10:31 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ ತೀರ್ಮಾನ

19/06/2026, 21:17

ಬೆಂಗಳೂರು(reporterkarnataka.com): ರಾಜ್ಯದ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯುತ್ತಿರುವ ಲಕ್ಷಾಂತರ ಫಲಾನುಭವಿಗಳಿಗೆ ಡಿ.ಕೆ. ಶಿವಕುಮಾರ್‌ ನೇತೃತ್ವದ ಸರ್ಕಾರ ದೊಡ್ಡ ಸಮಾಧಾನಕರ ಸುದ್ದಿಯೊಂದನ್ನು ನೀಡಿದೆ. ಗ್ಯಾರಂಟಿ ಯೋಜನೆಗಳ ನಿಯಮಾವಳಿಗಳ ಪರಿಷ್ಕರಣೆಗಾಗಿ ಯಾವುದೇ ಫಲಾನುಭವಿಯೂ ಮತ್ತೊಮ್ಮೆ ಹೊಸದಾಗಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂಬ ಅತ್ಯಂತ ಪ್ರಮುಖ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಜನರಿಗೆ ನೆಮ್ಮದಿ ನೀಡಿದ ಸರ್ಕಾರದ ನಿರ್ಧಾರ
ಗ್ಯಾರಂಟಿ ಯೋಜನೆಗಳ ಸಮಗ್ರ ಪರಿಷ್ಕರಣೆ ಪೂರ್ವಭಾವಿಯಾಗಿ ಮುಖ್ಯಮಂತ್ರಿಗಳು ಶುಕ್ರವಾರ ವಿಧಾನಸೌಧದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಪದಾಧಿಕಾರಿಗಳು ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಮಹತ್ವದ ಪೂರ್ವಭಾವಿ ಸಭೆ ನಡೆಸಿದರು. ಈ ಸಭೆಯಲ್ಲಿ ಸಾರ್ವಜನಿಕರಿಗೆ ಅನಗತ್ಯ ತೊಂದರೆ ನೀಡುವುದನ್ನು ತಪ್ಪಿಸಲು ಮರು ಅರ್ಜಿ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಲಾಯಿತು. ಇದರ ಬದಲಾಗಿ, ಪ್ರಸ್ತುತ ಸೌಲಭ್ಯ ಪಡೆಯುತ್ತಿರುವ ಹಾಲಿ ಫಲಾನುಭವಿಗಳ ದಾಖಲೆಗಳು ಹಾಗೂ ಅರ್ಹತೆಗಳನ್ನು ಆಡಳಿತಾತ್ಮಕ ಮಟ್ಟದಲ್ಲೇ ಮರುಪರಿಶೀಲನೆ ಮಾಡಲು ಸರ್ಕಾರ ಮುಂದಾಗಿದೆ.
ಈಗಾಗಲೇ ಗ್ಯಾರಂಟಿ ಹಣ ಪಡೆಯುತ್ತಿರುವವರ ಪೈಕಿ ಯಾರು ಅರ್ಹರು ಮತ್ತು ಯಾರು ಅನರ್ಹರು ಎಂಬುದನ್ನು ಪತ್ತೆಹಚ್ಚಲು ಈ ಪರಿಶೀಲನೆ ನಡೆಸಲಾಗುತ್ತಿದೆ. ಆದರೆ, ಈ ಮರುಪರಿಶೀಲನಾ ಪ್ರಕ್ರಿಯೆಯನ್ನು ಯಾವ ಇಲಾಖೆಯ ಅಧಿಕಾರಿಗಳು ನಡೆಸಬೇಕು ಹಾಗೂ ಯಾವ ಮಾನದಂಡಗಳ ಆಧಾರದ ಮೇಲೆ ಜಾರಿಗೊಳಿಸಬೇಕು ಎಂಬುದರ ಕುರಿತು ಸಂಪೂರ್ಣ ರೂಪುರೇಷೆ ಸಿದ್ಧಪಡಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಕುರಿತಾದ ಅಂತಿಮ ಮಾರ್ಗಸೂಚಿಯನ್ನು ಮುಂಬರುವ ಮೂರು ದಿನಗಳ ಒಳಗಾಗಿ ಸಿದ್ಧಪಡಿಸಿ ತಮಗೆ ಸಲ್ಲಿಸಬೇಕು ಎಂದು ಸಿಎಂ ಗಡುವು ವಿಧಿಸಿದ್ದಾರೆ. ಇದರಿಂದಾಗಿ ಸಾರ್ವಜನಿಕರು ಮತ್ತೊಮ್ಮೆ ಸೈಬರ್ ಸೆಂಟರ್‌ಗಳ ಮುಂದೆ ಸಾಲು ನಿಲ್ಲುವ ಆತಂಕ ದೂರಾದಂತಾಗಿದೆ.

*ಈ ರಾಜ್ಯದ ಯೋಜನೆಗಳು ನಮ್ಮ ನೆಲದ ಫಲಾನುಭವಿಗಳಿಗೆ ಮಾತ್ರ ಸಿಗಲಿ:*
ಗೃಹಜ್ಯೋತಿ ಯೋಜನೆ ಜಾರಿಯಾಗುವಾಗ ವಹಿಸಿದ್ದ ಕಟ್ಟುನಿಟ್ಟಿನ ಮುನ್ನೆಚ್ಚರಿಕೆಯನ್ನು ಇತರೆ ಯೋಜನೆಗಳಲ್ಲೂ ಅನುಸರಿಸಿದ್ದರೆ ದುರುಪಯೋಗ ತಡೆಯಬಹುದಿತ್ತು ಎಂದ ಸಿಎಂ, ಬ್ಯಾಂಕ್ ಸಾಲದ ಕಾರಣಕ್ಕಾಗಿ ಖಾತೆ ಬದಲಾಯಿಸಿರುವ ಗೃಹಿಣಿಯರಿಗೆ ತೊಂದರೆ ನೀಡದಂತೆ ತಿಳಿಸಿದರು. ಹಾಗೆಯೇ ಹಣ ಜಮೆಯಾದ ತಕ್ಷಣ ಮಹಿಳೆಯರ ಮೊಬೈಲ್‌ಗೆ ವಾಯ್ಸ್ ಮೆಸೇಜ್ ಕಳುಹಿಸುವ ವ್ಯವಸ್ಥೆ ಜಾರಿಗೆ ತರಲು ಸೂಚಿಸಿದ ಅವರು, ಆರ್ಥಿಕವಾಗಿ ಸಬಲರಾಗಿರುವ ಯಾರಾದರೂ ಸ್ವಯಂಪ್ರೇರಿತರಾಗಿ ಗ್ಯಾರಂಟಿ ಬಿಟ್ಟುಕೊಟ್ಟರೆ ಅಂಥವರನ್ನು ಪ್ರೋತ್ಸಾಹಿಸಬೇಕು ಎಂದರು. ಇದೇ ವೇಳೆ ಕೇಂದ್ರ ಸರ್ಕಾರದ ತಪ್ಪು ನೀತಿಗಳಿಂದಾಗಿ ಬಡವರು ಮತ್ತು ಮಧ್ಯಮ ವರ್ಗದವರ ಮೇಲೆ ಬೀಳುತ್ತಿರುವ ಬೆಲೆ ಏರಿಕೆಯ ಬಿಸಿ ಹಾಗೂ ದೇಶದ ತಲಾ ಆದಾಯ ಕುಸಿತದ ಬಗ್ಗೆಯೂ ಸಭೆಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು