3:40 PM Friday20 - November 2026
ಬ್ರೇಕಿಂಗ್ ನ್ಯೂಸ್
ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8… ಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಹೈಕಮಾಂಡ್ ತೀರ್ಮಾನಿಸಲಿದೆ: ಸಿಎಂ ಡಿ. ಕೆ. ಶಿವಕುಮಾರ್ ತಿಪಟೂರು | ಕೆಎಸ್​ಆರ್​ಟಿಸಿ ಬಸ್ ರೂಪದಲ್ಲಿ ಬಂದ ಮೃತ್ಯು: ಭೀಕರ ಅಪಘಾತದಲ್ಲಿ ಯುವಕರಿಬ್ಬರು… ಮಂಡ್ಯ | ನಂದಿನಿ ಮೊಸರಿನ ಪ್ಯಾಕೆಟ್‌ನಲ್ಲಿ ಜಿಯೋ ಸಿಮ್ ಸಿಕ್ಕಿದೆ ಎಂದು ಸುಳ್ಳು… ತುಮಕೂರು | ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ವೇದಿಕೆ ಮೇಲೆಯೇ ಭಾವುಕರಾದ ಡಾ. ಪರಮೇಶ್ವರ್ ಪಂಡಿತ್ ಜವಾಹರಲಾಲ್ ನೆಹರು 137ನೇ ಜನ್ಮದಿನ: ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್… ಮೆಟ್ರೋ ಅನುದಾನ ತಾರತಮ್ಯ ಆರೋಪಕ್ಕೆ ಪ್ರಧಾನಿ ನಯವಾದ ತಿರುಗೇಟು: ಈಗ ಸೆಂಚುರಿ ಬಾರಿಸಿದೆ… ಚಿಕ್ಕಮಗಳೂರು | ತರೀಕೆರೆ‌ ಬಳಿ ಮಣ್ಣಿನಗುಡ್ಡೆಗೆ ಬೈಕ್ ಡಿಕ್ಕಿ: ಪುತ್ರಿ ಸಾವು; ತಂದೆ…

ಇತ್ತೀಚಿನ ಸುದ್ದಿ

ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಹೊಸ ಶಕ್ತಿ: ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ

20/11/2026, 15:39

ಮಂಗಳೂರು(reporterkarnataka.com): ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
​ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.
ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.
ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.
“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.

​*ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:*
ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.
ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.


ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರ‌ಮತ್ತು ಪ್ರವಾಸೋದ್ಯಮ‌ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು