4:42 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಕುಖ್ಯಾತ ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳನ ಬಂಧನ: ಆರೋಪಿಗೆ 3 ದಿನಗಳ ಪೊಲೀಸ್ ಕಸ್ಟಡಿ

05/12/2025, 22:25

ಮಂಗಳೂರು(reporterkarnataka.com): ನಗರ ಪೊಲೀಸರು ಕುಖ್ಯಾತ ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಯನ್ನು ಬಂಧಿಸಿದ್ದು, ಸೊತ್ತು ವಶಪಡಿಸಿಕೊಂಡಿದ್ದಾರೆ.
ಆರೋಪಿಯನ್ನು ಕೇರಳದ ತಿರುವನಂತಪುರಂನ ವಲಿಯರ್ತಲನ ವೆಲ್ಲಟ್ಟಿ ವೀಡು ನಿವಾಸಿ ಆದಿತ್ ಗೋಪಾನ್ ಅಲಿಯಾಸ್ ಮುತ್ತು ಕೃಷ್ಣ (32) ಎಂದು ಗುರುತಿಸಲಾಗಿದೆ.
ಆರೋಪಿನಿಂದ 4 ದ್ವಿಚಕ್ರ ವಾಹನಗಳು ಸೇರಿ ಎರಡು ಚಿನ್ನದ ಸರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನ. 21ರಂದು ಸಂಜೆ ಕದ್ರಿ ಬಟ್ಟಗುಡ್ಡೆ ಬಳಿ 83 ವರ್ಷ ಪ್ರಾಯದ ವಯೋವೃದ್ದ ಮಹಿಳೆಯು ತನ್ನ ಮನೆಯ ಬಳಿ ಓಣಿಯಲ್ಲಿದ್ದಾಗ ಅಪರಿತ ವ್ಯಕ್ತಿಯು ದ್ವಿಚಕ್ರ ವಾಹನದಲ್ಲಿ ಬಂದು ಚಿನ್ನದ ಸರವನ್ನು ಕಸಿದುಕೊಂಡು ಹೋದ ಬಗ್ಗೆ ಮಂಗಳೂರು ಪೂರ್ವ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿ ಪತ್ತೆ ಬಗ್ಗೆ ವಿಶೇಷ ತಂಡವನ್ನು ರಚಿಸಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು ಡಿ.4ರಂದು ಆರೋಪಿಯ ಬಗ್ಗೆ ವಿಶೇಷ ತಂಡಕ್ಕೆ ದೊರೆತ ಮಾಹಿತಿಯಂತೆ ಕದ್ರಿ ಜೋಗಿ ಮಠದ ಬಳಿ ವಾಹನ ತಪಸಾಣೆ ನಡೆಸುತ್ತಿದ್ದ ಸಮಯ ಸಂಶಯಾಸ್ಪದವಾಗಿ ದ್ವಿಚಕ್ರ ವಾಹನ ಸಂಖ್ಯೆ KA19HC6946 ಚಲಾಯಿಸಿಕೊಂಡು ಬಂದ ವ್ಯಕ್ತಿಯನ್ನು ನಿಲ್ಲಿಸಿ ಪರಿಶೀಲಿಸಿದಾಗ ಈ ವಾಹನವು ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿದ ವಾಹನವಾಗಿದ್ದು, ವಿಚಾರಿಸಿದಾಗ ಆರೋಪಿಯು ಕಳ್ಳತನ ಮಾಡಿದ ದ್ವಿ ಚಕ್ರ ವಾಹನವನ್ನು ಬಳಸಿಕೊಂಡು ವಯೋವೃದ್ದರು, ಒಂಟಿ ಮಹಿಳೆಯರನ್ನು ಗುರುತಿಸಿ ಸರಗಳ್ಳತನ ಮಾಡಿರುವುದ ಬೆಳಕಿಗೆ ಬಂದಿದೆ. ಆರೋಪಿಯನ್ನು ಶುಕ್ರವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಮುಂದಿನ ತನಿಖೆಗಾಗಿ ಆರೋಪಿಯನ್ನು 3 ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆದುಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು