5:32 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

New Delhi | ಭಾರತೀಯ ಸೇನೆಯಿಂದ ‘ಆಪರೇಷನ್ ಸಿಂಧೂರ್’: ಪಾಕಿಸ್ತಾನದ 9 ಉಗ್ರತಾಣಗಳ ಧ್ವಂಸ

07/05/2025, 13:12

ನವದೆಹಲಿ(reporterkarnataka.com):
ಪಹಲ್ಗಾಮ್ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಬುಧವಾರ ಮುಂಜಾನೆ
‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ನಡೆಸಿದ್ದು, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ಯಲ್ಲಿ 9 ಕಡೆ ಭಯೋತ್ಪಾದಕರ ಅಡಗುತಾಣದ ಮೇಲೆ ದಾಳಿ ನಡೆಸಿದೆ.
ಉಗ್ರಗಾಮಿ ಸಂಘಟನೆಗಳಾದ ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ಗೆ ಸೇರಿದ ಒಂಬತ್ತು ಭಯೋತ್ಪಾದಕ ಅಡಗುತಾಣಗಳನ್ನು ಗುರುತಿಸಿ ದಾಳಿ ನಡೆಸಲಾಗಿದೆ. ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಭೂಪ್ರದೇಶದೊಳಗೆ 4 ಸ್ಥಳಗಳು ಕೂಡ ಸೇರಿವೆ.ಪಾಕ್ ಆಕ್ರಮಿತ-ಕಾಶ್ಮೀರದಲ್ಲಿ 5 ಕಡೆ ನೆಲೆಗೊಂಡಿದ್ದ ಉಗ್ರರ ಅಡಗುತಾಣಗಳನ್ನು ಕೂಡ ಧ್ವಂಸಗೊಳಿಸಲಾಗಿದೆ.
26 ಜೀವಗಳನ್ನು ಬಲಿ ತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದನಾ ದಾಳಿಯ ಎರಡು ವಾರಗಳ ನಂತರ ‘ಆಪರೇಷನ್ ಸಿಂಧೂರ್’ ಅಡಿಯಲ್ಲಿ ಮಿಲಿಟರಿ ದಾಳಿ ನಡೆಸಲಾಯಿತು.
ಭಾರತೀಯ ಭೂಪ್ರದೇಶದಿಂದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಸಂಘಟಿತ ಪ್ರಯತ್ನಗಳ ಮೂಲಕ ಆಪರೇಷನ್ ಸಿಂದೂರ್’ ಕಾರ್ಯಗತಗೊಳಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು