11:31 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ

02/05/2026, 12:36

ಬೆಂಗಳೂರು(reporterkarnataka.com): ಕರ್ನಾಟಕ ಸರ್ಕಾರವು ಹೊರರಾಜ್ಯ ನೋಂದಣಿಯ ವಾಹನಗಳಿಗೆ ಹೊಸ ತೆರಿಗೆ ವಿಧಿಸಲು ಸುಗ್ರೀವಾಜ್ಞೆ ಹೊರಡಿಸಿದೆ. ರಾಜ್ಯದ ಖಾಯಂ ಬಳಕೆ ವಾಹನಗಳ ಮಾಲೀಕರು ಇನ್ನು ಮುಂದೆ ತೆರಿಗೆ ಪಾವತಿಸಬೇಕು. ಇದರಿಂದ ಹೆಚ್ಚುತ್ತಿರುವ ಮಾಲಿನ್ಯ ನಿಯಂತ್ರಣ ಹಾಗೂ ರಾಜ್ಯದ ಆದಾಯ ವೃದ್ಧಿ ಸರ್ಕಾರದ ಮುಖ್ಯ ಉದ್ದೇಶ. 25 ಲಕ್ಷ ರೂ. ಮೇಲ್ಪಟ್ಟ ಎಲೆಕ್ಟ್ರಿಕ್ ವಾಹನಗಳಿಗೂ ತೆರಿಗೆ ಅನ್ವಯ. ಇದು ತೆರಿಗೆ ವಂಚನೆ ತಡೆಗಟ್ಟಲು ಪರಿಣಾಮಕಾರಿ ಕ್ರಮ.
ರಾಜ್ಯದಲ್ಲಿ ಹೊರರಾಜ್ಯದ ವಾಹನಗಳ ಸಂಚಾರ ಹೆಚ್ಚಾಗಿದೆ. ಇದರಿಂದ ಪರಿಸರ ಮಾಲಿನ್ಯ ಆಗುತ್ತಿದೆ. ದೆಹಲಿ ಸೇರಿದಂತೆ ದೇಶದ ಅನೇಕ ರಾಜ್ಯಗಳಿಂದ ನೋಂದಣಿ ಆಗಿರುವ ವಾಹನಗಳು ಬರುತ್ತಿದೆ. ಹೆಚ್ಚಾಗಿ ದೆಹಲಿಯಿಂದ ವಾಹನಗಳು ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಕಡೆ ಬಂದಿದೆ. ಇದರಿಂದ ರಾಜ್ಯದಲ್ಲಿ ಗಾಳಿಯ ಮಟ್ಟ, ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಇದನ್ನು ತಡೆಯಲು ರಾಜ್ಯದ ಸರ್ಕಾರ ಹೊಸ ಪ್ಲಾನ್​​ ಒಂದನ್ನು ಮಾಡಿದೆ. ರಾಜ್ಯದಲ್ಲಿ ಸಂಚರಿಸುತ್ತಿರುವ ಹೊರರಾಜ್ಯ ನೋಂದಣಿಯ ವಾಹನಗಳಿಂದ ತೆರಿಗೆ ಸಂಗ್ರಹಿಸಲು ಕರ್ನಾಟಕ ಸರ್ಕಾರವು ಕರ್ನಾಟಕ ಮೋಟಾರು ವಾಹನಗಳ ತೆರಿಗೆ ವಿಧಿಸುವಿಕೆ (ತಿದ್ದುಪಡಿ) ಸುಗ್ರೀವಾಜ್ಞೆಯನ್ನು ಜಾರಿಗೆ ತಂದಿದೆ. ಇದರಿಂದಾಗಿ ಬೇರೆ ರಾಜ್ಯಗಳಲ್ಲಿ ನೋಂದಣಿಯಾಗಿ ಕರ್ನಾಟಕದಲ್ಲಿ ಖಾಯಂ ಆಗಿ ಬಳಸಲ್ಪಡುವ ವಾಹನ ಮಾಲೀಕರು ಇನ್ನು ಮುಂದೆ ರಾಜ್ಯ ಸರ್ಕಾರಕ್ಕೆ ತೆರಿಗೆ ಪಾವತಿಸುವುದು ಕಡ್ಡಾಯವಾಗಲಿದೆ.

ಹೊರರಾಜ್ಯಗಳಲ್ಲಿ ನೋಂದಣಿಯಾಗಿ, ಕರ್ನಾಟಕದಲ್ಲಿ ಸತತವಾಗಿ ಸಂಚರಿಸುವ ಕಾರು, ಜೀಪು, ಮಿನಿ ಬಸ್ ಹಾಗೂ ದ್ವಿಚಕ್ರ ವಾಹನಗಳಿಗೆ ಈ ನಿಯಮ ಅನ್ವಯಿಸುತ್ತದೆ. 10 ಲಕ್ಷ ರೂ.ದಿಂದ 15 ಲಕ್ಷ ರೂ.ದವರೆಗಿನ ವಾಹನಗಳಿಗೆ ಶೇ. 15 ರಷ್ಟು ತೆರಿಗೆ ವಿಧಿಸಲು ನಿರ್ಧರಿಸಲಾಗಿದೆ. 15 ಲಕ್ಷ ರೂ.ಕ್ಕಿಂತ ಅಧಿಕ ಮೌಲ್ಯದ ವಾಹನಗಳಿಗೆ ಶೇ. 18 ರಷ್ಟು ತೆರಿಗೆ ಪಾವತಿಸಬೇಕಾಗುತ್ತದೆ. ಇನ್ನು ಹಳೆಯ ವಾಹನಗಳಿಗೆ ವಾಹನದ ವಯಸ್ಸು ಮತ್ತು ಸವೆತದ ಆಧಾರದ ಮೇಲೆ ತೆರಿಗೆಯ ದರದಲ್ಲಿ ವ್ಯತ್ಯಾಸವಿರುತ್ತದೆ. ಇದರ ಜತೆಗೆ ಇವಿ (EV) ವಾಹನಗಳಿಗೂ ತೆರಿಗೆ ಇದೆ ಎಂದು ಹೇಳಲಾಗಿದೆ. ಈ ಮೊದಲು ಎಲೆಕ್ಟ್ರಿಕ್ ವಾಹನಗಳಿಗೆ ನೀಡಲಾಗಿದ್ದ ತೆರಿಗೆ ವಿನಾಯಿತಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದ್ದು, 25 ಲಕ್ಷ ರೂ.ಕ್ಕಿಂತ ಅಧಿಕ ಮೌಲ್ಯದ ಎಲೆಕ್ಟ್ರಿಕ್ ವಾಹನಗಳಿಗೆ ಶೇ. 10 ರಷ್ಟು ತೆರಿಗೆ ವಿಧಿಸಲು ಸರ್ಕಾರ ಉದ್ದೇಶಿಸಿದೆ.

*ಸರ್ಕಾರದ ಈ ಕ್ರಮಕ್ಕೆ ಕಾರಣವೇನು?*
ರಾಜ್ಯದಲ್ಲಿ ಸಾವಿರಾರು ಹೊರರಾಜ್ಯ ನೋಂದಣಿಯ ವಾಹನಗಳು ಸಂಚರಿಸುತ್ತಿದ್ದರೂ, ಅವುಗಳಿಂದ ರಾಜ್ಯದ ಬೊಕ್ಕಸಕ್ಕೆ ಯಾವುದೇ ಆದಾಯ ಬರುತ್ತಿರಲಿಲ್ಲ. ಅಲ್ಲದೆ, ತೆರಿಗೆಯನ್ನು ತಪ್ಪಿಸಲು ಅನೇಕರು ನೆರೆಯ ರಾಜ್ಯಗಳಲ್ಲಿ ವಾಹನ ನೋಂದಣಿ ಮಾಡಿಸುತ್ತಿದ್ದರು. ಇದನ್ನು ತಡೆಯಲು ಮತ್ತು ರಾಜ್ಯದ ತೆರಿಗೆ ಆದಾಯವನ್ನು ಹೆಚ್ಚಿಸಲು ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಇದರ ಜತೆಗೆ ರಾಜ್ಯದಲ್ಲಿ ಇಂತಹ ವಾಹನಗಳಿಂದ ಪರಿಸರ ಮಾಲಿನ್ಯ ಆಗುತ್ತಿದೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು