11:45 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನೈಟ್ ಕರ್ಫ್ಯೂ ಎಫೆಕ್ಟ್: ರಾಜಧಾನಿ ಬೆಂಗಳೂರು ಸ್ತಬ್ಧ; ಪೊಲೀಸ್ ಕಂಟ್ರೋಲ್ ನಲ್ಲಿ ಸಿಲಿಕಾನ್ ಸಿಟಿ

29/12/2021, 16:57

ಬೆಂಗಳೂರು(reporterkarnataka.com): ಒಮಿಕ್ರಾನ್ ನಿಯಂತ್ರಿಸಲು ರಾಜ್ಯದೆಲ್ಲೆಡೆ ನಿನ್ನೆಯಿಂದ ನೈಟ್ ಕರ್ಫ್ಯೂ ಜಾರಿಯಾಗಿದ್ದು, ರಾಜಧಾನಿ ಬೆಂಗಳೂರು 10 ಗಂಟೆ ನಂತರ ಸಂಪೂರ್ಣ ಸ್ತಬ್ಧವಾಗಿತ್ತು. ಸಿಲಿಕಾನ್ ಸಿಟಿ ಪೊಲೀಸರು ನಗರದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ್ದು, ಅನಗತ್ಯವಾದ ಓಡಾಟಕ್ಕೆ ಬ್ರೇಕ್ ಹಾಕಿದ್ದಾರೆ. 

ನೈಟ್ ಕರ್ಫ್ಯೂ ಮೊದಲ ದಿನ ಪೊಲೀಸರು ಸ್ಟ್ರಿಕ್ಟ್ ಇರುವುದರಿಲ್ಲ ಎಂದು ಅನಗತ್ಯವಾಗಿ ರೋಡಿಗಿಳಿದವರ ಬಳಿ ಪೊಲೀಸರು ಫೈನ್ ಕಟ್ಟಿಸಿಕೊಂಡಿದ್ದಾರೆ.

ಅಗತ್ಯ ಸೇವೆಗಳನ್ನು ಹೊರತುಪಡಿಸಿ ನಿನ್ನೆ ಯಾವುದೇ ಸೇವೆಗಳು ಲಭ್ಯವಿರಲಿಲ್ಲ.10 ರ ಒಳಗೆ ಎಲ್ಲ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿದ್ದವು. ಹೆಚ್ಚಿನ ಸಂಖ್ಯೆಯಲ್ಲೇ ಪೊಲೀಸರು ಕರ್ತವ್ಯ ನಿರ್ವಹಿಸಿದ್ದು, ಸಂಪೂರ್ಣ ನಿಯಮ ಪಾಲನೆಯಾಗಿದೆ.

10 ಗಂಟೆ ಒಳಗೆ ಮನೆ ಸೇರಲು ಜನ ಬಸ್, ಆಟೋ ಹಾಗೂ ಕ್ಯಾಬ್‌ಗಳಿಗಾಗಿ ಪರದಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. 10  ಗಂಟೆಯ ಮೇಲೂ ಸದಾ ಜನಜಂಗುಳಿ ತುಂಬಿರುವ ಬೆಂಗಳೂರು ನಿನ್ನೆ ನಿಶ್ಯಬ್ಧವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು