5:50 AM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ನಾಮಪತ್ರ ಸಲ್ಲಿಕೆಗೆ ಮುನ್ನ ಕ್ಯಾ. ಬೃಜೇಶ್ ಚೌಟರಿಗೆ ಹರಸಿದ ‘ನಾರೀಶಕ್ತಿ’: ಆರತಿ ಬೆಳಗಿ, ತಿಲಕವಿಟ್ಟ ಮಹಿಳೆಯರು

04/04/2024, 02:13

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬೃಜೇಶ್ ಚೌಟ ಅವರು ನಾಳೆ (ಏ.4) ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಮಹಿಳೆಯರು, ತಾಯಂದಿರ ಬೆಂಬಲದ ಸಂಕೇತವಾಗಿ ಚುನಾವಣಾ ಠೇವಣಿಯ ಮೊತ್ತಕ್ಕೆ ಕಿರು ದೇಣಿಗೆಗಳನ್ನು ಸಲ್ಲಿಸಲಾಯಿತು.

ಪಕ್ಷದ ಚುನಾವಣಾ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಅಭ್ಯರ್ಥಿ ಕ್ಯಾ. ಚೌಟರಿಗೆ ಮಹಿಳೆಯರು ಆರತಿ ಎತ್ತಿ, ತಿಲಕವಿಟ್ಟು,, ದೇಣಿಗೆ ನೀಡಿ ಗೆದ್ದು ಬರುವಂತೆ ಹರಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು, ಇಂದು ಹಿಂದೂ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ ಪುಣ್ಯತಿಥಿ. ಶಿವಾಜಿ ಮಹಾರಾಜರ ಪ್ರೇರಣೆಯಂತೆ ಹಿಂದುತ್ವದ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರವನ್ನು ಪ್ರತಿನಿಧಿಸಲು ಮಾಜಿ ಸೈನಿಕನಿಗೆ ಅವಕಾಶ ನೀಡಿದ್ದಾರೆ. ನಾರೀಶಕ್ತಿ, ಮಾತೃಶಕ್ತಿಯನ್ನು ಗೌರವಿಸುವ ಬಿಜೆಪಿಗೆ ಇಂದು ಮಾತೆಯರು ಆಶೀರ್ವಾದ ಮಾಡುವ ಮೂಲಕ ನಾರೀ ಶಕ್ತಿಯನ್ನು ಪ್ರಶ್ನಿಸಿದವರಿಗೆ ಸೂಕ್ತ ಉತ್ತರ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವೆ ಎಂದು ನುಡಿದರು.
ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಪಕ್ಷದ ಚುನಾವಣಾ ಪ್ರಭಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಜಿಲ್ಲಾ ಸಮಿತಿ ಉಪಾಧ್ಯಕ್ಷೆ ಪೂಜಾ ಪೈ, ಪಕ್ಷದ ಕೋಶಾಧಿಕಾರಿ ಸಂಜಯ್ ಪ್ರಭು, ಚುನಾವಣಾ ಸಂಚಾಲಕ ನಿತಿನ್ ಕುಮಾರ್, ಹಿರಿಯ ನಾಯಕರಾದ ಜಗದೀಶ್ ಶೇಣವ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು