3:56 PM Monday17 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ನಿರಂತರ ಮಳೆಗೆ ಕುಸಿದ ಗುಡ್ಡ, ರಸ್ತೆ ಅಡಿಯಿಂದ ಜಾರಿದ ಮಣ್ಣು ; ಅದ್ಯಪಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳೇ ಬಂದ್ !!

06/07/2022, 12:39

ಚಿತ್ರ: ಗಣೇಶ್ ಅದ್ಯಪಾಡಿ ಮಂಗಳೂರು

ಬಜಪೆ (Reporterkarnataka.com)
ಮಂಗಳೂರು ತಾಲೂಕಿನ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅದ್ಯಪಾಡಿ ಪದವಿಗೆ ಸಂಪರ್ಕ ಕಲ್ಪಿಸುವ ಎರಡೂ ರಸ್ತೆಗಳು ಮಳೆಯ ಕಾರಣದಿಂದಾಗಿ ಮುಚ್ಚಿ ಹೋಗಿದ್ದು ಊರಿಗೆ ಸಂಪರ್ಕ ಕಲ್ಪಿಸುವ ಎರಡೂ ರಸ್ತೆಗಳಲ್ಲಿಯೂ ಸಂಚಾರವಿರದೆ ಹೊರಗಡೆಯಿಂದ ಸಂಪರ್ಕ ಕಳೆದುಕೊಳ್ಳುವ ಭೀತಿಯಿಂದ ಜನರು ಇದ್ದಾರೆ.


ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅದ್ಯಪಾಡಿ ಪದವಿನಿಂದ ಬಜಪೆಗೆ ಹೋಗುವಂತಹ ರಸ್ತೆಯಲ್ಲಿ ಗುಡ್ಡೆ ಬಿರಿದು ಪೂರ್ಣ ರಸ್ತೆಯ ಮೇಲೆ ಮಣ್ಣಿನ ರಾಶಿ ಆವರಿಸಿಕೊಂಡಿರುವುದರಿಂದ ಯಾವುದೇ ವಾಹನಗಳ ಸಂಚಾರ ಸಾಧ್ಯವಾಗುತ್ತಿಲ್ಲ.
ಅದೇ ರೀತಿ ಅದ್ಯಪಾಡಿ ಶಾಲೆಯಿಂದ ಕೆಂಜಾರು ಕಡೆ ಹೋಗುವ ರಸ್ತೆಯಲ್ಲಿ ಕಾಂಕ್ರೀಟ್ ಕೆಳಭಾಗದಿಂದ ಮಣ್ಣು ಕುಸಿದು ಹೋಗಿದ್ದು, ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ರಸ್ತೆಯ ಕೆಳಭಾಗದಿಂದ ಮಣ್ಣು ಸರಿದು ಹೋಗಲು ರಭಸವಾಗಿ ಹರಿದ ನೀರು ಕಾರಣವಾಗಿದ್ದು, ಹಲವು ಮಂದಿ ಏರ್ಪೋರ್ಟ್ ಮೇಲೆ ಕೂಡ ಆರೋಪವನ್ನು ಹೊರಿಸುತ್ತಿದ್ದಾರೆ.


ಸ್ಥಳಕ್ಕೆ ಶಾಸಕ ಡಾ.ವೈ.ಭರತ್ ಶೆಟ್ಟಿ ಭೇಟಿಯನ್ನು ನೀಡಿದ್ದಾರೆ. ಒಟ್ಟಿನಲ್ಲಿ ಅದ್ಯಪಾಡಿಯ ಜನತೆಗೀಗ ಸಂಪರ್ಕ ಕಲ್ಪಿಸುವ ಎರಡೂ ರಸ್ತೆಗಳನ್ನು ಉಪಯೋಗಿಸಲಾಗದೆ ಅಸಹಾಯಕ ಪರಿಸ್ಥಿತಿಯಲ್ಲಿದ್ದು, ಆಡಳಿತ ವ್ಯವಸ್ಥೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ತ್ವರಿತ ಕ್ರಮವನ್ನು ತೆಗೆದುಕೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು