7:32 PM Thursday16 - January 2025
ಬ್ರೇಕಿಂಗ್ ನ್ಯೂಸ್
ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ…

ಇತ್ತೀಚಿನ ಸುದ್ದಿ

ನಿವೃತ್ತ ನ್ಯಾಯಾಧೀಶ ಸದಾಶಿವ ವರದಿ ಕೂಡಲೇ ಜಾರಿಗೆ ತನ್ನಿ: ಮಾದಿಗ ದಂಡೋರ ಹಾಗೂ ಮಾದಿಗ ಮೀಸಲಾತಿ ಹೋರಾಟ ಸಮಿತಿ ಆಗ್ರಹ

07/10/2021, 07:57

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com

ನಿವೃತ್ತ ನ್ಯಾಯಾಧೀಶ ಸದಾಶಿವ ವರದಿಯನ್ನು ಕೂಡಲೆ ಜಾರಿಗೆ ತರುವುದರ ಮೂಲಕ ಸಮುದಾಯಕ್ಕೆ ನ್ಯಾಯ ಒದಗಿಸಬೇಕೆಂದುನಿವೃತ್ತ-ನ್ಯಾಯಾಧೀಶ-ಸದಾಶಿವ ಮಾದಿಗ ದಂಡೋರ ಹಾಗೂ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಜೆ.ಎಂ.ದೇವರಾಜ್‌ ಆಗ್ರಹಿಸಿದರು.

ಪಟ್ಟಣದ ಮಾದಿಗ ದಂಡೋರ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಾದಿಗ ದಂಡೋರ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ , ೨೪ ವರ್ಷಗಳಿಂದ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಮಂದ ಕೃಷ್ಣ ಮಾದಿಗ ಅವರ ನೇತೃತ್ವದಲ್ಲಿ ಒಳ ಮೀಸಲಾತಿಗಾಗಿ ಸತತ ಹೋರಾಟ ನಡೆಸಲಾಗುತ್ತಿದೆ . ಆದರೆ ಸರ್ಕಾರ ಈ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಿದೆ ಎಂದು ಹೇಳಿದರು . 

ಅನ್ಯ ರಾಜ್ಯಗಳಲ್ಲಿ ಜಾರಿಯಲ್ಲಿರುವಂತೆ ಕರ್ನಾಟಕದಲ್ಲೂ ಒಳ ಮೀಸಲಾತಿ ಜಾರಿಗೆ ಬರಬೇಕು . ಮಾದಿಗ ದಂಡೋರ ಸಮುದಾಯಕ್ಕೆ ಒಳ ಮೀಸಲಾತಿ ನೀಡುವಂತೆ ಒತ್ತಾಯಿಸಿ ಅ .೧೧ ರಂದು ಬೀದರ್‌ ಜಿಲ್ಲಾ ಬಂದ್‌ಗೆ ಕರೆ ನೀಡಲಾಗಿದೆ . ಬಂದ್‌ಗೆ ಎಲ್ಲರೂ ಬೆಂಬಲ ವ್ಯಕ್ತಪಡಿಸಬೇಕು . ಜತೆಗೆ ಬಂದ್ ಸಂದರ್ಭದಲ್ಲಿ ಅಲ್ಲಿ ಹಾಜರಿರಬೇಕು ಎಂದು ಹೇಳಿದರು . 

ಸಂಘಟನೆಯ ಮುಖಂಡರಾದ ಎಂ.ಶ್ಯಾಮ್‌ರಾಜ್ , ಎನ್.ಚಂದ್ರಪ್ಪ , ನಾರಾಯಣಸ್ವಾಮಿ , ಜಿ.ಶಂಕರ್ , ರಾಮಪ್ಪ , ಮುನಿರಾಜು , ಮಂಜುನಾಥ್ , ಶಿವಾನಂದ , ಅನಿಲ್ ಕುಮಾರ್ , ಲಕ್ಷ್ಮಣ , ಪಾಪಣ್ಣ , ಮಂಜುಳ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು