10:43 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನಿವೃತ್ತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಎಚ್.ಎಂ. ಪೂವಪ್ಪ ಅವರಿಗೆ ಬೀಳ್ಕೊಡುಗೆ

04/06/2023, 19:46

ಮಂಗಳೂರು(reporterkarnataka.com): ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಗಿ ಬಜಪೆ ಪೊಲೀಸ್ ಠಾಣೆಯಲ್ಲಿ ನಿವೃತ್ತರಾದ ಎಚ್.ಎಂ.ಪೂವಪ್ಪ ಅವರಿಗೆ ಬೀಳ್ಕೊಡುಗೆ ನಡೆಯಿತು.
ಎಚ್.ಎಂ.ಪೂವಪ್ಪ ಅವರನ್ನು ಸನ್ಮಾನಿಸಿ, ಸ್ಮರಣಿಕೆ ನೀಡಿ ಗೌರವಿಸಿದ ಮಂಗಳೂರು ಸಹಾಯಕ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ಅವರು ಮಾತನಾಡಿ, ಉತ್ತಮ ಸೇವಾ ಹಿನ್ನೆಲೆಯೊಂದಿಗೆ ಎಚ್.ಎಂ. ಪೂವಪ್ಪ ಅವರು ಸೇವೆಯಿಂದ ನಿವೃತ್ತರಾಗುತ್ತಿರುವುದು ಸಂತೋಷದ ವಿಷಯ. ನಿವೃತ್ತ ಜೀವನದಲ್ಲಿ ಕುಟುಂಬದ ಸದಸ್ಯರೊಂದಿಗೆ ಸೇವಾ ಅವಧಿಯ ಒಳ್ಳೆಯ ಅನುಭವಗಳನ್ನು ಮೆಲುಕು ಹಾಕುತ್ತಾ ಸಂತೃಪ್ತ ಜೀವನ ನಡೆಸುವಂತೆ ಶುಭ ಹಾರೈಸಿದರು.


ಪೂವಪ್ಪ ಅವರು ನಡೆಸಿರುವ 38 ವರ್ಷ ಎರಡು ತಿಂಗಳ ಸೇವಾವಧಿ ಸುದೀರ್ಘವಾಗಿದೆ. ಪೊಲೀಸ್ ಇಲಾಖೆಯ ಅಧಿಕಾರಿಗಳು ತಮ್ಮ ಸೇವಾಅವಧಿಯ ಸುಮಾರು ಶೇ.70 ಬಾಗವನ್ನು ಇಲಾಖೆ ಸಿಬ್ಬಂದಿ ಜೊತೆಯಲ್ಲೇ ಸಮವಸ್ತ್ರದೊಂದಿಗೆ ಕಳೆದಿರುತ್ತಾರೆ. ಕುಟುಂಬದ ಜೊತೆಗೆ ಕಳೆದಿರುವುದು ಕಡಿಮೆ. ಈ ವೃತ್ತಿಯಲ್ಲಿ ಇಲಾಕೆ ಸಿಬ್ಬಂದಿ ಮತ್ತು ಕುಟುಂಬದ ಸದಸ್ಯರ ತ್ಯಾಗ ಅನನ್ಯವಗಿದೆ ಎಂದು ಅವರು ಹೇಳಿದರು.
ಇಲಾಖೆಯ ಗೌರವ ಸ್ವೀಕರಿಸಿ ಮಾತನಾಡಿದ ಎಚ್.ಎಂ.ಪೂವಪ್ಪ ಅವರು, ಬಜಪೆ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಆಗಿ 38 ವರ್ಷಗಳ ಹಿಂದೆ ವೃತ್ತಿ ಜೀವನ ಆರಂಭಿಸಿದ ತಾನು ಅದೇ ಬಜಪೆ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ನಿವೃತ್ತಿಯಾಗುತ್ತಿದ್ದೇನೆ. ಸೇವಾ ಅವಧಿಯನ್ನು ಪೂರ್ಣಗೊಳಿಸಿದ ಸಂತೃಪ್ತಿಯಿದೆ. ಇಲಾಖೆ ಹಿರಿಯ ಅಧಿಕಾರಿಗಳು, ಸಹದ್ಯೋಗಿ ಮಿತ್ರರು ತೋರಿದ ಪ್ರೀತಿ, ವಿಶ್ವಾಸ, ಸಹಕಾರಕ್ಕೆ ಅಭಾರಿಯಾಗಿದ್ದೇನೆ ಎಂದು ಹೇಳಿದರು.
ಹಿರಿಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ನಿವೃತ್ತರ ಜೊತೆಗಿನ ಅನುಭವ ಹಂಚಿಕೊಂಡರು.
ಬಜಪೆ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಸರ್ಕಲ್ ಇನ್ಸ್‌ಪೆಕ್ಟರ್ ಕೆ.ಆರ್.ನಾಯಕ್ ಕೆ.ಆರ್.ನಾಯಕ್ ಮುಖ್ಯ ಅತಿಥಿಗಳಾಗಿದ್ದರು. ನಿವೃತ್ತ ಎಚ್.ಎಂ.ಪೂವಪ್ಪ ಅವರ ಪತ್ನಿ ಶಕುಂತಳಾ ಪೂವಪ್ಪ ಅವರು ಉಪಸ್ಥಿತರಿದ್ದರು.
ನಿವೃತ್ತ ಸಬ್ ಇನ್ಸ್‌ಪೆಕ್ಟರ್ ರಾಜಾರಾಂ ಕಾರ್ಯಕ್ರಮ ನಿರ್ವಹಿಸಿದರು. ಕೆಂಚಪ್ಪ ವಂದಿಸಿದರು.
…..

ಇತ್ತೀಚಿನ ಸುದ್ದಿ

ಜಾಹೀರಾತು