10:39 AM Wednesday19 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ನವಂಬರ್ 1ರಂದು ರಂಜಿತ್ ಸಿ ಬಜಾಲ್ ನಿರ್ದೇಶನದ ’90 ಎಮ್ ಎಲ್’ ತುಳು ಸಿನಿಮಾಕ್ಕೆ ಮುಹೂರ್ತ

26/10/2024, 22:51

ಮಂಗಳೂರು(reporterkarnataka.com): ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ. ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾಗುತ್ತಿರುವ “90 ಎಮ್ ಎಲ್” ತುಳು ಚಲನ ಚಿತ್ರದ ಮುಹೂರ್ತ ಸಮಾರಂಭವು ನವಂಬರ್ 1ರಂದು ಶುಕ್ರವಾರ ಬೆಳಿಗ್ಗೆ 9.30 ಕ್ಕೆ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಲಿದೆ.
ವಿನೀತ್ ಕುಮಾರ್ ಅಭಿನಯದ 90 ಎಮ್ ಎಲ್ ಸಿನಿಮಾದಲ್ಲಿ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ರೋಷನ್ ಶೆಟ್ಟಿ, ದೀಪಕ್ ರೈ ಪಾಣಾಜೆ, ಉಮೇಶ್ ಮಿಜಾರ್, ರವಿರಾಮ‌ ಕುಂಜ, ಪುಷ್ಪರಾಜ್ ಬೊಳ್ಳೂರು ಅಭಿನಯಿಸಲಿದ್ದಾರೆ.
ರಂಜಿತ್ ಸಿ. ಬಜಾಲ್ ಚಿತ್ರಕತೆ, ನಿರ್ದೇಶನ, ಸಂಭಾಷಣೆ ತುಳಸಿದಾಸ್ ಮಂಜೇಶ್ವರ್, ಛಾಯಾಗ್ರಾಹಣ ಅರ್ಜುನ್ ಎಂವಿ, ಸಂಗೀತ ಸೃಜನ್ ಕುಮಾರ್ ತೋನ್ಸೆ, ಸಂಕಲನ ವಿಶಾಲ್ ದೇವಾಡಿಗ, ಪಿಆರ್ ಒ ಬಾಳ ಜಗನ್ನಾಥ ಶೆಟ್ಟಿ, ಡಿಸೈನ್ ಆಚಾರ್ಯ ಗುರು. ಮಂಗಳೂರು ಸುತ್ತಮುತ್ತ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ಸಿನಿಮಾ ನಿರ್ದೇಶಕ ರಂಜಿತ್ ಸಿ ಬಜಾಲ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು