5:27 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನೂಪುರ್ ಶರ್ಮಾ ಹೇಳಿಕೆಗೆ ದೇಶದಾದ್ಯಂತ ಪ್ರತಿಭಟನೆ: ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು  ಮುಖ್ಯಮಂತ್ರಿ ಸೂಚನೆ

11/06/2022, 20:20

ಬೆಂಗಳೂರು(reporterkarnataka.com): ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಬಿಜೆಪಿ ಮುಖಂಡರಾದ ನೂಪುರ್ ಶರ್ಮಾ ನೀಡಿದ್ದ ಹೇಳಿಕೆ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ

ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ.

ಉತ್ತರಪ್ರದೇಶ, ದೆಹಲಿ, ತಲಂಗಾಣ, ಮಹಾರಾಷ್ಟ್ರ ಸೊಲ್ಲಾಪುರ ಸೇರಿದಂತೆ ದೇಶದ ಹಲವೆಡೆ ಮುಸ್ಲಿಂ ಸಮುದಾಯದ ಜನರು ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರಿಗೂ ವಿಶೇಷ ಸೂಚನೆ ನೀಡಿರುವ ಸಿಎಂ, ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಯಾವುದೇ ಭಂಗ ಉಂಟಾಗದಂತೆ ತಡೆಯಬೇಕು. ಕಾನೂನು ಕೈಗೆತ್ತಿಕೊಳ್ಳದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಭೆ ನಡೆಸಿ ಖಡಕ್ ಸೂಚನೆ ನೀಡುವಂತೆಯೂ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು