1:02 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಶಾಸಕರಷ್ಟೇ ಅಲ್ಲ ಪ್ರಭಾವಿ ಸಚಿವರಿಂದಲೂ ʼದುಡ್ಡಿಲ್ಲʼ ಮಾತು: ಸಿಎಂ ಸಿದ್ದರಾಮಯ್ಯರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಟಿ

24/06/2025, 23:25

ನವದೆಹಲಿ(reporterkarnataka.com): ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನಕ್ಕೆ ಶಾಸಕರ ಜತೆ ಈಗ ಖುದ್ದು ಗೃಹ ಸಚಿವ ಪರಮೇಶ್ವರ್‌ ಅವರೇ ಕನ್ನಡಿ ಹಿಡಿದಿದ್ದಾರೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಮತ್ತೊಂದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಬಾದಾಮಿಯಲ್ಲಿ ಗೃಹ ಸಚಿವರು, ʼಅಭಿವೃದ್ಧಿಗೆ ಸಿದ್ದರಾಮಣ್ಣನ ಹತ್ತಿರ ದುಡ್ಡಿಲ್ಲʼ ಎನ್ನುವ ಮೂಲಕ ಹಳ್ಳ ಹಿಡಿದ ರಾಜ್ಯದ ಆರ್ಥಿಕ ಸ್ಥಿತಿಗತಿಯನ್ನು ತೆರೆದಿಟ್ಟಿದ್ದಾರೆ. ರಾಜ್ಯ ಬೊಕ್ಕಸ ಬರಿದಾಗಿರುವ ಸತ್ಯ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ಇನ್ನಾದರೂ ತಮ್ಮ ಆಡಳಿತ ವೈಫಲ್ಯವನ್ನು ಒಪ್ಪಿಕೊಳ್ಳಿ ಎಂದು ಸಿಎಂಗೆ ಚಾಟಿ ಬೀಸಿದ್ದಾರೆ ಸಚಿವ ಜೋಶಿ.
ತಾವೊಬ್ಬ ಆರ್ಥಿಕ ತಜ್ಞವೆಂದೇ ಬಿಂಬಿಸಿಕೊಳ್ಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆರ್ಥಿಕ ಸುಭಿಕ್ಷವಾಗಿದ್ದ ಕರ್ನಾಟಕವನ್ನು ದಿವಾಳಿತನದತ್ತ ಕೊಂಡೊಯ್ಯುತ್ತಿದ್ದಾರೆ. ಎರಡನೇ ಬಾರಿ ಸಿಎಂ ಆಗಿ ಅಧಿಕಾರಕ್ಕೆ ಬರುತ್ತಲೇ ರಾಜ್ಯದ ಆರ್ಥಿಕತೆಯನ್ನು ಮಣ್ಣುಪಾಲು ಮಾಡಿದ್ದಾರೆ ಎಂದು ಜೋಶಿ ಕಿಡಿ ಕಾರಿದ್ದಾರೆ.

*ಭ್ರಷ್ಟಾಚಾರದಲ್ಲಿ ರಾಜ್ಯ ನಂ.1:*
ಭ್ರಷ್ಟಾಚಾರದಲ್ಲಿ ಕರ್ನಾಟಕ ಅಗ್ರ ಸ್ಥಾನದಲ್ಲಿದೆ. ಅವೈಜ್ಞಾನಿಕ ಗ್ಯಾರಂಟಿಗಳಿಂದ ರಾಜ್ಯ ಆರ್ಥಿಕ ದಿವಾಳಿಯಾಗಲಿದೆ ಎಂಬ ಸತ್ಯವನ್ನು ಸ್ವತಃ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರೇ ಹೇಳಿದ್ದರು. ಇದರ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ ʼಹಣ ವಸೂಲಿ ಆದ ಮೇಲೆ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡ್ತೀವಿʼ ಎಂಬ ಅಹಂಕಾರದ ಮಾತು ರಾಜ್ಯದ ಆರ್ಥಿಕತೆ ಅಧಃಪತನಕ್ಕೆ ಸಾಕ್ಷಿಯಾಗಿತ್ತೆಂದು ಪ್ರತಿಕ್ರಿಯಿಸಿದ್ದಾರೆ.
ಸಿಎಂ ಆಪ್ತರಾಗಿದ್ದ ಇಂಧನ ಸಚಿವ ಕೆ.ಜೆ.ಜಾರ್ಜ್ ಸಹ ಅಭಿವೃದ್ಧಿಗೆ ಹಣವಿಲ್ಲ ಎಂದೇ ಹೇಳಿದ್ದರು. ಬಳಿಕ ವಸತಿ ಇಲಾಖೆಯ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಶಾಸಕ‌ ಬಿ.ಆರ್.ಪಾಟೀಲ್ ಎಳೆ ಎಳೆಯಾಗಿ ಬಿಚ್ಚಿಟ್ಟು ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತವನ್ನು ಬೆತ್ತಲು ಮಾಡಿದರು. ಇಷ್ಟಾದರೂ ಸಿಎಂ ಸಿದ್ದರಾಮಯ್ಯ ವಸತಿ ಸಚಿವ ಜಮೀರ್‌ ಅಹ್ಮದ್‌ ಬಗ್ಗೆ ಮೃದು ಧೋರಣೆ ತೋರುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಇನ್ನು, ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ. ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ ಎಂದಿರುವ ಶಾಸಕ ರಾಜು ಕಾಗೆ ಅವರಂತೂ ಒಂದು ಹೆಜ್ಜೆ ಮುಂದೆ ಹೋಗಿ ರಾಜೀನಾಮೆಯ ಮಾತನಾಡಿದ್ದಾರೆ. ಸಾಲದ್ದಕ್ಕೆ ʼಒಂದು ಚರಂಡಿ ನಿರ್ಮಿಸಲೂ ಅನುದಾನ ಸಿಗುತ್ತಿಲ್ಲʼ ಎಂದು ಮತ್ತೊಬ್ಬ ಶಾಸಕ ಎನ್.‌ವೈ.ಗೋಪಾಲಕೃಷ್ಣ ಹೇಳಿದ್ದಾರೆ. ಸರ್ಕಾರದ ದಿವಾಳಿತನಕ್ಕೆ ನಿದರ್ಶನವಾಗಿ ಇನ್ನೆಷ್ಟು ಶಾಸಕರ ಅಸಮಾಧಾನ ಸ್ಪೋಟಗೊಳ್ಳಬೇಕು? ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು