11:48 AM Monday21 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಎನ್ ಐಎ ಕಾರ್ಯಾಚರಣೆ: ಮಂಗಳೂರು ಸೇರಿದಂತೆ ದೇಶಾದ್ಯಂತ ಒಟ್ಟು 4 ಮಂದಿ ವಶಕ್ಕೆ; ದಿಲ್ಲಿಯಲ್ಲಿ ವಿಚಾರಣೆ? 

05/08/2021, 09:13

ಬೆಂಗಳೂರು/ಮಂಗಳೂರು(reporterkarnataka.com): ಐಸಿಸ್ ಜತೆಗಿನ ನಂಟಿನ ಆರೋಪದ ಮೇಲೆ ಉಳ್ಳಾಲದ ಮಾಸ್ತಿಕಟ್ಟೆಯ ನಿವಾಸಕ್ಕೆ ಬುಧವಾರ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತಂಡ ಓರ್ವನನ್ನು ವಶಕ್ಕೆ ಪಡೆದಿದ್ದು, ದೇಶದ ವಿವಿಧ ಕಡೆಗಳಿಂದ ಒಟ್ಟು 4 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದೆ.

ಉಳ್ಳಾಲದ ಬಿ.ಎಂ. ಬಾಷಾ ಅವರ ಮನೆಗೆ ದಾಳಿ ನಡೆಸಿದ ಎನ್ ಐಎ ತಂಡ ದಿನವಿಡೀ ವಿಚಾರಣೆ ನಡೆಸಿ ಬಳಿಕ ಓರ್ವನನ್ನು ವಶಕ್ಕೆ ಪಡೆದುಕೊಂಡಿದೆ. ಮಾಸ್ತಿಕಟ್ಟೆ ನಿವಾಸಿಯಾಗಿರುವ ಬಾಷಾ ಅವರ ನಿವಾಸಕ್ಕೆ ಸುಮಾರು 20 ಮಂದಿಯ ಎನ್‌ಐಎ ತಂಡ ಮುಂಜಾನೆ 5.30ಕ್ಕೆ ದಾಳಿ ಮಾಡಿತ್ತು. ಸಂಜೆ ಬಾಷಾ ಅವರ ಕಿರಿಯ ಪುತ್ರ ಅಮ್ಮಾರ್ ಎಂಬಾತನನ್ನು ಹೆಚ್ಚಿನ ವಿಚಾರಣೆಗೆಂದು ವಶಕ್ಕೆ ಪಡೆದುಕೊಂಡಿದೆ.

ಆತನನ್ನು ಮಂಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಹೆಚ್ಚಿನ ವಿಚಾರಣೆಗೆ ಬೆಂಗಳೂರು ಅಥವಾ ದಿಲ್ಲಿಗೆ ಕರೆದೊಯ್ಯಲಾಗುತ್ತದೆ ಎನ್ನಲಾಗಿದೆ. 

ಎನ್ಐಎ ತಂಡ ತಲಾ ಒಬ್ಬರನ್ನು ಮಂಗಳೂರು(ಉಳ್ಳಾಲ) ಮತ್ತು ಬೆಂಗಳೂರಿನಿಂದ ಮತ್ತು ಇತರ ಇಬ್ಬರನ್ನು ಜಮ್ಮು-ಕಾಶ್ಮೀರದ ಬಂಡಿಪೋರ ಮತ್ತು ಶ್ರೀನಗರದಿಂದ ವಶಕ್ಕೆ ಪಡೆದಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು