10:45 AM Friday24 - April 2026
ಬ್ರೇಕಿಂಗ್ ನ್ಯೂಸ್
ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ…

ಇತ್ತೀಚಿನ ಸುದ್ದಿ

ನೂತನ ಸಂಸದರು ಇತರ ವಿಚಾರಗಳ ಬಿಟ್ಟು ಜಿಲ್ಲೆಯ ಅಭಿವೃದ್ಧಿ, ಸಾಮರಸ್ಯಕ್ಕೆ ಪ್ರಯತ್ನಿಸಲಿ: ಪದ್ಮರಾಜ್ ಆರ್. ಪೂಜಾರಿ

05/06/2024, 23:24

ಮಂಗಳೂರು(reporterkarnataka.com): ದ.ಕ. ಲೋಕಸಭೆ ಕ್ಷೇತ್ರದ ನೂತನ ಸಂಸದರು ಇತರ ಎಲ್ಲಾ ವಿಚಾರಗಳನ್ನು ಬಿಟ್ಟು ಜಿಲ್ಲೆಯ ಅಭಿವೃದ್ಧಿಯ ಮೂಲಕ ಸಾಮರಸ್ಯದ ಗತ ವೈಭವವನ್ನು ಮರಳಿ ತರುವ ಪ್ರಯತ್ನ ಮಾಡಬೇಕು ಎಂದು ವಿರೋಚಿತ ಸೋಲು ಕಂಡ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಫಲಿತಾಂಶ ಪ್ರಕಟಗೊಂಡ ಬಳಿಕ ಬುಧವಾರ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪ್ರಥಮ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಸಂಸದರಾಗಿ ಆಯ್ಕೆಯಾದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಅಭಿನಂದಿಸಿ ಮಾತು ಮುಂದುವರಿಸಿದ ಪದ್ಮರಾಜ್ ಅವರು, ಜಿಲ್ಲೆಯ ಅಭಿವೃದ್ಧಿ ಹಾಗೂ ಕೋಮು ಸೌಹಾರ್ದಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ನೂತನ ಸಂಸದರನ್ನು ಮುಂದೆಯೂ ಎಲ್ಲಾ ರೀತಿಯಲ್ಲಿ ಬೆಂಬಲಿಸಲು ಸದಾ ಸಿದ್ಧನಿದ್ದೇನೆ ಎಂದರು.
ಕರಾವಳಿಯಲ್ಲಿ ಕಾಂಗ್ರೆಸ್‌ಗೆ ಪ್ರತಿಕೂಲವಾದ ವಾತಾವರಣದ ಮಧ್ಯೆಯೂ ಪಕ್ಷ ಉತ್ತಮ ಸಾಧನೆ ಮಾಡಿರುವ ತೃಪ್ತಿ ಇದೆ. ಟಿಕೆಟ್ ದೊರೆತ ಬಳಿಕ ಮತದಾರರನ್ನು ಭೇಟಿಯಾಗಲು ಸಿಕ್ಕಿದ ಕೆಲವೇ ದಿನಗಳ ಕಾಲಾವಧಿಯಲ್ಲಿ ಜಿಲ್ಲೆಯ 6.15 ಲಕ್ಷ ಮತದಾರರ ಮನಸ್ಸು ಗೆಲ್ಲಲು ಸಾಧ್ಯವಾಗಿರುವ ಬಗ್ಗೆ ಖುಷಿ ಇದೆ. ಜಿಲ್ಲೆಯಲ್ಲಿ ಪಕ್ಷ ಸಂಘಟನೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಮುಂದಿನ ಒಂದೂವರೆ ವರ್ಷದ ಅವಧಿಯಲ್ಲಿ ಬೂತ್ ಮಟ್ಟದಲ್ಲಿ ಸಂಘಟಿಸುವ ಕಾರ್ಯವನ್ನು ನಡೆಸುವುದಾಗಿ ಹೇಳಿದರು.
ಸಾಮಾನ್ಯ ಕಾರ್ಯಕರ್ತನಾಗಿದ್ದ ನನಗೆ ಗೌರವ ನೀಡಿ ಪಕ್ಷದ ಹಿರಿಯ ನಾಯಕರು ಟಿಕೆಟ್ ನೀಡಿದರೆ, ಪಕ್ಷದ ಕಾರ್ಯಕರ್ತರು ಹಗಲಿರಲು ಕ್ಷೇತ್ರದಲ್ಲಿ ತನ್ನ ಗೆಲುವಿಗಾಗಿ ಶ್ರಮಿಸಿದ್ದಾರೆ. ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ. ಜಿಲ್ಲೆಯಲ್ಲಿ ಸ್ಪರ್ಧೆಗೆ ಟಿಕೆಟ್ ಪಡೆಯುವ ಸಂದರ್ಭ ಇಲ್ಲಿ ಟಿಕೆಟ್ ಪಡೆಯುವುದು ವ್ಯರ್ಥ ಎಂಬ ಮಾತು ಕೇಳಿ ಬಂದಿತ್ತು. ಮತದಾರರನ್ನು ಸಂಪರ್ಕಿಸಲು ಸಿಕ್ಕಿದ ಕೆಲವೇ ದಿನಗಳಲ್ಲಿ ಕೆಲ ಕ್ಷೇತ್ರಗಳಿಗೆ ಕೆಲ ಗಂಟೆಯ ಸಮಯವನ್ನೂ ನೀಡಲು ಸಾಧ್ಯವಾಗಿರಲಿಲ್ಲ. ಆದರೆ ಪಕ್ಷದ ನಾಯಕರು, ಕಾರ್ಯಕರ್ತರು ಕೆಲಸ ಮಾಡಿದ್ದಾರೆ. ಹಿಂದಿನ ಅಭ್ಯರ್ಥಿಗಿಂತ ಹೆಚ್ಚಿನ ಮತಗಳನ್ನು ಪಡೆದ ಬಗ್ಗೆ ಹೆಮ್ಮೆ ಇದೆ ಎಂದು ಅವರು ಹೇಳಿದರು.
ಚುನಾವಣೆಯಲ್ಲಿ ನಾನು ಸೋತಿರಬಹುದು, ಆದರೆ ಪಕ್ಷದ ಕಾರ್ಯಕರ್ತರು ನನಗೆ ನೀಡಿದ ಬೆಂಬಲವನ್ನ ಮರೆಯುವಂತಿಲ್ಲ. ನಿನ್ನೆ ರಾಷ್ಟ್ರೀಯ ನಾಯಕರು ಕರೆ ಮಾಡಿ ಶ್ಲಾಘಿಸಿ, ನನ್ನ ಸ್ಪರ್ಧೆ ಬಗ್ಗೆ ಯೂ ಫೈಟ್ ಲೈಕ್ ಎ ಲಯನ್ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾಯಕರು ಹಾಗೂ ಕಾರ್ಯಕರ್ತರ ವಿಶ್ವಾಸವನ್ನು ಉಳಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲೂ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಲಿದ್ದೇನೆ ಎಂದರು.
ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳ ಸಾಧನೆ ಉತ್ತಮವಾಗಿದೆ. ಬಿಜೆಪಿಯನ್ನ ಜನ, ಅಯೋಧ್ಯೆಯಲ್ಲೇ ಸೋಲಿಸಿದ್ದಾರೆ. ಆದರೆ ಕರಾವಳಿಯಲ್ಲಿ ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ಈ ಬಗ್ಗೆ ಆಲೋಚನೆ ಮಾಡಬೇಕಾಗಿದೆ ಎಂದು ಪದ್ಮರಾಜ್ ಹೇಳಿದರು.

ಮಾಜಿ ಸಚಿವ ಬಿ. ರಮಾನಾಥ ರೈ, ಮುಖಂಡರಾದ ಶಶಿಧರ ಹೆಗ್ಡೆ, ಶಾಹುಲ್ ಹಮೀದ್, ಶುಭೋದಯ ಆಳ್ವ, ಅಶ್ರಫ್, ಲ್ಯಾನ್ಸಿ ಲೋಟ್ ಪಿಂಟೋ, ಸಂಶುದ್ದೀನ್, ಅಬ್ದುಲ್ ಲತೀಫ್, ಅಬ್ದುಲ್ ಖಾದರ್, ಅಬ್ದುಲ್ ರವೂಫ್, ಸುಹಾನ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು