8:02 AM Wednesday26 - November 2025
ಬ್ರೇಕಿಂಗ್ ನ್ಯೂಸ್
ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ

ಇತ್ತೀಚಿನ ಸುದ್ದಿ

ನಿರಂತರ ಮಳೆ: ಅಥಣಿಯಲ್ಲಿ ಸಾವಿರಾರು ಎಕರೆ ದ್ರಾಕ್ಷೆ ಬೆಳೆ ನಾಶ; ಆಕಾಶದತ್ತ ಮುಖ ಮಾಡಿದ ರೈತರು

25/11/2021, 15:20

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ವಾಯುಭಾರ  ಕುಸಿತದಿಂದ ರಾಜ್ಯಾದ್ಯಂತ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ರಾಜ್ಯದಲ್ಲಿ ರೈತನ ಕಷ್ಟ ಹೇಳಿ ತೀರದು.ಉತ್ತರ ಕರ್ನಟಕದಲ್ಲಿ ಮಳೆ ಏನೋ ಕಡಿಮೆ ಇದೆ, ಆದರೆ ಮೋಡ ಕವಿದ ವಾತಾವರಣದಿಂದ ವಾಣಿಜ್ಯ ಬೆಳೆ ದ್ರಾಕ್ಷಿ ಈಗ ರೋಗಕ್ಕೆ ತುತ್ತಾಗಿ ಬೆಳೆ ಸಂಪೂರ್ಣ ನಾಶವಾಗಿದೆ.


ಕೋವಿಡನಿಂದ್ ಸತತ ಎರಡು ವರ್ಷ ನಷ್ಟ ಅನುಭವಿಸಿದ ರೈತ ಈಗಲಾದರೂ ಲಾಭ ಆಗಬಹುದು ಎಂದು ರಾತ್ರಿ-ಹಗಲು ಕಷ್ಟಪಟ್ಟು ಇನ್ನೇನು ಬೆಳೆ ಚೆನ್ನಾಗಿ ಬಂತು ಅನ್ನೋವಷ್ಟರಲ್ಲಿ ಪ್ರಕೃತಿ ವಿಕೋಪಕ್ಕೆ ರೈತ ಬಲಿಪಶು ಆಗಿದ್ದಾನೆ.

ತುಂತುರು ಮಳೆಗೆ ದ್ರಾಕ್ಷಿ ಬೆಳೆ ಸಂಪೂರ್ಣ ಕೊಳೆತುಹೋಗಿವೆ. ಎಕರೆಗೆ ಸುಮಾರು ಎರಡರಿಂದ ಮೂರು ಲಕ್ಷ ರೂಪಾಯಿ ಖರ್ಚಾಗಿದ್ದು ಈಗ ಒಂದು ರೂಪಾಯಿ ಕೂಡ ನಮಗಿಲ್ಲ.  ಸೂಕ್ತ ಪರಿಹಾರ ಒದಗಿಸುವುದಾಗಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಗ್ರಾಮದ ರೈತ ಪಾಂಡುರಂಗಹಬಗುಂಡೆ ಮಾಧ್ಯಮದ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು.

ಅಥಣಿ ತಾಲೂಕಿನ ಅನಂತಪುರ ಹೂಬಳಿ ವ್ಯಾಪ್ತಿಯಲ್ಲಿ ಸುಮಾರು 100ರಿಂದ 200 ಎಕರೆ ದ್ರಾಕ್ಷಿ ಬೆಳೆದ ರೈತರಿಗೆ ಅಪಾರ ಪ್ರಮಾಣದ ನಷ್ಟವಾಗಿದೆ. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಪರಿಹಾರ ಒದಗಿಸಿ ಎಂದು ಮಾಂತೇಶ್ ಚಿಗ್ರೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಗ್ರಾಮದ ರೈತರಾದ ಪ್ರವೀಣ್ ಪವಾರ ಮಾತನಾಡಿ ನಾನು ಸುಮಾರು 60 ಲಕ್ಷ ಖರ್ಚು ಮಾಡಿ ದ್ರಾಕ್ಷಿ ಬೆಳೆ ಬೆಳೆದಿದ್ದೇನೆ. ಬಡ್ಡಿ ಸಹಿತ ಬಂದಿಲ್ಲ ಎಂದು ನೋವನ್ನ ಹಂಚಿಕೊಂಡರು ಏನೆ ಆಗಲಿ ನೊಂದ ರೈತರ ಕೈ ಹಿಡಿಯುತ್ತ ಸರ್ಕಾರ ಅನ್ನೋದನ್ನ ಕಾದು ನೋಡಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು