7:49 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ನಿಲ್ಲದ ಬಿಜೆಪಿ – ಶಿವಸೇನೆ ಜಟಾಪಟಿ; ಮುಖ್ಯಮಂತ್ರಿ ಠಾಕ್ರೆ ವಿರುದ್ಧ ಕಮಲ ಪಾಳಯದಿಂದ ದೂರು ದಾಖಲು

29/08/2021, 16:45

ಮುಂಬೈ(reporterkarnataka.com): ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ನಡುವಿನ ಜಗಳ ಸದ್ಯಕ್ಕೆ ನಿಲ್ಲುವ ಲಕ್ಷಣ ಕಂಡು ಬರುತ್ತಿಲ್ಲ. ವಿವಾದಾತ್ಮಕ ಹೇಳಿಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಾರಾಯಣ ರಾಣೆ ವಿರುದ್ಧ ಶಿವಸೇನೆ ಪ್ರಕರಣ ದಾಖಲಿಸುತ್ತಿದ್ದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಮುಖ್ಯಮಂತ್ರಿ ಈ ಹಿಂದೆ ನೀಡಿದ್ದಾರೆ ಎನ್ನಲಾದ ನಿಂದನಾತ್ಮಕ ಹೇಳಿಕೆ ಸಂಬಂಧಿಸಿದಂತೆ ವಿರುದ್ಧ ದೂರು ನೀಡಲಾಗಿದೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಅವರ ಪತ್ನಿ, ‘ಸಾಮ್ನಾ’ ಸಂಪಾದಕಿ ರಶ್ಮಿ ಠಾಕ್ರೆ ಮತ್ತು ಯುವ ಸೇನೆ ಅಧ್ಯಕ್ಷ ವರುಣ್ ಸರ್ದೇಸಾಯಿ ವಿರುದ್ಧ ಬಿಜೆಪಿ ನಾಯಕರು ದೂರು ದಾಖಲಿಸಿದ್ದಾರೆ. ಠಾಕ್ರೆ ವಿರುದ್ಧ ವಿವಾದಾತ್ಮಕ ಟೀಕೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ನಾರಾಯಣ್ ರಾಣೆ ಅವರನ್ನು ಮಹಾರಾಷ್ಟ್ರದಲ್ಲಿ ಪೊಲೀಸರು ಬಂಧಿಸಿದ ಪ್ರಕರಣದ ಬೆನ್ನಲ್ಲೇ ಈ ದೂರುಗಳು ದಾಖಲಾಗಿದೆ. ಒಟ್ಟು ಮೂರು ದೂರುಗಳು ದಾಖಲಾಗಿದ್ದು, ಬಿಜೆಪಿ ನಾಯಕರು ನಾಸಿಕ್‌ನಲ್ಲಿ ದೂರು ಸಲ್ಲಿಸಿದ್ದಾರೆ. 

ರಿಷಿಕೇಶ್ ಅವರು ಸಿಎಂ  ಉದ್ಧವ್ ಠಾಕ್ರೆ ಹಾಗೂ ವರುಣ್ ಸರ್ದೇಸಾಯಿ ವಿರುದ್ಧ ಮೊದಲ ದೂರು ದಾಖಲಿಸಿದ್ದಾರೆ. ಸರ್ದೇಸಾಯಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 153 (ಎ), 107, 212 ಮತ್ತು ಸೈಬರ್ ಅಪರಾಧ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸುನೀಲ್ ರಘುನಾಥ ಕೇದಾರ್ ಅವರು ಎರಡನೆಯ ದೂರು ಉದ್ಧವ್ ಠಾಕ್ರೆ ವಿರುದ್ಧ ದಾಖಲಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಠಾಕ್ರೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಠಾಕ್ರೆ ಮುಖ್ಯಮಂತ್ರಿಯಾಗುವುದಕ್ಕೂ ಮೊದಲು, 2018ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಒಂದು ವಿಡಿಯೋ ವೈರಲ್ ಆಗಿತ್ತು. ಅದರಲ್ಲಿ ಶಿವಾಜಿಯ ಪ್ರತಿಮೆಗೆ ಮಾಲಾರ್ಪಣೆ ಮಾಡುವಾಗ ಪಾದರಕ್ಷೆ ಧರಿಸಿದ್ದ ಯೋಗಿ ಆದಿತ್ಯನಾಥ್​ಗೆ ಅದೇ ಚಪ್ಪಲಿಯಿಂದ ಹೊಡೆಯಬೇಕು ಎಂದು ಠಾಕ್ರೆ ಹೇಳಿದ್ದರು. ಇದನ್ನು ಉಲ್ಲೇಖಿಸಿರುವ ದೂರುದಾರರು, ಆದಿತ್ಯನಾಥ್ ಯುಪಿಯ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಮಾತ್ರವಲ್ಲ, ಗೋರಖ್‌ಪುರ ಮಠದ ಪ್ರಧಾನ ಅರ್ಚಕ ಕೂಡ ಆಗಿದ್ದಾರೆ. ಆದ್ದರಿಂದ ಅನೇಕ ಹಿಂದೂಗಳ ಭಾವನೆಗಳಿಗೆ ಠಾಕ್ರೆ ನಡೆಯಿಂದ ನೋವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಶಿವಸೇನೆಯ ಮುಖವಾಣಿ ‘ಸಾಮ್ನಾ’ದಲ್ಲಿ ಬುಧವಾರ ಪ್ರಕಟವಾದ ಸಂಪಾದಕೀಯದಲ್ಲಿ, ರಾಣೆ ವಿರುದ್ಧ ಅನೇಕ ನಿಂದನೀಯ ಪದಗಳನ್ನು ಬಳಸಲಾಗಿದೆ, ಇದು ಅವರು ಹೊಂದಿರುವ ಕೇಂದ್ರ ಸಚಿವರ ಸಾಂವಿಧಾನಿಕ ಹುದ್ದೆಗೆ ‘ಅವಮಾನ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು