ಇತ್ತೀಚಿನ ಸುದ್ದಿ
ನಿಟ್ಟೆ ಯೂನಿವರ್ಸಿಟಿ ಕುಲಪತಿ, ನಿಟ್ಟೆ ಗ್ರೂಪ್ ಆಫ್ ಎಜುಕೇಶನಲ್ ಇನ್‌ಸ್ಟಿಟ್ಯೂಷನ್‌ಗಳ ಸ್ಥಾಪಕ ವಿನಯ ಹೆಗ್ಡೆ ನಿಧನ
01/01/2026, 10:48
ಮಂಗಳೂರು(reporterkarnataka.com): ನಿಟ್ಟೆ ಡೀಮ್ಡ್-ಟು-ಬಿ-ಯೂನಿವರ್ಸಿಟಿ ಕುಲಪತಿ ಮತ್ತು ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎನ್. ವಿನಯ್ ಹೆಗ್ಡೆ ಅವರು ಇಂದು ಮುಂಜಾನೆ ಹೃದಯಾಘಾತದಿಂದ ಮಂಗಳೂರಿನ ಶಿವಭಾಗ್ ನಲ್ಲಿರುವ ನಿವಾಸದಲ್ಲಿ ನಿಧನರಾದರು. ಶಿವಬಾಗ್‌ನಲ್ಲಿರುವ ‘ಸದಾನಂದ’ ನಿವಾಸದಲ್ಲಿ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ.
ಅವರಿಗೆ 86 ವರ್ಷ ವಯಸ್ಸಾಗಿತ್ತು ಮತ್ತು ಅವರು ಪತ್ನಿ ಸುಜಾತಾ ಹೆಗ್ಡೆ, ಪುತ್ರ ವಿಶಾಲ್ ಹೆಗ್ಡೆ ಮತ್ತು ಪುತ್ರಿ ಅಶ್ವಿತಾ ಪೂಂಜಾ ಅವರನ್ನು ಅಗಲಿದ್ದಾರೆ.
ವಿನಯ ಹೆಗ್ಡೆ ಅವರು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ, ಲೋಕಸಭೆ ಮಾಜಿ ಸ್ಪೀಕರ್ ದಿವಂಗತ ಕೆ.ಎಸ್. ಹೆಗ್ಡೆ ಅವರ ಪುತ್ರ.
ಕರ್ನಾಟಕ ಮಾಜಿ ಲೋಕಾಯುಕ್ತ ಮತ್ತು ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎನ್. ಸಂತೋಷ್ ಹೆಗ್ಡೆ ಅವರ ಸಹೋದರರಾಗಿದ್ದರು.
ನಿಟ್ಟೆ ಗ್ರೂಪ್ ಆಫ್ ಎಜುಕೇಶನಲ್ ಇನ್‌ಸ್ಟಿಟ್ಯೂಷನ್‌ಗಳ ಸ್ಥಾಪಕರಾಗಿದ್ದಾರೆ.
ಹೆಗ್ಡೆ ಅವರ ಪಾರ್ಥಿವ ಶರೀರವನ್ನು ಮಧ್ಯಾಹ್ನ 3 ಗಂಟೆಯವರೆಗೆ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ನಿಟ್ಟೆ ಶಿಕ್ಷಣ ಆವರಣದಲ್ಲಿ ಸಂಜೆ 4.30ರಿಂದ ಸಂಜೆ 6 ಗಂಟೆಗೆ ಅಂತಿಮ ದರ್ಶನಕ್ಕೆ ಇಡಲಾಗುವುದು.












