ಇತ್ತೀಚಿನ ಸುದ್ದಿ
ನ.19ರಂದು ಆಲ್ ಇಂಡಿಯಾ ಅಂತರ್ ವಿವಿ ಕ್ರಾಸ್ ಕಂಟ್ರಿ ಚಾಂಪಿಯನ್‍ಶಿಪ್
16/11/2024, 23:47

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಉಪ್ಪಿನಂಗಡಿ ಹಾಗೂ ಭಾರತೀಯ ವಿಶ್ವವಿದ್ಯಾನಿಲಯಗಳ ಸಂಘದ ಆಶ್ರಯದಲ್ಲಿ, ಪುರುಷರಿಗಾಗಿ ಆಲ್ ಇಂಡಿಯಾ ಇಂಟರ್-ಯೂನಿವರ್ಸಿಟಿ ಕ್ರಾಸ್ ಕಂಟ್ರಿ ಚಾಂಪಿಯನ್‍ಶಿಪ್ ಪಂದ್ಯಾಟವು ನವೆಂಬರ್ 19 ರಂದು ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ನೆರವೇರಿಸಲಿದ್ದು, ಗೌರವ ಅತಿಥಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ, ಮಂಗಳೂರು ವಿಶ್ವವಿದ್ಯಾನಿಲಯ ಉಪಕುಲಪತಿ ಪಿ.ಎಲ್. ಧರ್ಮ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅದ್ಯಕ್ಷತೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಹಿಸಲಿದ್ದಾರೆ. ಮದ್ಯಾಹ್ನ 2 ಗಂಟೆಗೆ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಿಂದ ಜಿಎಫ್‍ಜಿಸಿ, ಉಪ್ಪಿನಂಗಡಿ ಮೈದಾ£ವರೆಗೆ ಅದ್ಧೂರಿ ಮೆರವಣಿಗೆ ನಡೆಯಲಿದೆ.