ಇತ್ತೀಚಿನ ಸುದ್ದಿ
ನೇತ್ರಾವತಿ ಸೇತುವೆಯಲ್ಲಿ ಕಾರು-ಬೈಕ್ ಅಪಘಾತ: ನೆರವಿಗೆ ಧಾವಿಸಿದ ಪ್ರತಿಪಕ್ಷದ ಉಪ ನಾಯಕ ಖಾದರ್
15/01/2023, 18:36

ಮಂಗಳೂರು(reporterkarnataka.com): ತೊಕ್ಕೊಟ್ಟು ನೇತ್ರಾವತಿ ಸೇತುವೆಯಲ್ಲಿ ಭಾನುವಾರ ಸಂಭವಿಸಿದ ಕಾರು- ಬೈಕ್ ಅಪಘಾತದಲ್ಲಿ ಗಾಯಗೊಂಡವರ ನೆರವಿಗೆ ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಧಾವಿಸಿದ ಘಟನೆ ನಡೆದಿದೆ.
ಗಾಯಾಳುಗಳನ್ನು ತಮ್ಮದೇ ಕಾರಿನಲ್ಲಿ ಕೊಂಡೊಯ್ದು ಖಾದರ್ ಅವರು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಖಾದರ್ ಅವರು ಈ ಹಿಂದೆ ಬಹಳಷ್ಟು ಬಾರಿ ಗಾಯಾಳುಗಳನ್ನು ತನ್ನದೇ ಕಾರಿನಲ್ಲಿ ಸಾಗಿಸಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಜನ ಮೆಚ್ಚುಗೆ ಪಡೆದಿದ್ದಾರೆ.