12:16 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನೀರಾವರಿ ಇಲಾಖೆ 2 ಸಾವಿರ ಕೋಟಿ ಅವ್ಯವಹಾರ ಆರೋಪ: ಮಾಜಿ ಸಿಎಂ ಯಡಿಯೂರಪ್ಪ ಆಪ್ತನ ಮನೆ ಸೇರಿದಂತೆ 50 ಕಡೆಗಳಲ್ಲಿ ಐಟಿ ದಾಳಿ

07/10/2021, 13:00

ಬೆಂಗಳೂರು(reporterkarnataka.com) : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್‌ ಅವರ ನಗರದ

ಬಾಷ್ಯಂ ಸರ್ಕಲ್‌ನಲ್ಲಿರುವ ಮನೆಯ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು 50 ಕಡೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಬಾಷ್ಯಂ ಸರ್ಕಲ್‌ನಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಉಮೇಶ್‌ ವಾಸವಾಗಿದ್ದರು. ಐಟಿ ದಾಳಿಯ ವೇಳೆಯಲ್ಲಿ ಉಮೇಶ್‌ ಮನೆಯಲ್ಲಿದ್ದರು ಎಂಬ ಮಾಹಿತಿ ಇದೆ.

ಉಮೇಶ್‌ ಅವರು ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆಗಳ ಮೇಲೆಯೂ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಬಿಎಂಟಿಸಿಯಲ್ಲಿ ಡ್ರೈವರ್‌/ ಕಂಡಕ್ಟರ್‌ ಆಗಿದ್ದ ಉಮೇಶ್‌ ಡೆಪ್ಯುಟೇಷನ್‌ ಆಧಾರದ ಮೇಲೆ ಯಡಿಯೂರಪ್ಪ ಅವರ ಆಪ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ಯಡಿಯೂರಪ್ಪ ಪ್ರತಿಪಕ್ಷದ ನಾಯಕರಾಗಿದ್ದಾಗಲೂ ಸೇವೆ ಸಲ್ಲಿಸಿದ್ದರು.

ಯಡಿಯೂರಪ್ಪ ಅವರ ಆಡಳಿತ ಕಾಲದಲ್ಲಿ ನೀರಾವರಿ ಇಲಾಖೆಯಲ್ಲಿ ಸುಮಾರು 2 ಎರಡು ಸಾವಿರ ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ನೀರಾವರಿ ಇಲಾಖೆಯ ಟೆಂಡರ್‌, ಬಿಲ್‌ ಪಾಸ್‌ ಮಾಡಿರುವುದಕ್ಕೆ ಸಂಬಂಧಿಸಿದಂತೆ ಎಲ್ಲಾ ವ್ಯವಹಾರಗಳನ್ನೂ ಉಮೇಶ್‌ ಅವರೇ ನೋಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಉಮೇಶ್‌ ಅವರು ಗುತ್ತಿಗೆದಾರರು ಸಿಮೆಂಟ್‌ ಡೀಲರ್‌ ಗಳ ಸಂಪರ್ಕ ಹೊಂದಿದ್ದರು. ಚಾರ್ಟೆಡ್‌ ಅಕೌಂಟೆಂಟ್‌ಗಳು ಜೊತೆಗೆ ಸಂಪರ್ಕ ಟ್ಯಾಕ್ಸ್‌ ವಂಚನೆ ನಡೆಸಿರುವ ಆರೋಪ ಕೇಳಿ ಬಂದಿದೆ.‌ ಈ ಕುರಿತು ತನಿಖೆಯಿಂದಲೇ ಹೆಚ್ಚಿನ ವಿವರ ತಿಳಿದು ಬರಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು