9:31 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಹೊಸ ವರ್ಷಾಚಣೆ: ಕಡಲನಗರಿಯಲ್ಲಿ ಬಿಗಿ ಬಂದೋಬಸ್ತ್; 17 ಹೊಯ್ಸಳ ಸೇರಿದಂತೆ 66 ಸೆಕ್ಟರ್ ಮೊಬೈಲ್ ಘಟಕಗಳು ಕಾರ್ಯಾಚರಣೆ

30/12/2023, 23:55

ಮಂಗಳೂರು(reporterkarnataka.com): ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಸುರಕ್ಷತೆ ಹಾಗೂ ಭದ್ರತೆಗೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಕಲ ರೀತಿಯ ಬಂದೋಬಸ್ತ್ ಮಾಡಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಈ ವಿಷಯ ತಿಳಿಸಿದ್ದಾರೆ.
ನಗರದಲ್ಲಿ ಚರ್ಚ್, ಹೊಟೇಲ್, ರೆಸ್ಟೋರೆಂಟ್, ಖಾಸಗಿ ಸಭಾಂಗಣ ಸೇರಿದಂತೆ ಒಳಾಂಗಣಗಳಲ್ಲಿ ಕಾರ್ಯಕ್ರಮ ನಡೆಸಲು ಕೋರಿ 36 ಅರ್ಜಿಗಳು ಬಂದಿವೆ. ಹಲವು ನಿಬಂಧನೆಗಳೊಂದಿಗೆ ಕಾರ್ಯಕ್ರಮಗಳಿಗೆ ಅನುಮತಿ ನೀಡಲಾಗಿದ್ದು, ಒಳಾಂಗಣದಲ್ಲಿ ಕಾರ್ಯಕ್ರಮ ನಡೆಸುವವರು ಮಧ್ಯರಾತ್ರಿ 12.30ರವರೆಗೆ ಅವಕಾಶ ನೀಡಲಾಗುತ್ತಿದೆ ಎಂದರು.
ಬೀಚ್ ಅಥವಾ ಇತರೆಡೆ ಹೊರಾಂಗಣಗಳಲ್ಲಿ ಕಾರ್ಯಕ್ರಮ ನಡೆಸುವವರು 10ಕ್ಕೆ ಮುಕ್ತಾಯಗೊಳಿಸಬೇಕು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂಪೂರ್ಣ ನಿಗಾ ವಹಿಸಲಿದ್ದು, 17 ಹೊಯ್ಸಳ ವಾಹನ ಸೇರಿದಂತೆ 66 ಸೆಕ್ಟರ್ ಮೊಬೈಲ್ ಘಟಕಗಳು ಕಾರ್ಯಾಚರಣೆಯಲ್ಲಿರಲಿವೆ. 106 ಪಾಯಿಂಟ್‌ಗಳಲ್ಲಿ ಎಸಿಪಿ ದರ್ಜೆಯಿಂದ ಹಿಡಿದು ಅಧಿಕಾರಿ, ಸಿಬ್ಬಂದಿ ಮೇಲ್ವಿಚಾರಣೆ ನಡೆಸಲಿದ್ದಾರೆ. ಚೆಕ್‌ಪೋಸ್ಟ್‌ನಲ್ಲಿ ಸಿವಿಲ್ ಹಾಗೂ ಟ್ರಾಫಿಕ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿದ್ದು, ಮದ್ಯಪಾನ ಮಾಡಿ ವಾಹನ ಚಲಾಯಿಸುವವರು ಸೇರಿದಂತೆ ಅಕ್ರಮ ಚಟುವಟಿಕೆಗಳ ವಿರುದ್ಧ ಕ್ರಮ ವಹಿಸಲಿದ್ದಾರೆ. ಡ್ರಗ್ಸ್ ವಿರುದ್ಧವೂ ನಾಲ್ಕು ತಂಡಗಳು ಕಾರ್ಯಾಚರಿಸಲಿದ್ದು, ಸೇವನೆ ಮತ್ತು ಸಾಗಾಟ- ಮಾರಾಟದ ಮೇಲೆ ನಿಗಾ ವಹಿಸಲಿದ್ದಾರೆ. ಬೀಚ್‌ಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ಆಗದಂತೆ ಮುಂಜಾಗೃತಾ ಕ್ರಮಗಳ ಜತೆಗೆ ಲೈಟಿಂಗ್ ವ್ಯವಸ್ಥೆಗೂ ಕ್ರಮ ವಹಿಸಲಾಗಿದೆ. 112 ಸೇರಿದಂತೆ ಸ್ಥಳೀಯ ಅಧಿಕಾರಿಗಳು ನೇರವಾಗಿ ಸಂಪರ್ಕಕ್ಕೆ ಸಹಕಾರಿ ಆಗುವಂತೆ ಕ್ರಮ ವಹಿಸಲಾಗಿದೆ ಎಂದು ಅವರು ವಿವರ ನೀಡಿದರು.
ಡಿಸಿಪಿಗಳಾದ ದಿನೇಶ್ ಕುಮಾರ್, ಸಿದ್ಧಾರ್ಥ್ ಗೋಯಲ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು