ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆಯ ಪ್ರಯುಕ್ತ ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರ ಕೆನರಾ ಹೈಸ್ಕೂಲ್ ನ ಭುವನೇಂದ್ರ ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಮಾತನಾಡಿ, ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲ(ರಿ)

ನಿರಂತರ ರಕ್ತದಾನ ಶಿಬಿರ ಆಯೋಜಿಸಿ ಮಾದರಿ ಕೆಲಸ ಮಾಡುತ್ತಿದೆ. ಸಮಾನ ಮನಸ್ಕ ಯುವಕರ ತಂಡ  ಸಮಾಜ ಮುಖಿ ಕಾರ್ಯದಲ್ಲಿ ತೊಡಗಿಸಿ ಸಮಾಜ ಕಟ್ಟುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ನ  ನರೇಶ್ ಶೆಣೈ, ಹನುಮಂತ್ ಕಾಮತ್, ಬಿರುವೆರ್ ಕುಡ್ಲ(ರಿ) ಸ್ಥಾಪಕ ಅಧ್ಯಕ್ಷ

ಉದಯ್ ಪೂಜಾರಿ, ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ನರೇಶ್ ಪ್ರಭು, ಚೇತನ್ ಕಾಮತ್, ಬಿರುವೆರ್ ಕುಡ್ಲ(ರಿ) ಉಪಾಧ್ಯಕ್ಷ ರಾಕೇಶ್ ಸಾಲಿಯಾನ್ ಚಿಲಿಂಬಿ, ಕಿಶೋರ್ ಬಾಬು, ರಜತ್ ಕುಲಾಲ್,ಬಿರುವೆರ್ ಕುಡ್ಲ(ರಿ)ಅಶೋಕ ನಗರ ಸಂಚಾಲಕಿ ಸುಮಂಗಲ ಸಿ. ಕೋಟ್ಯಾನ್, ನೀರೀಕ್ಷಾ, ಅಶ್ವಿತಾ ಅಮೀನ್, ಕಾಳಿಚರಣ್ ನ ಅನಿಲ್ ಸುವರ್ಣ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು