4:30 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ

18/06/2026, 15:16

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯ ದುಬಾರೆಯಲ್ಲಿ ಸಂಭವಿಸಿದ ಆನೆ ಹಾಗೂ ಪ್ರವಾಸಿ ಮಹಿಳೆಯ ದುರಂತದ ಬೆನ್ನಲ್ಲೇ ಕರ್ನಾಟಕ ಅರಣ್ಯ ಇಲಾಖೆಯು ಆನೆ ಶಿಬಿರಗಳಿಗೆ ಹೊಸ ಸುರಕ್ಷತಾ ನಿಯಮಾವಳಿ ಜಾರಿಗೊಳಿಸಿದ್ದು, ಇನ್ನು ಮುಂದೆ ಪ್ರವಾಸಿಗರು ಆನೆಗಳಿಂದ ಕನಿಷ್ಠ 30 ಅಡಿ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಪ್ರವಾಸಿಗರು ಗುರುತಿಸಲಾದ ಗ್ರೀನ್ ಝೋನ್ (ವೀಕ್ಷಣಾ ಪ್ರದೇಶ)ನಲ್ಲೇ ನಿಂತು ಆನೆಗಳನ್ನು ವೀಕ್ಷಿಸಬೇಕಿದ್ದು, ಹೊಸ ನಿಯಮಗಳ ಅನ್ವಯ ಶಿಬಿರಗಳಲ್ಲಿ ಏನೇನು ಬದಲಾವಣೆ ಆಗಲಿದೆ ಎಂಬ ಮಾಹಿತಿ ಇಲ್ಲಿದೆ.
ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ನಿರ್ವಹಣಾ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗಾಗಿ ಕರ್ನಾಟಕ ಅರಣ್ಯ ಇಲಾಖೆ ಮೊದಲ ಬಾರಿಗೆ ಕರ್ನಾಟಕ ಆನೆ ಶಿಬಿರ ಸುರಕ್ಷತಾ ನಿಯಮಾವಳಿ (Karnataka Elephant Camp Safety Protocol) ಜಾರಿಗೊಳಿಸಿದೆ. ಇದರನ್ವಯ ಇನ್ನು ಮುಂದೆ ಪ್ರವಾಸಿಗರು ಆನೆಗಳನ್ನು ವೀಕ್ಷಿಸಲು ಕನಿಷ್ಠ 30 ಅಡಿ ಅಂತರ ಕಾಯ್ದುಕೊಳ್ಳಬೇಕು. ಆನೆಗಳಿಗೆ ಸ್ನಾನ ಮಾಡಿಸುವುದು, ಮುಟ್ಟುವುದು ಅಥವಾ ಆಹಾರ ನೀಡುವುದು ಸಂಪೂರ್ಣ ನಿಷೇಧವಾಗಿರಲಿದೆ.
ಪ್ರವಾಸಿಗರು ಗುರುತಿಸಲಾದ ಗ್ರೀನ್ ಝೋನ್ (ವೀಕ್ಷಣಾ ಪ್ರದೇಶ)ನಲ್ಲೇ ನಿಂತು ಆನೆಗಳನ್ನು ವೀಕ್ಷಿಸಬೇಕು. ಆನೆಗಳು ಹಾಗೂ ಪ್ರವಾಸಿಗರ ಚಟುವಟಿಕೆಗಳನ್ನು ಸಿಸಿಟಿವಿ ಕ್ಯಾಮೆರಾಗಳ ಮೂಲಕ ಮೇಲ್ವಿಚಾರಣೆ ಮಾಡಿ ದಾಖಲಿಸಲಾಗುತ್ತದೆ. ಸಾರ್ವಜನಿಕ ವೀಕ್ಷಣೆಗಾಗಿ ಯಾವುದೇ ಶಿಬಿರದಲ್ಲಿ 10ಕ್ಕಿಂತ ಹೆಚ್ಚು ಆನೆಗಳನ್ನು ಪ್ರದರ್ಶಿಸಲು ಅವಕಾಶ ಇರುವುದಿಲ್ಲ.

*ದುಬಾರೆ ದುರಂತದ ಬಳಿಕ ಹೊಸ ನಿಯಮ:*
ಮೇ 19ರಂದು ದುಬಾರೆ ಆನೆ ಶಿಬಿರದಲ್ಲಿ ತಮಿಳುನಾಡಿನ ಪ್ರವಾಸಿಗರೊಬ್ಬರು ಮೃತಪಟ್ಟಿದ್ದ ಘಟನೆ ಹಿನ್ನೆಲೆಯಲ್ಲಿ ಈ ಸುರಕ್ಷತಾ ನಿಯಮಾವಳಿಯನ್ನು ಜಾರಿಗೊಳಿಸಲಾಗಿದೆ. ಶಿಬಿರಗಳಿಗೆ ನಿಯಮಗಳನ್ನು ಪಾಲಿಸಲು 15 ದಿನಗಳ ಗಡುವು ನೀಡಲಾಗಿದೆ. ಬಳಿಕ ಪರಿಶೀಲನೆ ನಡೆಸಿ ಪ್ರಮಾಣೀಕರಣ ನೀಡಲಾಗುವುದು. ಅನುಮತಿ ಸಿಗುವವರೆಗೆ ಶಿಬಿರಗಳ ಕಾರ್ಯಾಚರಣೆಗೆ ಅವಕಾಶ ಇರುವುದಿಲ್ಲ ಎಂದು ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಕುಮಾರ್ ಪುಷ್ಕರ್ ಅವರು, ತಿಳಿಸಿದ್ದಾರೆ.
ಪ್ರವಾಸಿಗರಿಗೆ ಸಮಯ ಹಾಗೂ ಸಂಖ್ಯಾ ಮಿತಿ
ಹೊಸ ನಿಯಮಗಳ ಅನ್ವಯ ಶಿಬಿರದ ಸಾಮರ್ಥ್ಯ, ಆನೆಗಳ ಸಂಖ್ಯೆ ಹಾಗೂ ಪ್ರವಾಸಿಗರ ದಟ್ಟಣೆ ಆಧರಿಸಿ ಪ್ರವಾಸಿಗರ ಬ್ಯಾಚ್‌ಗಳು ಹಾಗೂ ಸಮಯ ನಿಗದಿಪಡಿಸಲಾಗುತ್ತದೆ. ಗ್ರೀನ್ ಝೋನ್‌ನಲ್ಲಿ ಒಂದೇ ಸಮಯದಲ್ಲಿ 50ರಿಂದ 75 ಪ್ರವಾಸಿಗರಿಗೆ ಮಾತ್ರ ಅವಕಾಶ ಇರಲಿದ್ದು, ವೀಕ್ಷಣಾ ಅವಧಿ 20 ರಿಂದ 30 ನಿಮಿಷಕ್ಕೆ ಸೀಮಿತವಾಗಿರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು