6:57 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

06/05/2026, 22:37

ನವದೆಹಲಿ(reporterkarnataka.com): ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ನೂತನ ವಿಧಾನಸಭೆ ರಚನೆಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.
ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡಿದೆ ಹಾಗೂ ನೂತನ ಸರ್ಕಾರ ರಚನೆಗೆ ವೇದಿಕೆ ಸಿದ್ಧಪಡಿಸಬಹುದು ಎಂಬುದನ್ನು ಚುನಾವಣಾ ಆಯೋಗ ಪಶ್ಚಿಮ ಬಂಗಾಳ ರಾಜ್ಯಪಾಲರಿಗೆ ರವಾನಿಸಿರುವ ಅಧಿಸೂಚನೆ ಹೇಳಿದೆ.
ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಹೊರಡಿಸಿರುವ ಈ ಅಧಿಸೂಚನೆ ಪ್ರಮುಖ ಸಾಂವಿಧಾನಿಕ ನಡೆ ಎಂದು ಹಿರಿಯ ಚುನಾವಣಾಧಿಕಾರಿಯೊಬ್ಬರು ತಿಳಿಸಿದ್ದಾರೆ.
“ಚುನಾವಣಾ ಆಯೋಗದ ಕಡೆಯಿಂದ ಪಶ್ಚಿಮ ಬಂಗಾಳದಲ್ಲಿ ನೂತನ ವಿಧಾನಸಭೆ ರಚನೆಯ ಪ್ರಕ್ರಿಯೆ ಪೂರ್ಣಗೊಂಡಿದೆ. ಈಗಾಗಲೇ ಅಸ್ತಿತ್ವದಲ್ಲಿರುವ ನಿಯಮಾವಳಿಗಳ ಅನುಸಾರ ಸರ್ಕಾರ ರಚನೆಗೆ ಮುಂದಿನ ಕ್ರಮಗಳಿಗೆ ಅದು ಚಾಲನೆ ನೀಡಿದೆ” ಎಂದು ಅವರು ಹೇಳಿದ್ದಾರೆ.
ಚುನಾವಣೆಯ ವೇಳೆ ಚುನಾವಣಾ ಆಯೋಗ ಎಲ್ಲ ನಿಯಮಾವಳಿಗಳಿಗೆ ಬದ್ಧವಾಗಿರುವುದನ್ನು ಖಾತರಿಪಡಿಸಿದೆ ಎಂದೂ ಅವರು ತಿಳಿಸಿದ್ದಾರೆ.
294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ 207 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ, 15 ವರ್ಷಗಳ ಟಿಎಂಸಿಯ ನಿರಂತರ ಆಡಳಿತಕ್ಕೆ ಬಿಜೆಪಿ ತೆರೆ ಎಳೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು