ಇತ್ತೀಚಿನ ಸುದ್ದಿ
ಎನ್ ಐಟಿಕೆ ಬೀಚ್: ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯ ಬಂಧನ
01/08/2022, 22:57
ಸುರತ್ಕಲ್(reporterkarnataka.com) ಇಲ್ಲಿಗೆ ಸಮೀಪದ ಎನ್ ಐಟಿಕೆ ಬೀಚ್ ಬಳಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮುನಾಝ್ ಅಹಮ್ಮದ್(30) ಎಂದು ಗುರುತಿಸಲಾಗಿದೆ.
ಜು.27 ರಂದು ಎನ್ ಐಟಿಕೆ ಬೀಚ್ ಗೆ ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಯೊಂದಿಗೆ ಬಂದಿದ್ದಳು. ಈ ವೇಳೆ ಮುನಾಝ್ ಅಹಮ್ಮದ್ ವಿದ್ಯಾರ್ಥಿನಿಯ ಸಹಪಾಠಿಯನ್ನು ಹೆದರಿಸಿ ಓಡಿಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಕೃತ್ಯದ ವೀಡಿಯೋ ಮಾಡಿಕೊಂಡಿದ್ದ ಆರೋಪಿ ಬಳಿಕ ಅದನ್ನು ತೋರಿಸಿ ಕಿರುಕುಳ ನೀಡುತ್ತಿದ್ದ.
ಈ ಬಗ್ಗೆ ವಿದ್ಯಾರ್ಥಿನಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಳು. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.














