11:12 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ನಿಷ್ಠರಿಗೆ ಸಚಿವ ಸ್ಥಾನ: ದಿಲ್ಲಿಯಲ್ಲಿ ವರಿಷ್ಠರ ಮುಂದೆ ಸಿದ್ದು-ಡಿಕೆಶಿ ಲಾಬಿ; ಪೇಚಿಗೆ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್

25/05/2023, 18:56

ಮೃದುಲಾ ನಾಯರ್ ಹೊಸದಿಲ್ಲಿ

info.reporterkarnataka@gmail.com

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರದಿಂದ ದೆಹಲಿಯಲ್ಲಿ ಭೀಡುಬಿಟ್ಟಿದ್ದು, ವರಿಷ್ಠರ ಜತೆ ಒಂದರ ಮೇಲೊಂದು ಸಭೆ ನಡೆಯುತ್ತಲೇ ಇದೆ. ತಮ್ಮ ಆಪ್ತರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಚಿವ ಸ್ಥಾನ ನೀಡಿ ತಮ್ಮ ಪ್ರಾಬಲ್ಯ ಹೆಚ್ಚಿಸಿಕೊಳ್ಳುವ ಜಿದ್ದಿಗೆ ಸಿಎಂ ಮತ್ತು ಡಿಸಿಎಂ ಬಿದ್ದಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಕಗ್ಗಂಟಾಗಿ ಪರಿಣಮಿಸಿದೆ.

ಬೆಂಗಳೂರಿನಲ್ಲಿ ಬುಧವಾರ ಸ್ಪೀಕರ್ ಆಯ್ಕೆ ನಡೆದ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್ ಅವರು ಒಂದೇ ವಿಮಾನದಲ್ಲಿ ದಿಲ್ಲಿಗೆ ಹೋಗಿದ್ದರು. ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಮುನ್ನ ಬುಧವಾರ ರಾತ್ರಿಯೇ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವರಿಷ್ಠರನ್ನು ಭೇಟಿ ಮಾಡಿ ತಮ್ಮ ಆಪ್ತರಿಗೆ ಸಚಿವ ಸ್ಥಾನ ನೀಡುವಂತೆ ಲಾಬಿ ನಡೆಸಿದ್ದಾರೆ ಎಂಬ ಮಾಹಿತಿ ರಿಪೋರ್ಟರ್ ಕರ್ನಾಟಕಕ್ಕೆ ಲಭ್ಯವಾಗಿದೆ.
ಸಿದ್ದರಾಮಯ್ಯ ಭೇಟಿಗೂ ಮೊದಲೇ ಶಿವಕುಮಾರ್ ಮತ್ತು ಅವರ ತಮ್ಮ ಸಂಸದ ಡಿ.ಕೆ ಸುರೇಶ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇಂದು ರಾತ್ರಿಯೊಳಗೆ ನೂತನ ಸಚಿವರ ಪಟ್ಟಿ ಸಿದ್ದವಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು