4:26 AM Thursday29 - October 2026
ಬ್ರೇಕಿಂಗ್ ನ್ಯೂಸ್
4 ಎಂಎಲ್‌ಸಿ ಕ್ಷೇತ್ರ ಗೆದ್ದ ಮಾತ್ರಕ್ಕೆ ಬಿಜೆಪಿ ಬಿಗೋದು ಬೇಡ: ಕಲಬುರಗಿಯಲ್ಲಿ ಆರೋಗ್ಯ… ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ

ಇತ್ತೀಚಿನ ಸುದ್ದಿ

New Delhi | ಗೋಲ್ಡ್ ಸ್ಮಗ್ಲಿಂಗ್ ಕೇಸ್: ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ

24/05/2025, 09:23

✅ *ಗೃಹ ಪರಮೇಶ್ವರ್ ವಿರುದ್ಧ ಚಿನ್ನದ ಷಡ್ಯಂತ್ರ!!*

✅ *ಕಾಂಗ್ರೆಸ್ ಪ್ರಭಾವೀ ನಾಯಕನೇ ಸೂತ್ರಧಾರ ಎಂದ*

✅ *ಸಿದ್ದರಾಮಯ್ಯ ಅವರನ್ನು ಇಳಿಸಿ ಸಿಎಂ ಆಗಲು ಹೊರಟಿರುವ ನಾಯಕನದ್ದೇ ಕುತಂತ್ರ ಎಂದ ಕೇಂದ್ರ ಸಚಿವರು*

ನವದೆಹಲಿ(reporterkarnataka.com): ದಲಿತ ನಾಯಕರನ್ನು ಮುಗಿಸಲು ಕುತಂತ್ರ ಮಾಡುತ್ತಿರುವ ಮಹಾನಾಯಕನೇ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ರಾಜಕೀಯವಾಗಿ ಮುಗಿಸಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.
ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಸಚಿವರು ಮಾತನಾಡಿದರು.
ದಲಿತ, ಹಿಂದುಳಿದ ವರ್ಗಗದ ನಾಯಕರನ್ನು ಗುರಿಯಾಗಿಸಿಕೊಂಡು ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ನೀಡಿರುವ ಹೇಳಿಕೆಯನ್ನು ಗಮನಿಸಿದ್ದೇನೆ. ಸಚಿವ ಪರಮೇಶ್ವರ್ ಅವರು ಇಂಥ ಸಂಕಷ್ಟಕ್ಕೆ ಒಳಗಾಗಲು ಕಾಂಗ್ರೆಸ್ ಪಕ್ಷದ ಆ ಪ್ರಭಾವೀ ನಾಯಕನೇ ಕಾರಣ‌ ಎಂದು ನೇರ ಆರೋಪ ಮಾಡಿದರು.
ಸಚಿವ ರಾಜಣ್ಣ ವಿಧಾನಸಭೆಯಲ್ಲಿ ಹೇಳಿದರಲ್ಲ, ರಾಜ್ಯದಲ್ಲಿ ಸಿಡಿ, ಪೆನ್ ಡ್ರೈವ್ ಫ್ಯಾಕ್ಟರಿ ಇಟ್ಟುಕೊಂಡಿರುವ ಪ್ರಭಾವೀ ನಾಯಕನ ಬಗ್ಗೆ ನೇರವಾಗಿ ಹೇಳಿದ್ದರು ಅವರು. ಅವರು ಹೇಳಿದ್ದ ನಾಯಕನೇ ಇವತ್ತು ಪರಮೇಶ್ವರ್ ಅವರನ್ನು ಮುಗಿಸಲು ಹೊರಟಿದ್ದಾರೆ. ಪರಮೇಶ್ವರ್ ಅವರು ದಲಿತ ನಾಯಕರ ಸಭೆ ಮಾಡಲು ಹೊರಟಿದ್ದು, ದೆಹಲಿ ನಾಯಕರನ್ನು ಭೇಟಿ ಮಾಡಿದ್ದೇ ಅವರ ವಿರುದ್ಧ ಕುತಂತ್ರ ನಡೆಯಲು ಕಾರಣ ಎಂದು ಕೇಂದ್ರ ಸಚಿವರು ದೂರಿದರು.
ರಾಜ್ಯದಲ್ಲಿ ಏನೇನಾಗುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಮೇಲಾಗಿ ಕಾಂಗ್ರೆಸ್ ಪಕ್ಷದಲ್ಲಿ ಯಾರು ಯಾರಿಗೆ ಗುನ್ನ ಹೊಡೆಯುತ್ತಿದ್ದಾರೆ ಎನ್ನುವ ಮಾಹಿತಿಯೂ ಎಲ್ಲರಿಗೂ ತಿಳಿದಿದೆ. ದುಬೈನಿಂದ ಸಿಕ್ಕಿಬಿದ್ದಿರುವ ಆ ಮಹಿಳೆ ಚಿನ್ನ ತರುತ್ತಿದ್ದಾಳೆ ಎನ್ನುವ ಮಾಹಿತಿಯನ್ನು ಸೋರಿಕೆ ಮಾಡಿದ್ದೇ ಈ ಪ್ರಭಾವೀ ನಾಯಕ. ಆಕೆ ದುಬೈನಿಂದ ಚಿನ್ನ ಸ್ಮಗ್ಲಿಂಗ್ ಮಾಡುತ್ತಿದ್ದಾಳೆ ಎನ್ನುವ ವಿಚಾರ ಈ ಪ್ರಭಾವೀ ನಾಯಕನಿಗೆ ಹೇಗೆ ಗೊತ್ತು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.
ಸಿಎಂ ಸಿದ್ದರಾಮಯ್ಯ ಅವರ ಬಳಿಯೇ ಗುಪ್ತಚರ ವಿಭಾಗ ಇದೆಯಲ್ಲ. ಅವರಿಗೆ ಈ ವಿಷಯ ಗೊತ್ತಿಲ್ಲವೇ? ಆ ಮಹಿಳೆ ವಿಮಾನ ನಿಲ್ದಾಣದ ಮೂಲಕ ಚಿನ್ನ ತರುತ್ತಿರುವ ಮಾಹಿತಿ ಕೊಟ್ಟಿದ್ದೇ ಕಾಂಗ್ರೆಸ್ ಪಕ್ಷದ ಈ ಪ್ರಭಾವಿ ನಾಯಕ. ಈ ವಿಷಯ ಸಿದ್ದರಾಮಯ್ಯ ಅವರ ಗಮನಕ್ಕೆ ಬಂದಿಲ್ಲವೇ? ಸಚಿವ ಪರಮೇಶ್ವರ್ ಅವರು ದಲಿತರ ಸಮಾವೇಶ ಮಾಡಲು ಹೊರಟರು. ತಾವು ಕೂಡ ಸಿಎಂ ಪದವಿಯ ಆಕಾಂಕ್ಷಿ ಎಂದು ಹೇಳಿದರು. ತಮ್ಮ ದಾರಿಗೆ ಅಡ್ಡ ಬರುತ್ತಾರೆ ಎಂದು ಕಾಂಗ್ರೆಸ್ ಪ್ರಭಾವೀ ನಾಯಕನೇ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸುವ ಕುತಂತ್ರ ಹೂಡಿದರು. ಇಷ್ಟೆಲ್ಲಾ ಗಂಭೀರ ವಿಚಾರಗಳು ಸಿಎಂಗೆ ಗೊತ್ತಿಲವೆಂದರೆ ಹೇಗೆ? ಸಿದ್ದರಾಮಯ್ಯ ಅವರನ್ನು ಇಳಿಸಿ ನಾನು ಸಿಎಂ ಆಗಬೇಕು ಎಂದು ಕುರ್ಚಿಯ ಮೇಲೆ ಟವೆಲ್ ಹಾಕಿಕೊಂಡು ಕೂತಿರುವವರೆ ಚಿನ್ನದ ರಹಸ್ಯ ಬಹಿರಂಗ ಮಾಡಿದ್ದಾರೆ ಎಂಬ ಸ್ಫೋಟಕ ಅಂಶಗಳನ್ನು ವಿಷಯವನ್ನು ಕುಮಾರಸ್ವಾಮಿ ಅವರು ಬಹಿರಂಗಪಡಿಸಿದರು.
ರಾಜ್ಯದ ಕಾಂಗ್ರೆಸ್ ಪಕ್ಷದಲ್ಲಿ ಇಷ್ಟೆಲ್ಲಾ ರಾಜಕೀಯ ಮೇಲಾಟ ನಡೆಯುತ್ತಿದ್ದರೂ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುವ ವ್ಯರ್ಥ ಪ್ರಯತ್ನ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದ ಪ್ರಭಾವೀ ನಾಯಕನಿಂದಲೇ ಇದೆಲ್ಲಾ ನಡೆದಿದೆ. ಅದೆಷ್ಟೋ ಎಸ್ ಐಟಿ, ಕಮಿಟಿ, ಸಮಿತಿ ಎಲ್ಲಾ ಮಾಡಿದ್ದಿರಲ್ಲ? ಅವೆಲ್ಲವೂ ಏನಾದವು? ಬಾಯಿ ಬಿಟ್ಟರೆ ನುಡಿದಂತೆ ನಡೆದಿದ್ದೇವೆ ಎಂದು ಹೇಳುತ್ತಾರೆ. ಆದರೆ, ನುಡಿದಂತೆ ನಡೆಯಲು ಎಷ್ಟು ತೆರಿಗೆ ಹಾಕಿದ್ದಾರೆ ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು