1:51 PM Saturday2 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

ನಿರ್ಭಯ ಮಾದರಿ ಗ್ಯಾಂಗ್ ರೇಪ್‌ಗೆ ಸಾಕ್ಷಿಯಾದ ಬೆಂಗಳೂರು : ಯುವತಿಯ ಗುಪ್ತಾಂಗಕ್ಕೆ ಬಾಟಲಿ ತುರುಕಿ ವಿಕೃತಿ ಮೆರೆದ ಕಾಮುಕರು

28/05/2021, 14:10

ಬೆಂಗಳೂರು (Reporter Karnataka News) ಯುವತಿಯೊಬ್ಬಳ ಮೇಲೆ ಸಾಮೂಹಿಕವಾಗಿ ಪೈಶಾಚಿಕ ರೀತಿಯಲ್ಲಿ ಅತ್ಯಾಚಾರ ನಡೆಸಿ ವೀಡಿಯೋ ಮಾಡಿ ಹರಿಯ ಬಿಟ್ಟು ವಿಕೃತಿ ಮೆರೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ತಾವು ಮಾಡಿದ ಹೇಯ ಕೃತ್ಯವನ್ನು ತಾವೇ ಜಾಲತಾಣಗಳಿಗೆ ಹರಿಬಿಟ್ಟ ಮೇಲಷ್ಟೇ ಈ ಗ್ಯಾಂಗ್ ರೇಪ್ ಪ್ರಕರಣ ಸುದ್ದಿಯಾಗಿದೆ.

ಯುವತಿಯ ಮೇಲೆ ಭಯಾನಕವಾಗಿ ಹಲ್ಲೆ ನಡೆಸಿದ ದುರುಳರು ಆಕೆಯ ಗುಪ್ತಾಂಗಕ್ಕೆ ಮದ್ಯದ ಬಾಡಲ್ ತುರುಕಿ ವಿಕೃತಿ ಮೆರೆದಿದ್ದಾರೆ.

ಈ ಭೀಕರ ಕೃತ್ಯಕ್ಕೆ ಒಬ್ಬ ಮಹಿಳೆಯೂ ಕೈಜೋಡಿಸಿರುವುದು ವೈರಲ್ ಆದ ವಿಡಿಯೋದಿಂದ ಬೆಳಕಿಗೆ ಬಂದಿದೆ. ಸುಮಾರು ಹತ್ತು ದಿನಗಳ ಹಿಂದೆ ಈ ಪ್ರಕರಣ ನಡೆದಿದ್ದು ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಪೊಲೀಸರ ಮೂಲಕ ಈ ವಿಷಯ ಬೆಂಗಳೂರಿನ ಪೊಲೀಸರಿಗೆ ತಿಳಿದುಬಂದಿದೆ. ಈ ಪೈಶಾಚಿಕ ಕೃತ್ಯ ನಡೆಸಿದವರು ಬಂಗಾಲಿ ಭಾಷೆ ಮಾತನಾಡುತ್ತಿದ ಕಾರಣ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಅಸ್ಸಾಂ ಯುವತಿಯ ಮೇಲೆ ಬಾಂಗ್ಲಾದೇಶೀಯರ ದೌರ್ಜನ್ಯ ಎಂಬ ಆಕ್ರೋಶವೂ ಅಲ್ಲಿ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸರು ತನಿಖೆ ನಡೆಸಿದಾಗ ಈ ಕೃತ್ಯ ಬೆಂಗಳೂರಿನಲ್ಲಿ ನಡೆದಿರುವ ವಿಷಯ ಬೆಳಕಿಗೆ ಬಂದಿದೆ.

ಬೆಂಗಳೂರು ಪೊಲೀಸರ ಪ್ರಕಾರ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಮತ್ತು ಆರೋಪಿಗಳು ಬಾಂಗ್ಲಾದೇಶ ಮೂಲದವರಾಗಿದ್ದು, ಅಕ್ರಮವಾಗಿ ಭಾರತ ಪ್ರವೇಶಿಸಿದ್ದರು ಎಂಬ ಮಾಹಿತಿ ಇದೆ. ರಾಮಮೂರ್ತಿ ನಗರದ NRI ಕಾಲೊನಿಯಲ್ಲಿ ವಾಸಿಸುತ್ತಿದ್ದ ಈ ಗುಂಪು, ಅಲ್ಲಿಯೇ ವೇಶ್ಯಾವಾಟಿಕೆಯಲ್ಲಿ ತೊಡಗಿತ್ತು ಎನ್ನಲಾಗಿದೆ. ಸಂತ್ರಸ್ತೆ ಮೇಲಿನ ದ್ವೇಷದಿಂದ ಈ ಯುವಕರು ಈ ಪೈಶಾಚಿಕ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಸದ್ಯ ಬೆಂಗಳೂರು ಪೊಲೀಸರು ಅತ್ಯಾಚಾರಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಾಂಗ್ಲಾ ಮೂಲದ ಸಾಗರ್ , ಮೊಹಮ್ಮದ್ ಬಾಬಾ ಶೇಕ್ ರಿದಾಯ್ ಬಾಬು ಹಾಗೂ ಹೈದರಾಬಾದ್ ಮೂಲದ ಹಕೀಲ್‌ನನ್ನು ವಶಕ್ಕೆ ಪಡೆಯಲಾಗಿದೆ . ಇನ್ನುಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ . ಸಂತ್ರಸ್ಥೆ ಕೂಡ ನಾಪತ್ತೆಯಾಗಿದ್ದಾಳೆ. ಆಕೆಗಾಗಿಯೂ ಹುಡುಕಾಟ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು