5:36 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ನಿಗದಿತ ಕಾಲಾವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ

23/06/2023, 23:18

ಮಂಗಳೂರು(reporter Karnataka.com:ಅಪೂರ್ಣ ಸ್ಥಿತಿಯಲ್ಲಿರುವ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯಲ್ಲಿ ಮುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮುಂದಿನ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಇನ್ನಷ್ಟು ಚುರುಕು ಮುಟ್ಟಿಸಲಾಗುವುದು. ಮೀಸಲಿಟ್ಟ ಅನುದಾನ ಆಯಾ ಕಾಮಗಾರಿಗಳಿಗೆ ಬಳಕೆ ಆಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ರಾಜ್ಯ ವಿಧಾನಸಭೆಯ ಸಭಾಪತಿಗಳಾದ ಯು.ಟಿ. ಖಾದರ್, ಜಿಲ್ಲಾಧಿಕಾರಿ ಮುಲ್ಲೈಮುಗಿಲನ್, ನಗರ ಪೊಲೀಸ್ ಆಯುಕ್ತ ಕುಲ್ದೀಪ್ ಕುಮಾರ್ ಜೈನ್, ಎಸ್ಪಿ ರಿಷ್ಯಂತ್, ಡಿಸಿಪಿ ಅನ್ಶುಕುಮಾರ್ ವೇದಿಕೆಯಲ್ಲಿದ್ದರು.

ಶಾಸಕರಾದ ಡಿ. ವೇದವ್ಯಾಸ ಕಾಮತ್, ಉಮನಾಥ್ ಕೋಟ್ಯಾನ್, ರಾಜೇಶ್ ನಾಯ್ಕ್, ಅಶೋಕ್ ಕುಮಾರ್ ರೈ, ಭಾಗಿರಥಿ ಮುರುಳ್ಯ ಹಾಗೂ ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.



ತ್ರೈಮಾಸಿಕ ಕೆಡಿಪಿ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ, ಸರಕಾರಿ ಆಸ್ಪತ್ರೆಗಳು, ಕುಡಿಯುವ ನೀರು ಪೂರೈಕೆ, ಅರಣ್ಯ ಪ್ರದೇಶದ ಸಮಸ್ಯೆಗಳು, ಕಡಲೊರೆತ , ಪ್ರಕೃತಿ ವಿಕೋಪದ ಬಗ್ಗೆ ಇವತ್ತು ನಡೆದ ಕೆಡಿಪಿ ಸಭೆಯಲ್ಲಿ ಸುದೀರ್ಘ ಚರ್ಚೆ ಮಾಡಿದ್ದೇವೆ ಎಂದು ನುಡಿದರು.

ಉಚಿತ ಅಕ್ಕಿ ಯೋಜನೆ ಕುರಿತು ಮಾತನಾಡಿದ ಅವರು, ಬಿಜೆಪಿ ನಮ್ಮ ಜೊತೆ ಕೈಜೋಡಿಸಬೇಕು. ಅಕ್ಕಿ ಖರೀದಿ ವಿಚಾರದಲ್ಲಿ ಬಿಜೆಪಿ ನಾಯಕರು ಸಕಾರಾತ್ಮವಾಗಿ ಮಾತನಾಡಬೇಕು. ಕೇಂದ್ರ ಸರಕಾರದಲ್ಲಿ ಅಕ್ಕಿ ಬೇಕಾದಷ್ಟು ಸ್ಟಾಕ್ ಇದೆ. ಅಕ್ಕಿ, ಗೋಧಿ ಕೊಡಲು ಕೇಂದ್ರಕ್ಕೆ ಕಷ್ಟ ಏನೂ ಇಲ್ಲ. ಓಪನ್ ಮಾರ್ಕೆಟ್ ಸ್ಕಿಮ್ ಇದೆ. ನಾವು ದುಡ್ಡು ಕೊಟ್ಟು ತೆಗೆದುಕೊಳ್ಳುವುದು ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಅವರ ಹೇಳಿಕೆಯಿಂದ ಅವರಿಗೆ ಜನರ ಹಿತಾಸಕ್ತಿಗೆ ಮಾತನಾಡುವುದಕ್ಕಿಂತ ಕಾಂಗ್ರೆಸ್‌ಗೆ ಅಕ್ಕಿ ಸಿಗದೇ ಕಷ್ಟ ಆಗುತ್ತಿದೆಯಲ್ಲಾ ಅದು ಖುಷಿ ಕಾಣುತ್ತಿದೆ. ಅಕ್ಕಿ ಖರೀದಿ ಮಾಡಲು ನಾವು ಸರ್ವ ಪ್ರಯತ್ನ ಮಾಡುತ್ತಿದ್ದೇವೆ. ಮುಂದೆ ಏನು ಮಾಡಬೇಕೆಂದು ಮುಖ್ಯಮಂತ್ರಿಗಳು ಚರ್ಚೆ ಮಾಡುತ್ತಾರೆ. ಕೇಂದ್ರದಲ್ಲಿ ಅಕ್ಕಿ ಇಲ್ಲದೇ ಇದ್ದರೆ ಸರಿ, ಆದರೆ ಅವರಲ್ಲಿ ಬೇಕಾದಷ್ಟು ಅಕ್ಕಿ ಇದೆ. ಆದರೆ ಅವರು ಈ ರೀತಿ ಮಾಡುವ ಉದ್ದೇಶ ಏನು ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದರು.
ಗಡಿ ಪ್ರದೇಶಗಳಲ್ಲಿರುವ ಕನ್ನಡ ಶಾಲೆಗಳಲ್ಲಿ ಕನ್ನಡ ಬಾರದ ಶಿಕ್ಷಕಿಯರನ್ನು ನೇಮಿಸಿದರೆ ಏನೂ ಪ್ರಯೋಜನವಿಲ್ಲ. ರಾಜ್ಯ ಸರಕಾರದ ಜೊತೆ ಮಾತನಾಡಿ, ಕನ್ನಡ ಭಾಷೆ ಓದುವವರಿಗೆ ಕನ್ನಡ ಶಿಕ್ಷಕರನ್ನೇ ನೇಮಿಸಬೇಕಾಗಿದೆ. ಅಲ್ಲಿ ಕನ್ನಡ ಶಿಕ್ಷಕರನ್ನೇ ನಿಯೋಜಿಸಲು ಈ ಬಗ್ಗೆ ಕೇರಳ ಸರಕಾರದ ಜೊತೆ ಮಾತನಾಡಲು ನಾನು ಸಂಬಂಧಪಟ್ಟವರಿಗೆ ಸೂಚಿಸುವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು