6:12 AM Wednesday7 - October 2026
ಬ್ರೇಕಿಂಗ್ ನ್ಯೂಸ್
ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್

ಇತ್ತೀಚಿನ ಸುದ್ದಿ

ನಿರಂತರವಾಗಿ ಗುಣಮಟ್ಟದ ವಿದ್ಯುತ್ ನೀಡಲು ಬಿಜೆಪಿ ಸರಕಾರ ಬದ್ದ: ಸಚಿವ ವಿ. ಸುನೀಲ್ ಕುಮಾರ್

19/10/2022, 18:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka gmail.com

ರಾಜ್ಯದಲ್ಲಿ ನಿರಂತರವಾದ ಗುಣಮಟ್ಟದ ವಿದ್ಯುತ್ ನೀಡಲು ಬಿಜೆಪಿ ಸರ್ಕಾರ ಬದ್ದತೆಯಿಂದ ಕಾರ್ಯ ನಿರ್ವಹಿಸುತ್ತಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್ ಹೇಳಿದರು.

ಬಣಕಲ್‌ನ ೩೩/೧೧ ಕೆವಿ ವಿದ್ಯುತ್ ಉಪಕೇಂದ್ರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಬೆಳಕು ಯೋಜನೆಯ ಮೂಲಕ ವಿದ್ಯುತ್ ರಹಿತ ಮನೆಗಳಿಗೆ ವಿದ್ಯುತ್ ನೀಡುವ ಕಾರ್ಯ ಮಾಡಲಾಗಿದೆ. ೧ ವರ್ಷದ ಅವಧಿಯಲ್ಲಿ ೨.೫ ಲಕ್ಷ ಮನೆಗಳಿಗೆ ವಿದ್ಯುತ್ ನೀಡಲಾಗಿದೆ. ಅಮೃಥ ಜ್ಯೋತಿ ಯೋಜನೆಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬಗಳಿಗೆ ಅನುಕೂಲವಾಗಿದೆ. ನವೆಂಬರ್ ೧ರಿಂದ ನವೆಂಬರ್ ೧೫ ರವರೆಗೆ ಟ್ರಾನ್ಸ್ಪಾರ್ಮರ್ ನಿರ್ವಹಣಾ ಅಭಿಯಾನದ ಮೂಲಕ ರಾಜ್ಯದ ಟಾನ್ಸ್ಪಾರ್ಮರ್‌ಗಳನ್ನು ಸದಾ ಸುಸ್ಥಿತಿಯಲ್ಲಿಡಲು ಅಭಿಯಾನ ಕೈಗೊಳ್ಳಲಾಗಿದೆ ಎಂದರು.

ಕಾಫಿಬೆಳೆಗಾರರಿಗೆ ೧೦ ಎಚ್‌ಪಿ ವಿದ್ಯುತ್ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ.. ಸರ್ಕಾರ ಸಣ್ಣ ಹಿಡುವಳಿದಾರರ ನಿಯಮಾವಳಿಗಳನ್ನು ಸಡಿಲ ಮಾಡಲು ಸಿದ್ದವಿದೆ. ರೈತರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ೧ ವರ್ಷಕ್ಕೆ ೧೬ ಸಾವಿರ ಕೋಟಿ ಸಬ್ಸಿಡಿ ನೀಡುವ ಮೂಲಕ ರೈತರಿಗೆ ಅನುಕೂಲ ಮಾಡಲಾಗಿದೆ ಎಂದರು.
ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತನಾಡಿ ೨೦೧೨ ರಲ್ಲಿ ಪ್ರಾರಂಭವಾದ ಬಣಕಲ್ ವಿದ್ಯುತ್ ಉಪಕೇಂದ್ರದ ಪ್ರಕ್ರಿಯೆ ಇಂದು ಪೂರ್ಣಗೊಂಡು ಲೋಕಾರ್ಪಣೆಗೊಂಡಿದೆ. ಬಣಕಲ್ ವಿದ್ಯುತ್ ಉಪಕೇಂದ್ರದ ನಿರ್ಮಾಣದಿಂದ ಗುಣಮಟ್ಟದ ವಿದ್ಯುತ್ ನೀಡಲು ಅನುಕೂಲವಾಗಿದೆ. ಮಲೆನಾಡು ಭಾಗದಲ್ಲಿ ಮರ ಉರುಳುವ, ಮಳೆ ಹೆಚ್ಚಾಗಿ ಸುರಿಯುವ ಕಾರಣದಿಂದ ವಿದ್ಯುತ್ ಮಾರ್ಗಗಳಿಗೆ ಹಾನಿಯಾಗುವುದು ಸಾಮಾನ್ಯವಾಗಿದ್ದು ನೆಲದಡಿಯಲ್ಲಿ ಕೇಬಲ್ ಅಳವಡಿಸಿ ವಿದ್ಯುತ್ ಸರಬರಾಜು ಮಾಡುವುದು ಹೆಚ್ಚು ಅನುಕೂಲ ಎಂದರು.

ವಿಧಾನ ಪರಿಷತ್ ಸದಸ್ಯ ಎಂ.ಕೆ ಪ್ರಾಣೇಶ್ ಮಾತನಾಡಿ ಸರ್ಕಾರ ರೈತರ, ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ ಬಂದಿದ್ದು ಆ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದೆ. ರಾಜ್ಯ ಸರ್ಕಾರ ರೈತ ಸಮಸ್ಯೆಗಳಿಗೆ ಒತ್ತು ನೀಡಿ ರೈತಪರವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಈ ಸಂದರ್ಭದಲ್ಲಿ ಬಣಕಲ್ ಗ್ರಾ.ಪಂ ಅಧ್ಯಕ್ಷೆ ಲೀಲಾವತಿ, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಪ್ರಶಾಂತ್ ಕುಮಾರ್ ಮಿಶ್ರಾ, ತಾಂತ್ರಿಕ ನಿರ್ದೇಶಕರಾದ ಡಿ ಪದ್ಮಾವತಿ, ಮೆಸ್ಕಾಂ ಮುಖ್ಯ ಇಂಜಿನಿಯರ್ ಹೆಚ್.ಬಸಪ್ಪ, ಅಧೀಕ್ಷಕ ಇಂಜಿನಿಯರ್ ಬಿ ಸೋಮಶೇಖರ್, ತಹಶೀಲ್ದಾರ್ ನಾಗರಾಜ್, ತರುವೆ ಗ್ರಾ.ಪಂ ಅಧ್ಯಕ್ಷ ಸತೀಶ್ ಬಿ.ಎಂ, ತಾಲ್ಲೂಕು ಬಿಜೆಪಿ ಅಧ್ಯಕ್ಷ ರಘು ಜನ್ನಾಪುರ, ಹೋಬಳಿ ಅಧ್ಯಕ್ಷ ಅನೂಪ್ ಕುಮಾರ್, ಬಿಜೆಪಿ ಮುಖಂಡರಾದ ಬಿ.ಎಂ ಭರತ್, ಹಳಸೆ ಶಿವಣ್ಣ, ಟಿ.ಎಂ ಗಜೇಂದ್ರ, ಪರೀಕ್ಷಿತ್ ಜಾವಳಿ, ಬೆಳೆಗಾರರ ಸಂಘದ ಅಧ್ಯಕ್ಷ ಬಾಲಕೃಷ್ಣ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು