3:36 AM Monday17 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ರಾಜ್ಯದಲ್ಲೇ ಮಂಗಳೂರನ್ನು 2ನೇ ನಗರವಾಗಿ ಅಭಿವೃದ್ಧಿಪಡಿಸಲಾಗುವುದು: ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ

20/04/2023, 18:14

ಮಂಗಳೂರು(reporterkarnataka.com): ಮಂಗಳೂರು ನಗರವನ್ನು ರಾಜ್ಯದಲ್ಲಿಯೇ ಎರಡನೇ ನಗರವಾಗಿ ಅಭಿವೃದ್ದಿಪಡಿಸಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ ಹೇಳಿದರು.
ನಗರದ ಲಾಲ್ ಬಾಗ್ ನ ಪಾಲಿಕೆ ಕಚೇರಿಯಲ್ಲಿರುವ ಚುನಾವಣಾಧಿಕಾರಿ ಕಚೇರಿ ಯಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದ ಬಳಿಕ ಅವರು ಮಾಧ್ಯಮದ ಜತೆ ಮಾತನಾಡಿದರು.
ಮಂಗಳೂರಿನ ಅಭಿವೃದ್ಧಿಗೆ ನೀವೆಲ್ಲರೂ ಕೈಜೋಡಿಸಬೇಕು. ನಾವೆಲ್ಲರು ಸೇರಿ ಮಂಗಳೂರನ್ನು ರಾಜ್ಯದ ಎರಡನೇ ನಗರವಾಗಿ ಅಭಿವೃದ್ಧಿಪಡಿಸೋಣ. ಮಂಗಳೂರಿನಲ್ಲಿ ಉದ್ಯೋಗಗಳು ದೊರಕಬೇಕು. ಮಂಗಳೂರಿನ ಜನತೆ ಸೌಹಾರ್ದತೆಯಿಂದ ಅಣ್ಣ-ತಮ್ಮಂದಿರ ತರಹ ಬದುಕಬೇಕು. ನಮ್ಮ ಸಂವಿಧಾನದ ಆಶಯಗಳೇನಿದೆ ಅದರ ಪ್ರಕಾರ ಜಾತಿ-ಮತ ಬೇಧವಿಲ್ಲದೆ. ಎಲ್ಲ ಧರ್ಮಗಳ ಸಮಾನವಾಗಿ ಕಂಡು, ಎಲ್ಲರನ್ನು ಪ್ರೀತಿಸಿ ಸಾಮರಸ್ಯದ ಬದುಕನ್ನು ಕಾಣಬೇಕು. ಅದೇ ನಮ್ಮ ಗುರಿ. ನಮ್ಮಲ್ಲಿ ಬಂಡವಾಳ ಹೂಡಿಕೆಯಾಗಿ, ಉದ್ಯೋಗ ಸೃಷ್ಟಿಯಾಗಿ ನಮ್ಮ ಯುವಕ, ಯುವತಿಯರಿಗೆ ಮಂಗಳೂರಿನಲ್ಲೇ ಉದ್ಯೋಗ ದೊರಕುವ ವಾತಾವರಣ ನಿರ್ಮಾಣವಾಗಬೇಕು. ಯಾವುದೇ ಜಾತಿ- ಮತ- ಧರ್ಮದ ಬೇಧವಿಲ್ಲದೆ ಉತ್ತಮ ಬಾಳ್ವೆ ಮಾಡುವ ವಾತಾವರಣ ನಿರ್ಮಾಣವಾಗಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು