2:51 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ನಿವೃತ್ತ ಎಸಿಪಿ, ಮುಖ್ಯಮಂತ್ರಿ ಪದಕ ವಿಜೇತ ಸುರ್ಯ ಗುತ್ತು ಸುಭಾಶ್ಚಂದ್ರ ಇನ್ನಿಲ್ಲ

31/05/2023, 12:05

ಮಂಗಳೂರು(reporterkarnataka.com): ನಿವೃತ್ತ ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್(ಎಸಿಪಿ), ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯ ಗುತ್ತು ಸುಭಾಶ್ಚಂದ್ರ( 70) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ದಿವಂಗತರು ಪತ್ನಿ, ಓರ್ವ ಪುತ್ರ, ಸಹೋದರ ಎಸ್. ಡಿ.ಎಂ. ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಸ್. ಸತೀಶ್ಚಂದ್ರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸುಭಾಶ್ಚಂದ್ರ ಅವರು 1979 ರಲ್ಲಿ ಪೊಲೀಸ್ ಇಲಾಖೆಗೆ ಎಸೈ ಆಗಿ ಸೇರ್ಪಡೆಗೊಂಡರು. ಅವರು ಬಳಿಕ ಬೆಂಗಳೂರು, ಮಡಿಕೇರಿ, ಕಾರವಾರ, ಉಡುಪಿ, ಮಂಗಳೂರು, ಬೆಳ್ತಂಗಡಿ, ಪುತ್ತೂರು ಮತ್ತಿತರ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದರು. ಪೊಲೀಸ್ ಇಲಾಖೆಯಲ್ಲಿ ಅವರು ಸಲ್ಲಿಸಿದ ವಿಶೇಷ ಸೇವೆಗಾಗಿ ಅವರಿಗೆ 2008 ರಲ್ಲಿ ಮುಖ್ಯ ಮಂತ್ರಿಯವರ ಪದಕ ಲಭಿಸಿತ್ತು. ಅವರು ಒಂದು ವರ್ಷದ ಕಾಲ ಕೊಸೊವೊದಲ್ಲಿ ವಿಶ್ವ ಸಂಸ್ಥೆಯ ಶಾಂತಿ ಪಾಲನಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು