7:57 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

New Delhi | ಭಾರತ ಜಾಗತಿಕ ಇವಿ ಹಬ್ ಆಗಿ ಪರಿವರ್ತನೆ: ಕೇಂದ್ರ ಸಚಿವ ಕುಮಾರಸ್ವಾಮಿ ವಿಶ್ವಾಸ

14/05/2025, 18:07

ನವದೆಹಲಿ(reporterkarnataka.com): ರಾಷ್ಟ್ರದ ಭೂಸಾರಿಗೆ ವಲಯದಲ್ಲಿ ವಾಯು ಮಾಲಿನ್ಯವನ್ನು ಗಣನೀಯವಾಗಿ ತಗ್ಗಿಸಿ ವಿದ್ಯುತ್ ಚಾಲಿತ ವಾಹನಗಳನ್ನು ಹೆಚ್ಚು ಉತ್ತೇಜಿಸುವ ನೀತಿ ಕುರಿತಂತೆ ಚರ್ಚಿಸಲು ಕೇಂದ್ರದ ಬೃಹತ್‌ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಇವಿ ಕ್ಷೇತ್ರದ ಖಾಸಗಿ ಪಾಲುದಾರರು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.


ಭಾರತದಲ್ಲಿ ಸ್ವಚ್ಛ, ಮಾಲಿನ್ಯರಹಿತ ಚಲನಶೀಲತೆಯ ಪರಿವರ್ತನೆಯನ್ನು ವೇಗಗೊಳಿಸುವುದು ಮತ್ತು ವಿದ್ಯುತ್ ಚಾಲಿತ ವಾಹನ (ಇವಿ) ಅಳವಡಿಕೆಯನ್ನು ಹೆಚ್ಚಿಸುವ ಬಗ್ಗೆ ಭಾರತದ ಆಟೋಮೋಟಿವ್ ವಲಯದ ಪ್ರಮುಖರು ಸಚಿವಾಲಯದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.
ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ವಿದ್ಯುತ್ ಚಾಲಿತ ವಾಹನ ಕ್ಷೇತ್ರಕ್ಕೆ ಇನ್ನೂ ಹೆಚ್ಚಿನ ಶಕ್ತಿ ತುಂಬವುದು. ಇಂಥ ವಾಹನಗಳನ್ನು ಹೆಚ್ಚು ಬಳಕೆ ಮಾಡುವುದು, ಮಾಲಿನ್ಯಮುಕ್ತ ಪ್ರಚಾರಕ್ಕಾಗಿ ವ್ಯೂಹಾತ್ಮಕ ಕಾರ್ಯತಂತ್ರಗಳು ಹಾಗೂ ಸ್ಥಳೀಯ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸುವ ಮಾರ್ಗೋಪಾಯಗಳ ಕುರಿತು ಸಚಿವರು ಉದ್ಯಮ ಪ್ರತಿನಿಧಿಗಳು ಸಚಿವರ ಗಮನ ಸೆಳೆದರು.
ಸ್ವಚ್ಛ ಚಲನಶೀಲತೆ ಇವತ್ತಿನ ತುರ್ತು ಅಗತ್ಯ. ನಗರ ಪ್ರದೇಶಗಳಲ್ಲಿ ಮೂಲಸೌಕರ್ಯವನ್ನು ಎಲೆಕ್ಟ್ರಿಕ್‌ ವಾಹನ ಕ್ಷೇತ್ರಕ್ಕೆ ಅನುಗುಣವಾಗಿ ಪರಿವರ್ತಿಸುವುದು ಮತ್ತು ಇಂಗಾಲ ಹೊರಸೂಸುವಿಕೆಯನ್ನು ಕಡಿಮೆ ಮಾಡುವಲ್ಲಿ ಕ್ಷಿಪ್ರಗತಿಯ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. 5 ಟ್ರಿಲಿಯನ್ ಡಾಲರ್‌ ಆರ್ಥಿಕತೆಯ ಗುರಿಯನ್ನು ಮುಟ್ಟಲು ಆಟೋಮೊಬೈಲ್‌ ಕ್ಷೇತ್ರವನ್ನು ಮಾಲಿನ್ಯಮುಕ್ತ, ಸ್ವಾವಲಂಭಿ ಕ್ಷೇತ್ರವನ್ನಾಗಿ ರೂಪಿಸುವುದು ಪ್ರಧಾನಿ ನರೇಂದ್ರ ಮೋದಿಯವರ ಕನಸು. ಈ ನಿಟ್ಟಿನಲ್ಲಿ ಉದ್ಯಮದ ಖಾಸಗಿ ಪಾಲುದಾರರು ನಿರ್ಣಾಯಕ ಹೆಜ್ಜೆಗಳನ್ನು ಇಡಬೇಕಾಗುತ್ತದೆ ಎಂಬ ಅಂಶವನ್ನು ಸಚಿವ ಕುಮಾರಸ್ವಾಮಿ ಅವರು ಒತ್ತಿ ಹೇಳಿದರು.
ಇಂಗಾಲದ ಶೂನ್ಯ ಹೊರಸೂಸುವಿಕೆ ಗುರಿ ಸಾಧಿಸುವ ಹಿನ್ನೆಲೆಯಲ್ಲಿ ʼಮೇಕ್ ಇನ್ ಇಂಡಿಯಾʼ ಮತ್ತು ʼಆತ್ಮನಿರ್ಭರ ಭಾರತ್‌ʼ ಕಾರ್ಯಕ್ರಮಗಳ ಅಡಿಯಲ್ಲಿ ವೇಗವಾಗಿ ಕೆಲಸ ಮಾಡುವ ಬದ್ಧತೆಯನ್ನು ಬೃಹತ್ ಕೈಗಾರಿಕೆ ಸಚಿವಾಲಯ ಹೊಂದಿದೆ ಎಂದು ತಿಳಿಸಿದ ಸಚಿವರು; ಜಾಗತಿಕ ಸ್ಪರ್ಧಾತ್ಮಕತೆಗೆ ತಕ್ಕಂತೆ ಸ್ಥಳೀಯ ಇವಿ ಕ್ಷೇತ್ರದ ಅಗತ್ಯಗಳನ್ನು ಪೂರೈಸುವ ರೀತಿಯಲ್ಲಿ ವಿದ್ಯುತ್ ಚಾಲಿತ ವಾಹನ ತಯಾರಿಕೆಗೆ ಅನುಕೂಲವಾಗುವ ಪೂರಕ ವ್ಯವಸ್ಥೆಯನ್ನು ಒದಗಿಸುವ ದಿಕ್ಕಿನಲ್ಲಿಯೇ ಕೇಂದ್ರವು ತನ್ನೆಲ್ಲಾ ನೀತಿಗಳನ್ನು ರೂಪಿಸಿದೆ ಎಂದು ಹೇಳಿದರು.
ಇದೇ ವೇಳೆ FAME I & II, ಆಟೋ PLI, ACC PLI, ಮತ್ತು PM E-ಡ್ರೈವ್‌ನಂತಹ ಯೋಜನೆಗಳ ಅಡಿಯಲ್ಲಿ ಸಾಧಿಸಲಾದ ಪ್ರಗತಿಯನ್ನು ಖಾಸಗಿ ಪಾಲುದಾರರು ಶ್ಲಾಘಿಸಿದರು. ಈ ಉಪಕ್ರಮಗಳು ಭಾರತವು ಜಾಗತಿಕ ಮಟ್ಟದ ವಿದ್ಯುತ್ ಚಾಲಿತ ವಾಹನ ಉತ್ಪಾದನೆ ಮತ್ತು ನಾವೀನ್ಯತಾ ಕೇಂದ್ರವಾಗಿ ಹೊರಹೊಮ್ಮಲು ಬಲವಾದ ಅಡಿಪಾಯವನ್ನು ಹಾಕಿವೆ ಎಂದು ಅಭಿಪ್ರಾಯಪಟ್ಟರು.
ಅಲ್ಲದೆ, ಖಾಸಗಿ ಪಾಲುದಾರರ ಸಲಹೆಗಳನ್ನು ಆಲಿಸಿದ ಸಚಿವರು, ಅವುಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು