12:50 PM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

New Delhi | ಡಿಸಿಎಂ ಡಿಕೆಶಿ ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಏಕಾಏಕಿ ಟೇಕ್ ಆಫ್: ಆತಂಕ ಸೃಷ್ಟಿ

25/03/2026, 12:50

ನವದೆಹಲಿ(reporterkarnataka.com): ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನವು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಕ್ಷಣದಲ್ಲಿ ಏಕಾಏಕಿ ಮತ್ತೆ ಟೇಕ್ ಆಫ್ ಆಗಿರುವ ಆತಂಕಕಾರಿ ಘಟನೆ ನಡೆದಿದೆ. ಡಿಸಿಎಂ ಡಿ.ಕೆ. ಶಿವಕುಮಾರ್, ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಮತ್ತು ಎಂಎಲ್‌ಸಿ ಆರತಿ ಕೃಷ್ಣ ಅವರು ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.

ಸಂಜೆ ಸುಮಾರು 4:55ರ ವೇಳೆಗೆ ವಿಮಾನವು ರನ್ ವೇನಲ್ಲಿ ಇನ್ನೇನು ಲ್ಯಾಂಡ್ ಆಗಬೇಕು ಎನ್ನುವಷ್ಟರಲ್ಲಿ, ಚಕ್ರಗಳು ನೆಲಕ್ಕೆ ತಾಗುವ ಮೊದಲೇ ಪೈಲಟ್ ವಿಮಾನವನ್ನು ಮತ್ತೆ ಆಕಾಶಕ್ಕೆ ಹಾರಿಸಿದ್ದಾರೆ.

*ಆತಂಕಕ್ಕೊಳಗಾದ ಪ್ರಯಾಣಿಕರು*
ರನ್ ವೇ ಸಮೀಪ ಬಂದು ಏಕಾಏಕಿ ವಿಮಾನ ಮತ್ತೆ ಟೇಕ್ ಆಫ್ ಆದ ಕಾರಣ ವಿಮಾನದಲ್ಲಿದ್ದ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲಾ ಪ್ರಯಾಣಿಕರು ಕೆಲಕಾಲ ಗೊಂದಲ ಮತ್ತು ಆತಂಕಕ್ಕೊಳಗಾದರು. ಸುಮಾರು 7ರಿಂದ 8 ನಿಮಿಷಗಳ ಕಾಲ ದೆಹಲಿ ಮತ್ತು ಗಾಜಿಯಾಬಾದ್ ಆಕಾಶದಲ್ಲಿ ಸುತ್ತಾಡಿದ ವಿಮಾನವು, ಎರಡನೇ ಬಾರಿಗೆ ಯಶಸ್ವಿಯಾಗಿ ಮತ್ತು ಸುರಕ್ಷಿತವಾಗಿ ಲ್ಯಾಂಡ್ ಆಯಿತು.

*ಕಾರಣವೇನು?*
ಈ ಘಟನೆಗೆ ನಿಖರವಾದ ಕಾರಣವಿನ್ನೂ ತಿಳಿದು ಬಂದಿಲ್ಲ. ತಾಂತ್ರಿಕ ದೋಷ ಅಥವಾ ಏರ್ ಟ್ರಾಫಿಕ್ ಕಂಟ್ರೋಲ್ (ATC) ನಿಂದ ಸರಿಯಾದ ಸಮಯದಲ್ಲಿ ಅನುಮತಿ ಸಿಗದ ಕಾರಣ ಈ ರೀತಿ ಆಗಿರಬಹುದು ಎಂದು ಶಂಕಿಸಲಾಗಿದೆ. ಸದ್ಯಕ್ಕೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ನಿಟ್ಟುಸಿರು ಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು