4:36 AM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ನ.30ರಿಂದ ಹಳೆ ಡಿಸಿ ಕಚೇರಿ ಕಟ್ಟಡದಲ್ಲಿ ಪಾರಂಪರಿಕ ಸಪ್ತಾಹ: ಚಿತ್ರಕಲಾ ಸ್ಪರ್ಧೆ, ಪಾರಂಪರಿಕ ನಡಿಗೆ, ಮುಕ್ತ ಸಂವಾದ

28/11/2024, 14:58

ಮಂಗಳೂರು(reporterkarnataka.com): ಹಲವಾರು ವರ್ಷಗಳ ಇತಿಹಾಸವುಳ್ಳ ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಕಟ್ಟಡದ ಆವರಣದಲ್ಲಿ ನವೆಂಬರ್ 30 ಹಾಗೂ ಡಿಸೆಂಬರ್ 1ರಂದು ಪಾರಂಪರಿಕ ಸಪ್ತಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ.


ಬ್ರಿಟೀಷರ ಕಾಲದಲ್ಲಿ ಕಲೆಕ್ಟರ್ ಆಫೀಸ್ ಎಂದೇ ಕರೆಯಲ್ಪಡುತ್ತಿದ್ದ ಈ ಕಟ್ಟಡವು ಒಂದು ಕಾಲದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ಹಿಂದಿನ ಕೆನರಾ ಜಿಲ್ಲೆಯ ಆಡಳಿತ ಕೇಂದ್ರಸ್ಥಾನವಾಗಿತ್ತು. ಸ್ವಾತಂತ್ರ್ಯಾಪೂರ್ವದಲ್ಲಿ ಬ್ರಿಟೀಷ್ ಅಧಿಕಾರಿಗಳಿಗೆ ಇದು ಕಚೇರಿಯಾಗಿತ್ತು. ನಂತರವೂ ಜಿಲ್ಲಾಧಿಕಾರಿ ಕಚೇರಿ ಇಲ್ಲಿಯೇ ಕಾರ್ಯಾಚರಿಸುತ್ತಿತ್ತು. ಬಳಿಕ ಪಕ್ಕದಲ್ಲಿಯೇ ಹೊಸ ಕಟ್ಟಡವಾದ ಬಳಿಕ ಜಿಲ್ಲಾಧಿಕಾರಿ ಕಚೇರಿ ಅಲ್ಲಿಗೆ ಸ್ಥಳಾಂತರಗೊಂಡಿದ್ದರೂ, ಹಳೇ ಕಟ್ಟಡವನ್ನು ಹಾಗೆಯೇ ಉಳಿಸಿಕೊಂಡು ಬರಲಾಗಿದೆ. ಇಂದಿಗೂ ಗಟ್ಟಿಮುಟ್ಟಾಗಿ ಸುಭದ್ರ ಸ್ಥಿತಿಯಲ್ಲಿರುವ ಈ ಕಟ್ಟಡವು ಜಿಲ್ಲೆಯ ಆಡಳಿತ ಕ್ಷೇತ್ರದ ಭವ್ಯ ಇತಿಹಾಸಕ್ಕೆ ಸಾಕ್ಷಿಯಾಗಿ ನಿಂತಿದೆ.
ಈ ಕಟ್ಟಡದ ಪಾರಂಪರಿಕ ಮತ್ತು ಭವ್ಯ ಇತಿಹಾಸವನ್ನು ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಇದೇ ಸ್ಥಳದಲ್ಲಿ ನವೆಂಬರ್ 30 ಹಾಗೂ ಡಿಸೆಂಬರ್ 1ರಂದು ಪಾರಂಪರಿಕ ಸಪ್ತಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ. ನವೆಂಬರ್ 30ರಂದು ಬೆಳಿಗ್ಗೆ 10ರಿಂದ ಸರಕಾರಿ ಶಾಲೆಗಳ 3ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ನಡೆಯಲಿದೆ. ವಿದ್ಯಾರ್ಥಿಗಳು ತಮ್ಮ ಆಯ್ಕೆಯ ಯಾವುದೇ ಪಾರಂಪರಿಕ ಸ್ಮಾರಕಗಳನ್ನು ಈ ಸ್ಪರ್ಧೆಯಲ್ಲಿ ಬಿಡಿಸಬಹುದಾಗಿದೆ. ಅಂದು ಮಧ್ಯಾಹ್ನ 2ರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಹಳೇ ಜಿಲ್ಲಾಧಿಕಾರಿ ಕಟ್ಟಡದ ಒಳ ಮತ್ತು ಹೊರ ಭಾಗದ ಆವರಣದ ಬಗ್ಗೆ ತಮ್ಮ ದೃಷ್ಟಿಕೋನದ ಕಲಾವಿನ್ಯಾಸ ಸ್ಪರ್ಧೆ ನಡೆಯಲಿದೆ. ಈ ಕಟ್ಟಡವನ್ನು ಇನ್ನಷ್ಟು ಆಕರ್ಷಿಸಲು ನವೀನ ವಿನ್ಯಾಸವನ್ನು ಸ್ಪರ್ಧಾಳುಗಳು ತಮ್ಮ ಕಲೆಯಲ್ಲಿ ಪ್ರದರ್ಶಿಸಬಹುದಾಗಿದೆ.
ಬೆಳಿಗ್ಗೆ 11ರಿಂದ 12 ಹಾಗೂ ಮಧ್ಯಾಹ್ನ 3ರಿಂದ 4ರ ವರೆಗೆ ಪಾರಂಪರಿಕ ನಡಿಗೆ, ಸಂಜೆ 4:30ರಿಂದ ಮುಕ್ತ ಸಂವಾದ ನಂತರ ಬಹುಮಾನ ವಿತರಣೆ, ಸಂಜೆ 6ರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಎರಡು ದಿನಗಳ ಕಾಲ ಬೆಳಿಗ್ಗೆ 10ರಿಂದ ಸಂಜೆ 6 ರವರೆಗೆ ಪಾರಂಪರಿಕ ವಸ್ತು ಪ್ರದರ್ಶನ ನಡೆಯಲಿದೆ.
ಮುಂದಿನ ದಿನಗಳಲ್ಲಿ ಈ ಪಾರಂಪರಿಕ ಕಟ್ಟಡದ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು, ಪ್ರವಾಸೋದ್ಯಮ ಆಕರ್ಷಿಸುವ ನಿಟ್ಟಿನಲ್ಲಿ ಚಟುವಟಿಕೆಗಳನ್ನು ನಡೆಸಲು ಉದ್ದೇಶಿಸ

ಇತ್ತೀಚಿನ ಸುದ್ದಿ

ಜಾಹೀರಾತು