2:00 AM Thursday15 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್ ಅಹಮದ್ ಪತ್ರ

14/08/2026, 22:01

ಬೆಂಗಳೂರು(reporterkarnataka.com): ಸಚಿವ ಜಮೀರ್​​ ಅಹ್ಮದ್​ ಖಾನ್​ ಅವರು ಅಚ್ಚರಿಯ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ. ತಮಗೆ ನೀಡಲಾಗಿರುವ ವಿಜಯನಗರ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಬೇಡ ಎಂದು ಸಿಎಂ ಡಿಕೆ ಶಿವಕುಮಾರ್​ ಅವರಿಗೆ ಪತ್ರ ಬರೆದಿದ್ದಾರೆ.ಜಮೀರ್ ಅವರು ಬರೆದಿರುವ ಪತ್ರ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

*ಜಮೀರ್​ ಅವರು ಬರೆದ ಪತ್ರದಲ್ಲಿ ಏನಿದೆ?*
ನನ್ನನ್ನು ವಿಜಯನಗರ ಜಿಲ್ಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣದ ಹೊಣೆಗಾರಿಕೆಯನ್ನು ನೀಡಿರುವುದು ಸರಿಯಷ್ಟೇ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಜಿಬಿಎ ಸೇರಿದಂತೆ ಅನೇಕ ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಸಭೆ ಉಪಚುನಾವಣೆ ಹಾಗೂ ಪಕ್ಷ ಸಂಘಟನೆಯ ದೃಷ್ಟಿಯಿಂದ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನಿಭಾಯಿಸಲು ಸಮಯದ ಅಭಾವ ಇರುತ್ತದೆ. ಆದುದರಿಂದ ನನಗೆ ರಾಜ್ಯದ ಯಾವುದೇ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನೀಡದಂತೆ ತಮ್ಮಲ್ಲಿ ಕೋರಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್​ಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು