2:00 AM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ

25/04/2024, 20:32

ಉಪ್ಪಿನಂಗಡಿ(reporterkarnataka.com): ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೆಳ್ತಂಗಡಿ ಮೂಲದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ಮೂಲದ ಮಹಮ್ಮದ್ ಅಝೀಮ್ ಬಂಧಿತ ಆರೋಪಿಯಾಗಿದ್ದಾನೆ. ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ಫ್ಯಾಶನ್ ಡಿಸೈನರ್ ಕಲಿಯುತ್ತಿದ್ದ
ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ವಿದ್ಯಾರ್ಥಿನಿ ಮಂಗಳವಾರ ರಾತ್ರಿ ಖಾಸಗಿ ಬಸ್ಸಿನಲ್ಲಿ ಊರಿಗೆ ಪ್ರಯಾಣಿಸಿದ್ದರು. ಬಸ್‌ ಸಕಲೇಶಪುರ ಕಳೆದು ಮುಂದಕ್ಕೆ ಸಾಗುತ್ತಿದ್ದಂತೆಯೇ ಮಲಗಿದ್ದ ವಿದ್ಯಾರ್ಥಿನಿಗೆ ತನ್ನ ಮೈಮೇಲೆ ಸಹಪ್ರಯಾಣಿಕ ಕೈಯಾಡಿಸಿರುವುದು ಗಮನಕ್ಕೆ ಬಂತು. ಬಳಿಕ ಮತ್ತೊಮ್ಮೆ ಇದೇ ಯತ್ನ ನಡೆದಾಗ ಕೃತ್ಯವನ್ನು ಬಸ್ಸಿನ ಚಾಲಕನ ಗಮನಕ್ಕೆ ಯುವತಿ ತಂದರು. ಆದರೆ ಚಾಲಕ ಸಕರಾತ್ಮಕವಾಗಿ ಸ್ಪಂದಿಸಿಲ್ಲ. ಅಷ್ಟರಲ್ಲಿ ಬಸ್ಸಿನಲ್ಲಿದ್ದ ಕೆಲವು ಸಹ ಪ್ರಯಾಣಿಕರು ಯುವತಿಯ ನೆರವಿಗೆ ಧಾವಿಸಿ ಆತನನ್ನು ವಿಚಾರಿಸಿದಾಗ ಆತ ಬೆಳ್ತಂಗಡಿಯ ಲಾಯಿಲ ಗ್ರಾಮದ ಮಹಮ್ಮದ್ ಅಝೀಮ್ ಎಂದು ತಿಳಿದು ಬಂತು. ಮುಂದಕ್ಕೆ ದಾರಿ ಮಧ್ಯೆ ಸಿಗುವ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸುವ ಎಂದು ಆಕೆ ಹೇಳಿದ ಬಳಿಕ ಆರೋಪಿ ಬಸ್ಸಿನ ಕಿಟಕಿಯಿಂದ ಹೊರಗೆ ಹಾರಿ ಪರಾರಿಯಾಗಿದ್ದ. ಪ್ರಕರಣವನ್ನು ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ಆರೋಪಿ ಮಹಮ್ಮದ್ ಅಝೀಮ್ ನನ್ನು ಬಂಧಿಸಿ
ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಮಧ್ಯೆ ವಿದ್ಯಾರ್ಥಿನಿ ಮನೆಗೆ
ಆರ್‌ ಎಸ್‌ ಎಸ್ ಮುಖಂಡ ಡಾ. ಕಲ್ಲಡ್ಲ ಪ್ರಭಾಕರ್ ಭಟ್ ಭೇಟಿ ಘಟನೆಯ ಮಾಹಿತಿ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು