ಇತ್ತೀಚಿನ ಸುದ್ದಿ
Bangalore | ಕಾಶ್ಮೀರದಲ್ಲಿ ಸಿಲುಕಿದ್ದ 180 ಕನ್ನಡಿಗರ ಜತೆ ಸಚಿವ ಸಂತೋಷ್ ಲಾಡ್ ಬೆಂಗಳೂರಿಗೆ ಆಗಮನ
24/04/2025, 14:33

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದ ಮೇರೆಗೆ ಕಾಶ್ಮೀರದ ಪಹಲ್ಗಾಮ್ ನಲ್ಲಿ
ಉಗ್ರರ ದಾಳಿಗೆ ಸಿಲುಕಿದ್ದ ಕನ್ನಡಿಗರನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸುರಕ್ಷಿತವಾಗಿ ತಾಯ್ನಾಡಿಗೆ ಕರೆದು ತಂದಿದ್ದಾರೆ.
ಸಚಿವ ಸಂತೋಷ್ ಲಾಡ್ ಅವರು ಸುಮಾರು 180 ಕನ್ನಡಿಗರ ಜತೆ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಬುಧವಾರ ಬೆಳಗಿನ ಜಾವ 3 ಗಂಟೆಗೆ ಜಮ್ಮು ಕಾಶ್ಮೀರಕ್ಕೆ ತೆರಳಿದ್ದರು. ಅಲ್ಲಿ ಸಿಲುಕಿರುವ ಕನ್ನಡಿಗರನ್ನು ಒಂದಡೆ ಒಟ್ಟು ಸೇರಿಸಿ ಇಂದು ಬೆಳಗ್ಗೆ 8.30ಕ್ಕೆ ಶ್ರೀನಗರ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಮಧ್ಯಾಹ್ನ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಕರೆದು ತಂದಿದ್ದಾರೆ.