9:48 AM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಸೆ.15ರ ವರೆಗೆ ಸ್ನಾತಕ, ಸ್ನಾತಕೋತ್ತರ ಪದವಿ ತರಗತಿ ಆರಂಭಿಸದಂತೆ ಜಿಲ್ಲಾಧಿಕಾರಿ ಸೂಚನೆ

26/08/2021, 20:37

ಮಂಗಳೂರು(reporterkarnatka.com)

ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್‍ಲೈನ್ ಮೂಲಕವಷ್ಟೇ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ನಿರ್ದೇಶನ ನೀಡಿದ್ದಾರೆ.

ಕೋವಿಡ್ ಸೋಂಕು ಹಿನ್ನಲೆಯಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಭೌತಿಕ ತರಗತಿಗಳನ್ನು ಪ್ರಾರಂಭಿಸುವ ಕುರಿತು ಆ.26ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ ಜಿಲ್ಲೆಯ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಸೆಪ್ಟೆಂಬರ್ 15ರೊಳಗೆ ಕಡಿಮೆಯಾದಲ್ಲಿ ಮತ್ತೊಮ್ಮೆ ಸಂಬಂಧಪಟ್ಟ ಕಾಲೇಜು ಶಿಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಭೌತಿಕ ತರಗತಿಗಳನ್ನು ಪ್ರಾರಂಭಿಸಲು ಚರ್ಚಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು, ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಗತಿಗಳನ್ನು ಬ್ಯಾಚ್‍ವೈಸ್ ಮೂಲಕ ಕೋವಿಡ್ ಮಾರ್ಗಸೂಚಿಗಳ ಅನುಸಾರವೇ ನಡೆಸಬೇಕು, ವಿಜ್ಞಾನ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ವಿಭಾಗಗಳ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕವೇ ತರಗತಿಗಳನ್ನು ನಡೆಸುವಂತೆ ಸೂಚನೆ ನೀಡಿದ್ದಾರೆ.

ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕಡ್ಡಾಯವಾಗಿ ಕೋವಿಡ್ ನಿರೋಧಕ ಲಸಿಕೆ ಪಡೆದಿರಬೇಕು, ಲಸಿಕೆ ಪಡೆಯದ ಸಿಬ್ಬಂದಿಗಳು ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳದ ಮಾಹಿತಿಯನ್ನು ಕಾಲೇಜು ಶಿಕ್ಷಣಾಧಿಕಾರಿಗಳು ನೀಡಬೇಕು, ನೆಟ್‍ವರ್ಕ್ ಸಮಸ್ಯೆಯಿಂದ ಗ್ರಾಮೀಣ ಭಾಗದ ಕೆಲವು ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಗಳಿಗೆ ಹಾಜರಾಗುವುದು ಸಮಸ್ಯೆಯಾಗಿದೆ, ಜಿಲ್ಲಾಡಳಿತದಿಂದ ಪರ್ಯಾಯ ಮಾರ್ಗ ಹುಡುಕಿ ಅಂತಹ ವಿದ್ಯಾರ್ಥಿಗಳಿಗೆ ತರಗತಿಗಳಿಗೆ ಹಾಜರಾಗುವ ವ್ಯವಸ್ಥೆ ಮಾಡಲಾಗುವುದು ಎಂದರು.
ಅಪರ ಜಿಲ್ಲಾಧಿಕಾರಿ ಡಾ. ಪ್ರಜ್ಞಾ ಅಮ್ಮೆಂಬಳ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಕಿಶೋರ್.ಕೆ, ಕಾಲೇಜು ಶಿಕ್ಷಣ ವಿಷೇಶಾಧಿಕಾರಿ ಜಯಕರ ಭಂಡಾರಿ, ನಿಟ್ಟೆ ವಿಶ್ವವಿದ್ಯಾನಿಲಯದ ನೋಡಲ್ ಅಧಿಕಾರಿ ಡಾ. ದಾನೇಶ್ ಹಾಗೂ ಇತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು