10:14 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ರಾಹುಲ್ ಗಾಂಧಿ ಜತೆ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

13/01/2026, 20:11

ಮೈಸೂರು(reporterkarnataka.com): ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು ಮಾರ್ಗ ಮಧ್ಯೆ ಭೇಟಿ ಮಾಡಲಾಗಿದೆ. ಸಂಜೆ ದೆಹಲಿಗೆ ತೆರಳುವಾಗಲೂ ಬೀಳ್ಕೊಡಲಾಗುವುದು ಎಂದರು.

*ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಗೊಂದಲವಿಲ್ಲ:*
ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಗೊಂದಲಗಳಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ ಎಂದರು.
ಪಕ್ಷದ ಶಾಸಕರೇ ಈ ಬಗ್ಗೆ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಶಾಸಕರಿಗೆ ಈ ಕುರಿತು ತಿಳಿದಿರುವುದಿಲ್ಲ. ನಾನು ಅಥವಾ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಬೇಕು ಎಂದು ಹೇಳಿದರು.

*ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ:*
ಅಧಿಕಾರ ಹಂಚಿಕೆ ವಿಚಾರದಲ್ಲಿ ಅಂತಿಮವಾಗಿ ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು. ಶಾಸಕರಿಗಿಂತ ಹೆಚ್ಚಾಗಿ ಮಾಧ್ಯಮಗಳೇ ಈ ಕುರಿತು ಹೆಚ್ಚು ಮಾತನಾಡುತ್ತಿವೆ ಎಂದು ಮುಖ್ಯಮಂತ್ರಿ ನುಡಿದರು.

*ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸರ್ಕಾರ ಸಿದ್ಧ:*
ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಬಿಜೆಪಿ ಜೆಡಿಎಸ್ ನಿಂದ ಪಾಲಿಕೆ ಚುನಾವಣೆಗಳಲ್ಲಿ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

*ಮಾರ್ಚ್ ಮೊದಲ ವಾರದಲ್ಲಿ ಬಜೆಟ್:*
ಬಹುತೇಕ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಮಾಧ್ಯಮಗಳ ಪ್ರಶ್ನಿಗೆ ಉತ್ತರಿಸಿದರು.

*ಫೆಬ್ರವರಿ 13ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶ ನಡೆಸುವ ಬಗ್ಗೆ ಚಿಂತನೆ:*
ಮುಖ್ಯಮಂತ್ರಿಯಾಗಿ ಸಾವಿರ ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಫೆಬ್ರವರಿ 13ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶವನ್ನು ಆಯೋಜಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

*ಎಚ್. ಡಿ.ಕುಮಾರಸ್ವಾಮಿ ವರ್ತನೆಯನ್ನು ಗಮನಿಸುವುದಿಲ್ಲ:*
ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ ಅವರು ರಾಜ ರಾಜಕಾರಣಕ್ಕೆ ಮರಳುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಈಗ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು , ಕ್ರಿಯಾಶೀಲರಾಗಿದ್ದಾರೆ. ಅವರ ವರ್ತನೆ, ಹಾವಭಾವ ಇವುಗಳನ್ನು ಮಾಧ್ಯಮಗಳೇ ಗಮನಿಸಬೇಕು ನಾವು ಗಮನಿಸುವುದಿಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು