6:45 PM Monday23 - November 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ಮುತ್ತಿಗೆಪುರ ಗ್ರಾಮದ ವಿಂಧನ್ ಮನೆ ಮೇಲೆ ಗುಂಡಿನ ದಾಳಿ: ಕೂದಲೆಳೆಯ… ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8… ಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಹೈಕಮಾಂಡ್ ತೀರ್ಮಾನಿಸಲಿದೆ: ಸಿಎಂ ಡಿ. ಕೆ. ಶಿವಕುಮಾರ್ ತಿಪಟೂರು | ಕೆಎಸ್​ಆರ್​ಟಿಸಿ ಬಸ್ ರೂಪದಲ್ಲಿ ಬಂದ ಮೃತ್ಯು: ಭೀಕರ ಅಪಘಾತದಲ್ಲಿ ಯುವಕರಿಬ್ಬರು…

ಇತ್ತೀಚಿನ ಸುದ್ದಿ

New Delhi | ಕನ್ನಡನಾಡಿನ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮನವರ 201ನೇ ವಿಜಯೋತ್ಸವ; ಜನ್ಮದಿನೋತ್ಸವ ಆಚರಣೆ

23/10/2025, 22:04

ನವದೆಹಲಿ(reporterkarnataka.com): ನವದೆಹಲಿಯ ಸಂಸತ್ ಆವರಣದ ಪ್ರೇರಣಾ ಸ್ಥಳದಲ್ಲಿ ತುಮಕೂರು ಲೋಕಸಭಾ ಸದಸ್ಯರು ಹಾಗೂ ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ. ಸೋಮಣ್ಣನವರ ನೇತೃತ್ವದಲ್ಲಿ ಇಂದು ಕನ್ನಡನಾಡಿನ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮನವರ 201ನೇ ವಿಜಯೋತ್ಸವ ಹಾಗೂ ಜನ್ಮದಿನೋತ್ಸವವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣ, ರಾಣಿ ಚೆನ್ನಮ್ಮನವರ ಪುತ್ಥಳಿಯನ್ನು ಸಂಸತ್ತಿನ ಆವರಣದಲ್ಲಿ 2007ರಲ್ಲಿ ಸ್ಥಾಪಿಸಲಾಗಿದೆ. ಕಳೆದ ವರ್ಷ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಬೆಂಬಲ ಮತ್ತು ಲೋಕಸಭಾ ಅಧ್ಯಕ್ಷ ಓಂ ಬಿರ್ಲಾ ಅವರ ಸಹಕಾರದಿಂದ 200ನೇ ರಾಣಿಚೆನ್ನಮ್ಮನವರ ವಿಜಯೋತ್ಸವ ಮತ್ತು ಜನ್ನದಿನೋತ್ಸವವನ್ನು ವಿಜ್ರಂಭಣೆಯಿಂದ ಆಚರಿಸಲಾಗಿತ್ತು.
ಅದೇ ರೀತಿ ಈ ವರ್ಷವೂ ಸಹ ರಾಣಿ ಚೆನ್ಮಮ್ಮನವರ 201ನೇ ವಿಜಯೋತ್ಸವ ಮತ್ತು ಜನ್ಮದಿನೋತ್ಸವ ಆಚರಣೆಯನ್ನು ಸಂಸತ್ತಿನ ಅವರಣದ ಪ್ರೇರಣಾ ಸ್ಥಳದಲ್ಲಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ವಿ. ಸೊಮಣ್ಣ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕದ ಸಂಸ್ಕೃತಿ, ಈ ದೇಶಕ್ಕೆ ಕೊಡುಗೆ ನೀಡಿದ ಕನ್ನಡದ ಮಹನೀಯರನ್ನು, ಸ್ವಾತಂತ್ರ ಹೋರಾಟಗಾರರನ್ನು, ವೀರವನಿತೆಯರನ್ನು ನೆನಪಿಸುವ ಮತ್ತು ಅವರನ್ನು ಗೌರವಿಸುವ ಕೆಲಸ ಮಾಡುವಲ್ಲಿ ಸದಾ ಸನ್ನದವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಪೂರಕವಾಗಿ 2025. ನೇ ಅಕ್ಟೋಬರ್ 24ರಂದು ದೆಹಲಿಯ ಸಿರಿಪೋರ್ಟ ಆಡಿಟೋರಿಯಂನಲ್ಲಿ ನಡೆಯಲಿರುವ ಕಿತ್ತೂರು ರಾಣಿ ಚೆನ್ನಮ್ಮನವರ 201ನೇ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ವೀರರಾಣಿ ಚೆನ್ಮಮ್ಮನವರ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದರು.
ಸ್ವಾತಂತ್ರ ಹೋರಾಟಗಾರ್ತಿ ರಾಣಿ ಚೆನ್ನಮ್ಮನವರ ಸಾಧನೆ ಮತ್ತು ಕಿತ್ತೂರಿನ ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವನ್ನು ಕರ್ನಾಟಕ ರಾಜ್ಯ ಸರ್ಕಾರ ಹೆಚ್ಚಿನ ಮುತುವರ್ಜಿಯಿಂದ ನಿರ್ವಹಿಸಬೇಕಾದ ಅವಶ್ಯಕತೆ ಇದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಗಳಿಗೆ ಪತ್ರ ಬರೆದು ಕಿತ್ತೂರು ಸಂಸ್ಥಾನದ ಕೋಟೆ ಕೊತ್ತಲೆಗಳಲ್ಲಿ ಸಮರ್ಪಕ ನಿರ್ವಹಣೆ ಇಲ್ಲದಿರುವುದನ್ನು ಸಾರ್ವಜನಿಕರು ಮನಗಂಡಿದ್ದು, ಈ ಬಗ್ಗೆ ಕಿತ್ತೂರು ಅಭಿವೃದ್ದಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರ ನೀಡಬೇಕಾಗಿದೆ. ಬೈಲಹೊಂಗಲದಲ್ಲಿರುವ ರಾಣಿ ಚೆನ್ಮಮ್ಮನವರ ಸಮಾಧಿಯನ್ನು ಅಭಿವೃದ್ಧಿಗೊಳಿಸಿ, ಅದನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಬೇಕು. ವೀರ ರಾಣಿ ಚೆನ್ಮಮ್ಮನವರ ಜೀವನ ಮತ್ತು ಸಾಧನೆ ಕುರಿತು ಭಾರತೀಯ ಎಲ್ಲಾ ಭಾಷೆಗಳಲ್ಲೂ ಪುಸ್ತಕವನ್ನು ಹೊರತರಬೇಕೆಂದು ಕೇಂದ್ರ ಸಚಿವ ವಿ. ಸೋಮಣ್ಣ ಮನವಿ ಮಾಡಿದ್ದಾರೆ.


ಈ ಸಂದರ್ಭದಲ್ಲಿ ಬೆಳಗಾವಿ ಸಂಸದರು ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ರಾಜ್ಯ ಸಭಾ ಸದಸ್ಯರಾದ ಸುಧಾಮೂರ್ತಿ, ಶ್ರೀ ಜಯಮೃತ್ಯುಂಜಯ ಸ್ವಾಮಿಗಳು, ಶ್ರೀ ವಚನಾನಂದ ಸ್ವಾಮಿಗಳು, ಜನಪ್ರತಿನಿಧಿಗಳು, ದೆಹಲಿ ಕನ್ನಡ ಸಂಘದ ಅಧ್ಯಕ್ಷರು, ದೆಹಲಿ ಕನ್ನಡಿಗರು, ದೆಹಲಿಯಲ್ಲಿನ ಕನ್ನಡ ಮಾಧ್ಯವ ಮಿತ್ರರುಗಳು ಭಾಗಿಯಾಗಿ ರಾಣಿ ಚೆನ್ನಮ್ಮನವರ ವಿಜಯೋತ್ಸವದ ಮತ್ತು ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಿದ ಲೋಕಸಭಾ ಸಚಿವಾಲಯ ಮತ್ತು ರೇಲ್ವೆ ಸಚಿವಾಲಯದ ಅಧಿಕಾರಿಗಳಿಗೆ ಮತ್ತು ಈ ಕಾರ್ಯಕ್ರಮದಲ್ಲಿ ಭಾಗಿಯಾದ ಎಲ್ಲಾ ದೆಹಲಿ ಕನ್ನಡಿಗರಿಗೆ ಅಭಿನಂದನೆಯನ್ನು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು