11:57 PM Friday18 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ನೋಂದಣಿಯಾಗದ ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ: ಜಿಪಂ ಸಿಇಒ ಸೂಚನೆ

03/06/2022, 22:29

ಮಂಗಳೂರು(reporterkarnataka.com): ಜಿಲ್ಲೆಯಲ್ಲಿ ಕೆ.ಪಿ.ಎಮ್.ಇ ಕಾಯ್ದೆಯಡಿ ನೋಂದಣಿಯಾಗದ ಹಾಗೂ ನವೀಕರಣಗೊಳ್ಳದ ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಅತ್ಯಂತ ಕಠಿಣ ಕ್ರಮ ಜರುಗಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಅವರು ನಗರದ ಜಿಲ್ಲಾ ಪಂಚಾಯತ್ ನ ಮಿನಿ ಸಭಾಂಗಣದಲ್ಲಿ ನಡೆದ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ತಡೆ ಕಾಯ್ದೆ 1994 ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಎಸ್ಟಾಬ್ಲಿಷ್ ಮೆಂಟ್  ಕಾಯ್ದೆಯ ಅನುಷ್ಠಾನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೆ.ಪಿ.ಎಮ್.ಇ.ಎ ಕಾಯ್ದೆ ಮತ್ತು ಕಾನೂನು ಉಲ್ಲಂಘನೆ ಮಾಡುವ ಸೆಂಟರ್ ಗಳ ಸ್ಕ್ಯಾನಿಂಗ್ ಉಪಕರಣಗಳನ್ನು ವಶಪಡಿಸಿಕೊಂಡು ಅದನ್ನು ಮುಚ್ಚಬೇಕು, ಕೆ.ಪಿ.ಎಮ್.ಇ.ಎ ಅಡಿಯಲ್ಲಿ ನೋಂದಣಿಯಾಗದ ಮತ್ತು ನವೀಕರಣವಾಗದ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ವಹಿಸಬೇಕು,

ಪ್ರಯೋಗಾಲಯದ ಮಾದರಿ ಸಂಗ್ರಹ ಕೇಂದ್ರಗಳು ಕಡ್ಡಾಯವಾಗಿ ನೋಂದಣಿಯಾಗಬೇಕು, ನೋಂದಣಿಯಾಗದ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ತಾಕೀತು ಮಾಡಿದರು.

ಅಗ್ನಿ ಹಾಗೂ ವಿದ್ಯುತ್ ನಿಂದ ಯಾವುದೇ ರೀತಿಯ ಅವಘಡಗಳಾಗದಂತೆ ಸುರಕ್ಷತಾ ಕ್ರಮಗಳ ಬಗ್ಗೆ ಎಚ್ಚರ ವಹಿಸಬೇಕು,   ಕಾಲಕಾಲಕ್ಕೆ ಅವುಗಳನ್ನು ಪರಿಶೀಲಿಸಬೇಕು, ನಿರ್ಲಕ್ಷಿಸುವ ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಬೇಕು, ಹಳೆಯ ಖಾಸಗಿ ಆಸ್ಪತ್ರೆಗಳು ಅಗ್ನಿ ಅವಘಡಗಳಿಂದ ಸುರಕ್ಷತೆ ವಹಿಸುವ ಬಗ್ಗೆ ಮಾಹಿತಿ ನೀಡಬೇಕು ಎಂದ ಅವರು, ಲಿಂಗಾನುಪಾತದ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು, ಆಸಕ್ತ ಎನ್.ಜಿ.ಓಗಳು ಅಥವಾ ಸಂಘ-ಸಂಸ್ಥೆಗಳ ಮೂಲಕ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ತಿಳಿಸಿದರು.

ಎಲ್ಲಾ ಗರ್ಭಿಣಿಯರಿಗೂ ತಾಯಿ ಕಾರ್ಡ್ ಕಡ್ಡಾಯವಾಗಿ ನೀಡಬೇಕು ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳು ಆನ್‍ಲೈನ್ ಮುಖಾಂತರ ಗರ್ಭಿಣಿಯರ ಮಾಹಿತಿಯನ್ನು ಕಡ್ಡಾಯವಾಗಿ ದಾಖಲಿಸಬೇಕೆಂದು ಅವರು ಸೂಚಿಸಿದರು.


ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ  ಡಾ. ಕಿಶೋರ್ ಕುಮಾರ್, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಹಾಗೂ ಅಧೀಕ್ಷಕ ಡಾ.ಶಾನುಭೋಗ, ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾಪ್ರಸಾದ್, ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಡಾ.ವತ್ಸಲಾ ಕಾಮತ್ ಹಾಗೂ ಜಿಲ್ಲಾ ಸಲಹಾ ಸಮಿತಿಯ ಸದಸ್ಯರು ಮತ್ತು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು